ಭದ್ರಾವತಿ ಆಕಾಶವಾಣಿ ವಜ್ರಮಹೋತ್ಸವದ ಸಂಭ್ರಮ

ಶಿವಮೊಗ್ಗ | 9 ಫೆಬ್ರವರಿ 2025 | ಡಿಜಿ ಮಲೆನಾಡು.ಕಾಂ
ಆಕಾಶವಾಣಿ ಕಾರ್ಯಕ್ರಮಗಳು ಹೆಚ್ಚು ನಿಖರ ಮತ್ತು ಸ್ಪಷ್ಟತೆಯಿಂದ ಕೂಡಿದ್ದು, ತನ್ನ ಮಹತ್ವ ಉಳಿಸಿಕೊಂಡು ಬಂದಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ. ಶ್ರೀಕಂಠ ಕೂಡಿಗೆ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ಆಕಾಶವಾಣಿ ಭದ್ರಾವತಿ ಕೇಂದ್ರಕ್ಕೆ 60ವರ್ಷ ತುಂಬಿದ ಹಿನ್ನಲೆಯಲ್ಲಿ ಆಕಾಶವಾಣಿ ಆವರಣದಲ್ಲಿ ಹಮ್ಮಿಕೊಂಡ ವಜ್ರಮಹೋತ್ಸದ ಕಾರ್ಯಕ್ರಮದಲ್ಲಿ ಮಾತನಾಡಿ, 1965ರಲ್ಲಿ ಆರಂಭಗೊಂಡ ಆಕಾಶವಾಣಿ ಅಂದಿನಿಂದಲೂ ಈವರೆಗೆ ಹಲವು ನಿರ್ದೇಶಕರು ಹಾಗು ಸಿಬ್ಬಂದಿ ತಮ್ಮದೆ ಆದ ಕೊಡುಗೆ ನೀಡಿದ್ದಾರೆ. ಎಸ್.ಆರ್.ಭಟ್ ಅವರ ಕಲ್ಪನೆಯ ಹಲವು ವಿಶೇಷ ಸಮಾಜಮುಖಿ ಕಾರ್ಯಕ್ರಮಗಳು ದೇಶವಿದೇಶಗಳಲ್ಲಿ ಭದ್ರಾವತಿ ಆಕಾಶವಾಣಿ ಕಾರ್ಯಕ್ರಮಗಳ ಕಂಪು ಪಸರಿಸಿವೆ ಎಂದು ತಿಳಿಸಿದರು.
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಸಚಿವ ಡಾ. ಕೆ.ಸಿ.ಶಶಿಧರ್ ಮಾತನಾಡಿ, ದೇಶದಲ್ಲಿ ಕೃಷಿಗೆ ಸಂಬಂಧಿಸಿ ರೈತರಿಗೆ ಉಪಯುಕ್ತ ಮಾಹಿತಿಯನ್ನು ನೀಡಿ ಸ್ವಾವಲಂಬನೆ ಬದುಕಿಗೆ ಬಹುದೊಡ್ಡ ಕೊಡುಗೆ ಆಕಾಶವಾಣಿ ನೀಡಿದೆ ಎಂದರು.
ಆಕಾಶವಾಣಿ ಭದ್ರಾವತಿ ಮತ್ತು ಚಿತ್ರದುರ್ಗ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥ ಸುಬ್ರಾಯ ಆರ್ ಭಟ್ ಮಾತನಾಡಿ, ಆಕಾಶವಾಣಿಯ ಪ್ರಸರಣ ಸಾಮರ್ಥ್ಯ, ಶಿವಮೊಗ್ಗದಲ್ಲಿ ಸ್ಥಾಪನೆಯಾಗುತ್ತಿರುವ 10 ಕಿಲೊವ್ಯಾಟ್ ಸಾಮರ್ಥ್ಯದ ಎಫ್ ಎಂ ಟ್ರಾನ್ಸ್‌ಮೀಟರ್‌ನಿಂದ ಹೆಚ್ಚು ವ್ಯಾಪ್ತಿಯನ್ನು ತಲುಪಲಿದೆ. ಇದಕ್ಕಾಗಿ ಶಿವಮೊಗ್ಗದ ಸಂಸದ ಬಿ.ವೈ.ರಾಘವೇಂದ್ರ ವಿಶೇಷ ಪ್ರಯತ್ನ ಮಾಡಿದ್ದಾರೆ. ಈ ಹಂತದಲ್ಲಿ ಹೊಸ ಹೊಸ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.
