ಸಕಾಲದಲ್ಲಿ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳುವುದು ಅವಶ್ಯಕ

Shivamogga ಶಿವಮೊಗ್ಗ | 4 ಫೆಬ್ರವರಿ 2025 | ಡಿಜಿ ಮಲೆನಾಡು.ಕಾಂ
ಕಂಪ್ಯೂಟರ್, ಮೊಬೈಲ್‌ನ ಅತಿಯಾದ ಬಳಕೆಯಿಂದ ಮಕ್ಕಳಲ್ಲಿ ಕಣ್ಣಿನ ಸಮಸ್ಯೆ ಹೆಚ್ಚಾಗುತ್ತಿದೆ. ಕಣ್ಣಿಗೆ ವಿಶ್ರಾಂತಿ ಇಲ್ಲದಿರುವುದರಿಂದ ಸಮಸ್ಯೆ ಹೆಚ್ಚಾಗುತ್ತಿದೆ ಎಂದು ಆದರ್ಶ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ನೇತ್ರ ತಜ್ಞೆ ಡಾ. ದೀಪಾ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ನಗರದ ಸಹ್ಯಾದ್ರಿ ಪ್ರೌಢಶಾಲೆಯಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆಯಿಂದ ಕಣ್ಣಿನ ಆರೋಗ್ಯದ ಜಾಗೃತಿ ಹಾಗೂ ಉಚಿತ ನೇತ್ರ ತಪಾಸಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಆಧುನಿಕ ಉಪಕರಣ ಬಳಕೆಯು ಕಣ್ಣು ನೋವು ಹೆಚ್ಚಲು ಕಾರಣ. ಸಕಾಲದಲ್ಲಿ ಕಣ್ಣು ತಪಾಸಣೆ ಮಾಡಿಸಿಕೊಳ್ಳುವುದು ಅವಶ್ಯ. ಪ್ರೋಟಿನ್‌ಯುಕ್ತ ಆಹಾರ ಸೇವಿಸಬೇಕು. ಸರಿಯಾದ ನಿದ್ರೆ ಮಾಡಬೇಕು ಎಂದು ತಿಳಿಸಿದರು.
ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಗಣೇಶ್ ಮಾತನಾಡಿ, ಕಣ್ಣು ದೇಹದ ಪ್ರಮುಖ ಅಂಗ. ನಾವುಗಳು ಕಣ್ಣಿನ ಬಗ್ಗೆ ನಿರ್ಲಕ್ಷ್ಯ ಮಾಡಬಾರದು. ಮಕ್ಕಳಿಗೆ ಅನುಕೂಲ ಒದಗಿಸುವ ದೃಷ್ಟಿಯಿಂದ ಉಚಿತ ತಪಾಸಣಾ ಶಿಬಿರ ಆಯೋಜಿಸಿದ್ದೇವೆ. ಕಣ್ಣಿನ ಬಗ್ಗೆ ಹೆಚ್ಚು ಜಾಗೃತಿ ಹೊಂದಬೇಕು ಎಂದು ಹೇಳಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ಶ್ರೀನಿಧಿ ಎಜುಕೇಷನ್ ಟ್ರಸ್ಟ್ ಉಪಾಧ್ಯಕ್ಷ ಶ್ರೀಕಂಠಯ್ಯ, ಆಡಳಿತಾಧಿಕಾರಿ ಟಿ.ಪಿ.ನಾಗರಾಜ, ಗುರುಮೂರ್ತಿ ಗೌಡ, ಮುಖ್ಯಶಿಕ್ಷಕಿ ಉಮ್ಮಸಲ್ಮ, ಕೆ.ಪಿ.ಕುಮಾರಸ್ವಾಮಿ, ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಕಾರ್ಯದರ್ಶಿ ಮಂಜುನಾಥ ರಾವ್ ಕದಂ, ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಶೋಭಾ ಎಸ್.ಎನ್., ನಾಗರತ್ನ, 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/