ಜಾಗತಿಕ ಆರ್ಥಿಕ ಶಕ್ತಿಯಾಗಿ ಭಾರತ

ಶಿವಮೊಗ್ಗ | 11 ಫೆಬ್ರವರಿ 2025 | ಡಿಜಿ ಮಲೆನಾಡು.ಕಾಂ
ಜಾಗತಿಕ ಆರ್ಥಿಕ ಶಕ್ತಿಯಾಗಿ ಭಾರತ ಬಲಿಷ್ಠವಾಗಲು ಹಣಕಾಸು ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ಸಹ್ಯಾದ್ರಿ ಚಿಟ್ಸ್ ನೂತನ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಭಾರತವು ಮೂರನೇ ಆರ್ಥಿಕ ಶಕ್ತಿಯಾಗಿ ಬೆಳೆಯಲು ಪ್ರಧಾನ ಮಂತ್ರಿ ಮೋದಿ ಅವರು ಮಾಡುತ್ತಿರುವ ಪ್ರಯತ್ನಕ್ಕೆ ಚಿಕ್ಕ ಚಿಕ್ಕ ಹಣಕಾಸು ಸಂಸ್ಥೆಗಳು ಬಹು ಮುಖ್ಯ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ಜನಸಾಮಾನ್ಯರ ಅಗತ್ಯಕ್ಕೆ ಸ್ಪಂದಿಸುತ್ತಿರುವ ಚಿಟ್ ಫಂಡ್ ಕಂಪನಿಗಳು ಅತಿ ಮುಖ್ಯ. ಸಹ್ಯಾದ್ರಿ ಚಿಟ್ಸ್ ಸಂಸ್ಥೆಯು 27 ವರ್ಷಗಳಿಂದ ಶಿವಮೊಗ್ಗದಲ್ಲಿ ನೀಡುತ್ತಿರುವ ಸೇವೆ ಶ್ಲಾಘನೀಯ ಎಂದರು.
ಸಿನಿಮಾ ನಟ ದಿಗಂತ ಮಾತನಾಡಿ, ನನಗೆ ಮಲೆನಾಡು ಪ್ರದೇಶ ತುಂಬಾ ಇಷ್ಟ. ಇಲ್ಲಿಗೆ ಬಂದಿರುವುದು ತುಂಬಾ ಸಂತೋಷವಾಗಿದೆ. ಸಹ್ಯಾದ್ರಿ ಸಂಸ್ಥೆಯು 27 ವರ್ಷಗಳಿಂದ ನೀಡುತ್ತಿರುವ ಸೇವೆಯು ನೂರಾರು ವರ್ಷ ಮುನ್ನಡೆಯಲಿ ಎಂದು ಶುಭಹಾರೈಸಿದರು.
ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಸಂಸ್ಥೆಯ ಚಂದದಾರರಲ್ಲಿ ನಾನು ಕೂಡ ಒಬ್ಬ. ನನಗೂ ತುರ್ತು ಸಮಯದಲ್ಲಿ ಹಣ ದೊರೆತು ತುಂಬಾ ಅನುಕೂಲ ಆಗಿದೆ. ಸಾಮಾನ್ಯ ಜನರೆಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ನಟ ದಿಗಂತ್ ಅವರಿಂದ ನೂತನವಾಗಿ ಆರಂಭಗೊಂಡ ಒಂದು ಕೋಟಿ ರೂ. ಚೀಟಿಯ ಮೊದಲ ಅದೃಷ್ಟವಂತರ ಆಯ್ಕೆ ಮಾಡಲಾಯಿತು. ಸಂಸ್ಥೆಯ ಚೇರ್ಮನ್ ಬದ್ರಿನಾಥ್ ಅಧ್ಯಕ್ಷೀಯ ನುಡಿಗಳನ್ನಾಡಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ಮ್ಯಾನೇಜಿಂಗ್ ಡೈರೆಕ್ಟರ್ ರಮೇಶ್ ಭಟ್, ನಿರ್ದೇಶಕ ಜಿ.ವಿಜಯಕುಮಾರ್, ರವೀಂದ್ರನಾಥ್ ಐತಾಳ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ ಬಿ.ಗೋಪಿನಾಥ್, ಕಾಂಗ್ರೆಸ್ ಮುಖಂಡ ಎಚ್.ಸಿ.ಯೋಗೀಶ್, ಉದ್ಯಮಿ ಅಶ್ವತ್ ನಾರಾಯಣ ಶೆಟ್ಟಿ, ಸಂಸ್ಥೆಯ ಸಂಸ್ಥಾಪಕ ಡಿ.ಎಲ್.ನಟರಾಜ್, ಮಾರ್ಕೆಟಿಂಗ್ ಡೈರೆಕ್ಟರ್ ಶಿವರಾಜ್ ಉಡುಗಣಿ, ಟಿ.ಎಸ್.ಬದರೀನಾಥ್, ರಮೇಶ್ ಎಂ.ಭಟ್, ಸಂಸ್ಥೆಯ ಎಲ್ಲಾ ನಿರ್ದೇಶಕರು ಸಿಬ್ಬಂದಿ ವರ್ಗ ಹಾಜರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/