ಕುವೆಂಪು ವಿಶ್ವವಿದ್ಯಾಲಯದ ಉಪಕುಲಸಚಿವ ಡಾ. ಕೆ.ಆರ್.ಮಂಜುನಾಥ್, ಅಂಬೇಡ್ಕರ್ ಅಧ್ಯಯನ ಸಂಸ್ಥೆ ನಿರ್ದೇಶಕ ಡಾ. ನೆಲ್ಲಿಕಟ್ಟೆ ಸಿದ್ದೇಶ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್, ಉಪಾಧ್ಯಕ್ಷ ಜಿ.ವಿಜಯಕುಮಾರ್, ಪಿ.ಇ.ಎಸ್ ಸಮೂಹ ಸಂಸ್ಥೆ ಮುಖ್ಯ ಸಂಯೋಜಕ ಡಾ. ನಾಗರಾಜ್ ಆರ್, ಶಿವಮೊಗ್ಗದ ಐಎಂಎ ಕಾರ್ಯದರ್ಶಿ, ಸುಬ್ಬಯ್ಯ ಸಮೂಹ ಸಂಸ್ಥೆ ಸಿಇಒ ಡಾ. ವಿನಯಾ ಶ್ರೀನಿವಾಸ್ ಉಪಸ್ಥಿತರಿದ್ದರು.
ಕಥಾ ಸ್ವರ್ಧೆಯಲ್ಲಿ ವಿಜೇತರಾದ ದೀಪ್ತಿ ಭದ್ರಾವತಿ, ಶ್ರೇಯ ಕೆ ಎಂ ಹಾಗೂ ಸಂತೆಬೆನ್ನೂರು ಫೈಜ್ ನಟ್ರಾಜ್ ಮತ್ತು ಪಾಕಸ್ಪರ್ಧೆಯಲ್ಲಿ ವಿಜೇತರಾದ ಗಿರಿಜಾ ಹೆಗಡೆ, ಎಂ.ಎನ್.ಸುಶೀಲ, ಡಾ. ಮೈತ್ರೇಯಿ ಅವರಿಗೆ ಪ್ರಶಸ್ತಿ ಪತ್ರ ನೀಡಲಾಯಿತು. ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್.ಚಾಂದ್‌ವಾನಿ, ಕೆ.ಎಸ್. ಸುರೇಶ್, ಎಲ್.ಪ್ರವೀಣ್‌ಕುಮಾರ್, ಮುತ್ತಣ್ಣ ಸುಬ್ಬರಾವ್, ವಿಕಾಸ್ ಬಸೀರ್ ಅವರು 60 ವರ್ಷದ ಸವಿನೆನಪಿಗೆ 60 ಸಸಿಗಳನ್ನು ವಿತರಿಸಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ಆಕಾಶವಾಣಿ ಕೇಂದ್ರದಲ್ಲಿ ನಿವೃತ್ತ ಹೊಂದಿದವರಿಗೆ ಮತ್ತು ಹಾಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಸಿಬ್ಬಂದಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ರಾಜ್ಯದ ಬೇರೆ ಭಾಗಗಳಿಂದ ಆಗಮಿಸಿದ ಕೇಳುಗರು ಅಭಿಪ್ರಾಯಗಳನ್ನು ಹಂಚಿಕೊಂಡರು. ಶೋಭಾ ತಂಡದವರು ಸ್ವಾಗತಗೀತೆ ನಡೆಸಿಕೊಟ್ಟರು. ಕಾರ್ಯಕ್ರಮ ಅಧಿಕಾರಿ ಎಸ್.ಎಲ್.ರಮೇಶ್‌ಪ್ರಸಾದ್ ಸ್ವಾಗತಿಸಿದರು. ಡಾ. ಗಣೇಶ್ ಆರ್ ಕೆಂಚನಾಳ ಪ್ರಾಸ್ತವಿಕ ನುಡಿಗಳನ್ನಾಡಿದರು. ಶಕೀಲ್ ಅಹ್ಮದ್ ಮತ್ತು ಮೀನಾ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಆಕಾಶವಾಣಿಯ ಎಲ್ಲ ಸಿಬ್ಬಂದಿ ಭಾಗವಹಿಸಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/