ಜೆಎನ್ಎನ್ ಇಂಜಿನಿಯರಿಂಗ್ ಕಾಲೇಜಿನ ಡಾ. ಪ್ರೇಮಾ ಕೆ.ಎನ್. ಅವರಿಗೆ ಡಾಕ್ಟರೇಟ್

ಶಿವಮೊಗ್ಗ | 16 ಫೆಬ್ರವರಿ 2025 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ ನಗರದ ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಪ್ರೇಮಾ ಕೆ.ಎನ್. ಮಂಡಿಸಿದ “ಎಫೆಕ್ಟಿವ್ ಅಡಾಪ್ಟೆಷನ್ ಆಫ್ ಸ್ಕೆಲೆಬಲ್ ರೂಟಿಂಗ್ ಪ್ರೋಟೋಕಾಲ್ಸ್ ಫಾರ್ ವೈರ್‌ಲೆಸ್ ಮೆಸ್ ನೆಟ್‌ವರ್ಕ್ಸ್ ಅಂಡರ್‌ಡೈವರ್ಸಿಫೈಡ್ ಸಿನಾರಿಯೋಸ್” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) 24ನೇ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ಶಿವಮೊಗ್ಗ ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಟೆಲಿಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕಿ ಡಾ. ಉಷಾದೇವಿ ಎಂ.ಬಿ. ಅವರು ಮಾರ್ಗದರ್ಶನ ನೀಡಿದ್ದರು. ಡಾ. ಪ್ರೇಮಾ ಕೆ.ಎನ್. ಅವರಿಗೆ ಎನ್‌ಇಎಸ್ ಆಡಳಿತ ಮಂಡಳಿ ಸದಸ್ಯರು ಹಾಗೂ ಕಾಲೇಜಿನ ಪ್ರಾಚಾರ್ಯರು, ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.