ಸರ್ಕಾರಿ ಶಾಲೆ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ

ಸರ್ಕಾರಿ ಶಾಲೆ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ

ಶಿವಮೊಗ್ಗ | 27 ಜುಲೈ 2025 | ಡಿಜಿ ಮಲೆನಾಡು.ಕಾಂ

ಸರ್ಕಾರಿ ಶಾಲೆ ಮಕ್ಕಳಲ್ಲಿ ಸಾಕಷ್ಟು ಪ್ರತಿಭೆ ಇದ್ದು, ಸೂಕ್ತ ಪ್ರೋತ್ಸಾಹ ಮತ್ತು ಅಗತ್ಯ ಮಾರ್ಗದರ್ಶನ ನೀಡಿದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷೆ ಸುಮತಿ ಕುಮಾರಸ್ವಾಮಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ಕೊಮ್ಮನಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಟೀ ಶರ್ಟ್ ಮತ್ತು ಲೇಖನ ಸಾಮಾಗ್ರಿ ವಿತರಿಸಿ ಮಾತನಾಡಿ, ಸರ್ಕಾರದ ಸೌಲಭ್ಯಗಳ ಜತೆಯಲ್ಲಿ ಸಂಘ ಸಂಸ್ಥೆಗಳ ನೆರವು ಅತಿ ಮುಖ್ಯ. ಇದರಿಂದ ಮಕ್ಕಳಿಗೆ ಕಲಿಕೆಗೆ ಪೂರಕ ವಾತಾವರಣ ಸೃಷ್ಟಿಯಾಗುತ್ತದೆ ಎಂದು ತಿಳಿಸಿದರು.

ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಅಧ್ಯಕ್ಷ ನೆಪ್ಚೂನ್ ಕಿಶೋರ್ ಕುಮಾರ್ ಮಾತನಾಡಿ, ರೋಟರಿಯ ಹಲವಾರು ಪ್ರಮುಖ ಜಿಲ್ಲಾ ಯೋಜನೆಗಳನ್ನು ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಅನುಷ್ಠಾನಗೊಳಿಸುತ್ತಿದ್ದೇವೆ. ರಸ್ತೆ ಸುರಕ್ಷತೆ ಹಾಗೂ ಪರಿಸರದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹೆಚ್ಚಾಗಿ ಮಾಡುತ್ತಿದ್ದೇವೆ ಎಂದರು.

ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಡಾ. ಧನಂಜಯ ರಾಂಪುರ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ನುರಿತ ಶಿಕ್ಷಕರು ಇರುವುದರ ಜೊತೆಗೆ ಸರ್ಕಾರದ ಒಳ್ಳೆಯ ಸೌಲಭ್ಯಗಳು ಇದ್ದು, ಸದುಪಯೋಗ ಪಡಿಸಿಕೊಂಡು ಮಕ್ಕಳು ಸರ್ವತೋಮುಖವಾಗಿ ಅಭಿವೃದ್ಧಿ ಆಗಬೇಕು ಎಂದು ಹೇಳಿದರು.

ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ಕೊಮ್ಮನಾಳು ಶಾಲೆಗೆ ಈಗಾಗಲೇ ಮ್ಯಾಚಿಂಗ್ ಗ್ರಾಂಟ್ ಮುಖಾಂತರ ಬೆಂಚ್, ಡೆಸ್ಕ್ ಹಾಗೂ ಶೌಚಗೃಹ ನಿರ್ಮಾಣದಲ್ಲಿ ಸಹಕರಿಸಿದೆ. ಜಿಲ್ಲೆಯಲ್ಲಿ ಒಂದು ಮಾದರಿ ಶಾಲೆಯಾಗಿ ಹೊರಹೊಮ್ಮಿದ ಸರ್ಕಾರಿ ಕೊಮ್ಮನಾಳು ಶಾಲೆ ಇಂದಿಗೂ ಮಾದರಿಯಾಗಿದೆ ಎಂದು ತಿಳಿಸಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

Like & Follow Facebook Page ” Digi Malenadu “

ಮುಖ್ಯಶಿಕ್ಷಕ ಚಂದ್ರಪ್ಪ, ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 120 ವಿದ್ಯಾರ್ಥಿಗಳಿಗೆ ಟೀ ಶರ್ಟ್, ಯೂನಿಫಾರಂ ವಿತರಿಸಲಾಯಿತು. ಶಿಕ್ಷಕಿ ಗೀತಾ ಚಿಕ್ಕಮಠ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ನಮ್ಮ ಬಗ್ಗೆ :https://digimalenadu.com/about-us/

ಸಾಹಿತ್ಯದಲ್ಲಿನ ಅಂಶಗಳನ್ನು ಅರಿತುಕೊಳ್ಳುವುದು ಅವಶ್ಯ

digimalenadu

ಶಿವಮೊಗ್ಗ
error: Content is protected !!