ಪಠ್ಯದೊಂದಿಗೆ ಕೌಶಲ್ಯ ತರಬೇತಿಗೆ ಚಿಂತನೆ

ಶಿವಮೊಗ್ಗ | 18 ಫೆಬ್ರವರಿ 2025 | ಡಿಜಿ ಮಲೆನಾಡು.ಕಾಂ
ಮುಂದಿನ ಶೈಕ್ಷಣಿಕ ಸಾಲಿನಿಂದ ರಾಜ್ಯದಲ್ಲಿ 8 ರಿಂದ 12ನೇ ತರಗತಿಯವರೆಗೆ ಎಲ್ಲ ಮಕ್ಕಳಿಗೆ ಪಠ್ಯದ ಜತೆಗೆ ಕೌಶಲ್ಯ ತರಗತಿಗಳನ್ನು ಆರಂಭಿಸಲು ಉದ್ದೇಶಿಸಿದ್ದು, ಶೀಘ್ರದಲ್ಲಿ ವಿವರಗಳನ್ನು ಬಿಡುಗಡೆಗೊಳಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ಚಾಲುಕ್ಯನಗರದ ಕನ್ನಡ ಸಾಹಿತ್ಯ ಪರಿಷತ್ ಸಾಹಿತ್ಯಗ್ರಾಮಕ್ಕೆ ಭೇಟಿ ನೀಡಿದ ಅವರು, ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಹೆಸರಿನಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಗ್ರಂಥಾಲಯಕ್ಕೆ 5 ಲಕ್ಷ ರೂ. ಚೆಕ್‌ಅನ್ನು ಕಸಾಪ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಅವರಿಗೆ ಹಸ್ತಾಂತರಿಸಿ ಮಾತನಾಡಿದರು.
ಸಾಹಿತ್ಯ ಗ್ರಾಮದಲ್ಲಿ 2.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮುಂದುವರೆದ ಕಟ್ಟಡ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿ ಹಾಗೂ ಸರ್ಕಾರದಿಂದ ಅಗತ್ಯ ನೆರವು ಕೊಡಿಸುತ್ತೇನೆ. ಕನ್ನಡ ಸಾಹಿತ್ಯ ಸಮ್ಮೇಳನಗಳು ಕನ್ನಡ ಭಾಷೆ ಉಳಿಸಿ ಬೆಳೆಸುವ ಕಾರ್ಯದ ಭಾಗವಾಗಿವೆ ಎಂದು ತಿಳಿಸಿದರು.
ಸರ್ಕಾರಿ ಶಾಲೆಗಳಂತೆ ರಾಜ್ಯದ ಎಲ್ಲ ಗ್ರಂಥಾಲಯಗಳಿಗೆ ಉಚಿತ ವಿದ್ಯುತ್‌ಮತ್ತಿತರ ಸೌಲಭ್ಯಗಳನ್ನು ಒದಗಿಸಿ, ಗ್ರಂಥಾಲಯದ ಕಾರ್ಯಾವಧಿ ವಿಸ್ತರಿಸಲಾಗುವುದು. ಸಿಬ್ಬಂದಿ ಕೊರತೆಯನ್ನು ನೀಗಿಸಲು ಗಮನ ಹರಿಸಲಾಗುವುದು. ಗ್ರಂಥಾಲಯದಲ್ಲಿನ ಹಲವು ನ್ಯೂನತೆಗಳನ್ನು ಈಗಾಗಲೇ ಗುರುತಿಸಲಾಗಿದ್ದು, ವ್ಯವಸ್ಥಿತ ನಿರ್ವಹಣೆಗಾಗಿ ಇಲಾಖೆಗೆ ಹೊಸದಾಗಿ ನಿಯೋಜಿತ ಅಧಿಕಾರಿಗಳಿಗೆ ಹೊಣೆಗಾರಿಕೆ ವಹಿಸಲಾಗಿದೆ. ಗ್ರಂಥಾಲಯಗಳಲ್ಲಿ ಡಿಜಿಟಲ್‌ವ್ಯವಸ್ಥೆ ಇರುವುದರಿಂದ ಗ್ರಂಥಾಲಯಗಳು ನಿರಂತರವಾಗಿ ಸಾರ್ವಜನಿಕರಿಗೆ ಲಭ್ಯವಿರುವಂತೆ ಕ್ರಮ ಕೈಗೊಳ್ಳಲಾಗುವುದು. ತಜ್ಞರ ಸಲಹೆ ಪಡೆದು ಡಿಜಿಟಲ್‌ಲೈಬ್ರರಿ ವ್ಯವಸ್ಥೆಯನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ಯತ್ನಿಸಲಾಗುವುದು ಎಂದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಮಂಜುನಾಥ್, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ. ಆರ್.ಎಂ.ಮಂಜುನಾಥಗೌಡ, ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರಭೂಪಾಲ, ಕನ್ನಡ ಸಾಹಿತ್ಯ ಪರಿಷತ್ ಸದಸ್ಯರು, ಪದಾಧಿಕಾರಿಗಳು ಹಾಗೂ ಸಾಹಿತ್ಯಾಸಕ್ತರು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/