ಆಕಾಶವಾಣಿ ಭದ್ರಾವತಿ ವಜ್ರ ಮಹೋತ್ಸವದಲ್ಲಿ ಎಸ್.ಆರ್.ಭಟ್‌ಗೆ ಸನ್ಮಾನ

ಶಿವಮೊಗ್ಗ | 10 ಫೆಬ್ರವರಿ 2025 | ಡಿಜಿ ಮಲೆನಾಡು.ಕಾಂ
ಆಕಾಶವಾಣಿ ಕೇಂದ್ರಕ್ಕೆ 60 ವರ್ಷ ತುಂಬಿದ ಹಿನ್ನೆಲೆಯಲ್ಲಿ ಆಕಾಶವಾಣಿ ಆವರಣದಲ್ಲಿ ಹಮ್ಮಿಕೊಂಡಿದ್ದ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಆಕಾಶವಾಣಿ ಭದ್ರಾವತಿ ಮತ್ತು ಚಿತ್ರದುರ್ಗ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥ ಎಸ್.ಆರ್.ಭಟ್ ಅವರನ್ನು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಮತ್ತು ಪದಾಧಿಕಾರಿಗಳು ಸನ್ಮಾನಿಸಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ಅರವತ್ತು ವರ್ಷಗಳಿಂದ ಆಕಾಶವಾಣಿ ಭದ್ರಾವತಿಯು ನಡೆಸಿಕೊಡುತ್ತಿರುವ ಅನೇಕ ಉಪಯುಕ್ತ ಕಾರ್ಯಕ್ರಮಗಳಿಂದ ಕೇಳುಗರ ಸಂಖ್ಯೆ ಹೆಚ್ಚಾಗಿದೆ. ಅಪಾರವಾದ ಕೇಳುಗರನ್ನು ಹೊಂದಿರುವ ಆಕಾಶವಾಣಿ, ಗುಣಮಟ್ಟದ ಪ್ರಸಾರ, ತಾಂತ್ರಿಕ ವರ್ಗ, ಅತ್ಯುತ್ತಮವಾದ ನಿರೂಪಕರು, ಸಿಬ್ಬಂದಿ ಸಹಕಾರ ಮತ್ತು ಶ್ರಮದಿಂದ ಅನೇಕ ಕಾರ್ಯಕ್ರಮಗಳು ಜನಮಾನಸ ತಲುಪುವುದರ ಮುಖಾಂತರ ಆಕಾಶವಾಣಿ ಕೇಂದ್ರವು ಜನಪ್ರಿಯವಾಗಿದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯ್ ಕುಮಾರ್, ಖಜಾಂಚಿ ಆರ್.ಮನೋಹರ್, ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನದ ವಿಶ್ವವಿದ್ಯಾಲಯ ಕುಲಸಚಿವ ಡಾ. ಕೆ.ಸಿ.ಶಶಿಧರ್, ಕುವೆಂಪು ವಿಶ್ವವಿದ್ಯಾಲಯದ ಉಪ ಕುಲಸಚಿವ ಡಾ. ಕೆ.ಆರ್.ಮಂಜುನಾಥ್ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಜನರು, ಆಕಾಶವಾಣಿ ಕೇಂದ್ರದ ಅನೇಕ ಸಿಬ್ಬಂದಿ ಭಾಗವಹಿಸಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/
ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಿಂದ ಕ್ಯಾನ್ಸರ್ ಜಾಗೃತಿಗಾಗಿ ಸೈಕ್ಲೋಥಾನ್