ಶಿವಮೊಗ್ಗ ವಿತರಕರ ಸಂಘದಿಂದ ವಿತರಕರ ದಿನಾಚರಣೆ

Shivamogga ಶಿವಮೊಗ್ಗ | 4 ಫೆಬ್ರವರಿ 2025 | ಡಿಜಿ ಮಲೆನಾಡು.ಕಾಂ
ದೇಶದಲ್ಲಿ ಕರ್ನಾಟಕವನ್ನು ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿ ನಿಲ್ಲಿಸುವಲ್ಲಿ ವಿತರಕರ ಪಾತ್ರ ಮಹತ್ವದ್ದಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಶಿವಮೊಗ್ಗ ವಿತರಕರ ಸಂಘದ ವತಿಯಿಂದ ಫೆ. 2ರಂದು ಆಯೋಜಿಸಿದ್ದ ವಿತರಕರ ದಿನಾಚರಣೆ ಉದ್ಘಾಟನೆ ಮಾತನಾಡಿ, ಕರ್ನಾಟಕದ ಆರ್ಥಿಕ ಪ್ರಗತಿಯಲ್ಲಿ ವಿತರಕರ ಕೊಡುಗೆ ಮಹತ್ವದ್ದಾಗಿದೆ ಎಂದು ತಿಳಿಸಿದರು. ಕರ್ನಾಟಕದಲ್ಲಿ ಚಿಲ್ಲರೆ ಮಾರುಕಟ್ಟೆಯನ್ನು ಬೆಳೆಸುವ ಬಗ್ಗೆ ವಿತರಕರಿಗೆ ಮಾಹಿತಿ ನೀಡುತ್ತ ದೇಶದ ಆರ್ಥಿಕತೆಗೆ ವಿತರಕರ ಉದ್ಯಮ ಅತಿ ಹೆಚ್ಚಿನ ಕೊಡುಗೆ ನೀಡುತ್ತಿದೆ ಎಂದರು.
ಕರ್ನಾಟಕ ಗ್ರಾಹಕ ವಸ್ತುಗಳ ವಿತರಕರ ಸಂಘಗಳ ಒಕ್ಕೂಟ ಅಧ್ಯಕ್ಷ ಗಿರೀಶ್ ಶಂಕರ್ ಸುಂಕದ ಮಾತನಾಡಿ, ವಿತರಕರಿಗೆ ಆಗುತ್ತಿರುವ ಸವಾಲುಗಳನ್ನು ನಾವೆಲ್ಲರೂ ಒಗ್ಗಟ್ಟಾಗಿ ಎದುರಿಸಬೇಕು ಎಂದು ಹೇಳಿದರು. ಕರ್ನಾಟಕ ಫೆಡರೇಶನ್ ಆಫ್ ಡಿಸ್ಟ್ರಿಬ್ಯೂಟರ್ಸ್ ವೆಲ್‌ಫೇರ್ ಅಸೋಸಿಯೇಷನ್ ಅಧ್ಯಕ್ಷ ಜಯಂತ್ ಗಾಣಿಗ್ ಮಾತನಾಡಿ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ವಿತರಕರ ಮಂಡಳಿ ರಚಿಸುವಂತೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದೇವೆ. ಮುಂದಿನ ದಿನಗಳಲ್ಲಿ ಸರ್ಕಾರದಿಂದ ಹೆಚ್ಚಿನ ಮಟ್ಟದ ಭದ್ರತೆಯನ್ನು ವಿತರಿಕರಿಗೆ ನೀಡುವ ಭರವಸೆ ಇದೆ ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಮಾತನಾಡಿ, ಕಂಪನಿ ಹಾಗೂ ವರ್ತಕರಿಗೆ ಕೊಂಡಿಯಾಗಿ ಕಾರ್ಯ ವಿತರಕರು ಕಾರ್ಯ ನಿರ್ವಹಿಸುತ್ತಿದ್ದು, ಆಧುನಿಕ ಮಾರುಕಟ್ಟೆ ವ್ಯವಸ್ಥೆಗೆ ನಾವು ನಮ್ಮ ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳಬೇಕಾಗಿದೆ. ತಾಂತ್ರಿಕತೆಯನ್ನು ನಾವು ಉಪಯೋಗಿಸಿ ನಮ್ಮ ಆರ್ಡರ್ ಬುಕಿಂಗ್ ಹಾಗೂ ಸಪ್ಲೈ ಕೆಲಸಗಳಿಗೆ ಆಧುನಿಕತೆ ಸ್ಪರ್ಶ ನೀಡಿದಲ್ಲಿ ಹಲವಾರು ಸಮಸ್ಯೆಗಳನ್ನ ಪರಿಹರಿಸಿಕೊಳ್ಳಬಹುದು ಎಂದು ಹೇಳಿದರು.
ಶಿವಮೊಗ್ಗ ಜಿಲ್ಲಾ ವಿತರಕ ಸಂಘದ ಅಧ್ಯಕ್ಷ ದೇವರಾಜ್ ಎಂ.ಸಿ. ಮಾತನಾಡಿ, ವಿತರಕರ ದಿನ ಆಚರಣೆಯನ್ನು ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭಿಸಿ ರಾಷ್ಟ್ರಮಟ್ಟದವರೆಗೆ ಯಶಸ್ವಿಗೊಳಿಸಬೇಕು ಎಂದರು. ರಾಜ್ಯಮಟ್ಟದ ನಾಯಕರಿಗೆ ಮನವಿ ಪತ್ರ ಸಲ್ಲಿಸಿ ಆಗ್ರಹಿಸಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ವಿತರಕರ ದಿನಾಚರಣೆ ಅಂಗವಾಗಿ 29 ಜನ ಸಂಸ್ಥಾಪಕ ಸದಸ್ಯರಿಗೆ ಸನ್ಮಾನಿಸಲಾಯಿತು. ಭದ್ರಾವತಿ, ಶಿಕಾರಿಪುರ, ಸಾಗರ, ಗದಗ ಹಾಗೂ ಕೊಪ್ಪದಿಂದ ಆಗಮಿಸಿದ ಪದಾಧಿಕಾರಿಗಳಿಗೂ ಗೌರವಿಸಲಾಯಿತು. ಶಿವಮೊಗ್ಗ ವಿತರಕರ ಸಂಘದ ಉಪಾಧ್ಯಕ್ಷ ಬದರಿನಾಥ್ ಬಿ ಆರ್, ಕಾರ್ಯದರ್ಶಿ ಗಿರೀಶ್, ಶ್ರೀನಿವಾಸ್, ಜಂಟಿ ಕಾರ್ಯದರ್ಶಿ ಅರವಿಂದ್, ಆಡಳಿತ ಮಂಡಳಿ ನಿರ್ದೇಶಕರು ಹಾಗೂ ಸದಸ್ಯರು ಭಾಗವಹಿಸಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/