ಅಮೃತ್ ನೋನಿ ಸಂಸ್ಥೆಗೆ ರೋಟರಿ ಜಿಲ್ಲಾ ಗವರ್ನರ್ ಭೇಟಿ

ಶಿವಮೊಗ್ಗ | 7 ಫೆಬ್ರವರಿ 2025 | ಡಿಜಿ ಮಲೆನಾಡು.ಕಾಂ
ಆಧುನಿಕ ಯುಗದಲ್ಲಿ ಎಲ್ಲರೂ ಒತ್ತಡದ ಜೀವನಶೈಲಿ ನಡೆಸುತ್ತಿದ್ದು, ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ರೋಟರಿ ಜಿಲ್ಲಾ ಗವರ್ನರ್ ಸಿ.ಎ.ದೇವಾನಂದ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಜಿಲ್ಲಾ ಗವರ್ನರ್ ಕೈಗಾರಿಕಾ ಕ್ಷೇತ್ರದ ವೀಕ್ಷಣೆ ಸಂದರ್ಭದಲ್ಲಿ ಅಮೃತ್ ನೋನಿ ಸಂಸ್ಥೆಗೆ ಭೇಟಿ ನೀಡಿ ಮಾತನಾಡಿ, ಇಂದಿನ ದಿನಗಳಲ್ಲಿ ಆರೋಗ್ಯ ಬಗ್ಗೆ ಎಲ್ಲರಲ್ಲೂ ಕಾಳಜಿ ಹೆಚ್ಚುತ್ತಿದೆ. ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯಂತ ಅವಶ್ಯಕ. ಪ್ರತಿಯೊಬ್ಬರೂ ಆರೋಗ್ಯದ ಕಾಳಜಿ ವಹಿಸಬೇಕು ಎಂದು ತಿಳಿಸಿದರು.
ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್ ಮಾತನಾಡಿ, ರೋಟರಿ ಸಂಸ್ಥೆ ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದು, ವರ್ಷದ ವಿವಿಧ ಸಂದರ್ಭದಲ್ಲಿ ಇಂಡಸ್ಟ್ರಿಯಲ್ ವಿಸಿಟ್ ಆಯೋಜಿಸಲಾಗುವುದು. ಇದರಿಂದ ಉದ್ಯಮ ಕ್ಷೇತ್ರದ ವಿವಿಧ ವಿಷಯಗಳ ಬಗ್ಗೆ ರೋಟರಿ ಸದಸ್ಯರಿಗೆ ಹೆಚ್ಚಿನ ಮಾಹಿತಿ ಲಭ್ಯವಾಗುತ್ತದೆ ಎಂದು ಹೇಳಿದರು.
ರೋಟರಿ ಸಂಸ್ಥೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಸೇವಾ ಚಟುವಟಿಕೆಗಳನ್ನು ನಡೆಸುತ್ತದೆ. ಸಮಾಜಮುಖಿ ಆಲೋಚನೆಯೊಂದಿಗೆ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದೆ. ರೋಟರಿ ಸದಸ್ಯರ ಸಹಕಾರದಿಂದ ಹೆಚ್ಚು ಸೇವಾ ಕಾರ್ಯಗಳನ್ನು ಆಯೋಜಿಸಲಾಗುತ್ತದೆ ಎಂದು ತಿಳಿಸಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ವಾಲ್ಯೂ ಪ್ರಾಡಕ್ಟ್ಸ್ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಡಾ. ಶ್ರೀನಿವಾಸಮೂರ್ತಿ, ವಾಲ್ಯೂ ಪ್ರಾಡಕ್ಟ್ಸ್ ಸಂಸ್ಥೆ ನಿರ್ದೇಶಕಿ ಅಂಬುಜಾಕ್ಷಿ, ಸಿಇಒ ಇಂಚರಾ ನಾಡಿಗ್, ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಶಶಿಕಾಂತ್ ನಾಡಿಗ್, ರೇಖಾ ದೇವಾನಂದ್, ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಡಾ. ಎಂ.ಎಸ್.ಅರುಣ್, ಡಾ. ಕೌಸ್ತುಭ ಅರುಣ್ ಇತರರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/