ಶಿಕ್ಷಣದ ಜತೆಯಲ್ಲಿ ಸಂಸ್ಕಾರ ಅರಿವು ಅವಶ್ಯ

ಶಿಕ್ಷಣದ ಜತೆಯಲ್ಲಿ ಸಂಸ್ಕಾರ ಅರಿವು ಅವಶ್ಯ

ಶಿವಮೊಗ್ಗ | 5 ಫೆಬ್ರವರಿ 2025 | ಡಿಜಿ ಮಲೆನಾಡು.ಕಾಂ

ಮಕ್ಕಳಿಗೆ ಶಿಕ್ಷಣದ ಜತೆಯಲ್ಲಿ ಸಂಸ್ಕಾರದ ಅರಿವು ಮೂಡಿಸಬೇಕು ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ಗುರುಪುರದಲ್ಲಿರುವ ಬಿಜಿಎಸ್ ಶಾಲಾ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಗುರು ಹಿರಿಯರನ್ನು ಗೌರವಿಸಬೇಕು. ಉತ್ತಮವಾಗಿ ಅಧ್ಯಯನ ಮಾಡಬೇಕು. ಜೀವನದಲ್ಲಿ ಯಶಸ್ಸು ಸಾಧಿಸಬೇಕು ಎಂದು ಸಲಹೆ ನೀಡಿದರು.

ಶಾಸಕ ಎಸ್‌.ಎನ್‌.ಚನ್ನಬಸಪ್ಪ ಮಾತನಾಡಿ, ಗುರುಗಳ ಮಾರ್ಗದರ್ಶನದಿಂದ ಗುರಿ ತಲುಪಲು ಸಾಧ್ಯ. ವಿದ್ಯಾರ್ಥಿಗಳು ಗುರುಗಳ ಸಲಹೆ ಸೂಚನೆಯಂತೆ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.

ರಾಜ್ಯ ಹಾಗೂ ರಾಷ್ಟ್ರಮಟ್ಟದ ವಿವಿಧ ಕ್ರೀಡೆಗಳಲ್ಲಿ ಸಾಧನೆ ಮಾಡಿದ ಶಾಲಾ ಕಾಲೇಜಿನ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಪೂಜ್ಯರಿಂದ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಎಸ್ ಎಸ್ ಎಲ್ ಸಿ ಮತ್ತು ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಶಾಲಾ ಮಕ್ಕಳಿಂದ ಬಿಜಿಎಸ್ ಕಲಾ ಸಂಭ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : [email protected]

Click on below this picture, Like & Follow Facebook Page ” Digi Malenadu “

ಶ್ರೀ ಸಾಯಿನಾಥ ಸ್ವಾಮೀಜಿ, ಪಾಲಿಕೆ ಕಂದಾಯ ವಿಭಾಗದ ಆಯುಕ್ತ ನಾಗೇಂದ್ರ  ಡಿ., ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆ ನಿರ್ದೇಶಕರು, ಪ್ರಾಚಾರ್ಯರು, ಸಿಬ್ಬಂದಿ, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

ಸಕಾಲದಲ್ಲಿ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳುವುದು ಅವಶ್ಯಕ

digimalenadu

ಶಿವಮೊಗ್ಗ
error: Content is protected !!