ಇಂಜಿನಿಯರಿಂಗ್ ವಿದ್ಯಾರ್ಥಿಗಳ ನಾವೀನ್ಯ ಯೋಜನೆಗಳ ಪ್ರದರ್ಶನ
ಶಿವಮೊಗ್ಗ | 30 ಜುಲೈ 2025 | ಡಿಜಿ ಮಲೆನಾಡು.ಕಾಂ
ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ವತಿಯಿಂದ ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜಿನ ಸಹಯೋಗದಲ್ಲಿ ಆಗಸ್ಟ್ 1 ಮತ್ತು 2 ರಂದು ಕಾಲೇಜಿನ ಆವರಣದಲ್ಲಿ 48ನೇ ರಾಜ್ಯ ಮಟ್ಟದ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪೋಸ್ಟರ್ ಪ್ರಸ್ತುತಿ ಮತ್ತು ನಾವೀನ್ಯ ಯೋಜನೆಗಳ ಪ್ರಾತ್ಯಕ್ಷಿಕೆ ಪ್ರದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ಆಗಸ್ಟ್ 1ರ ಶುಕ್ರವಾರ ಕಾಲೇಜಿನ ಅನನ್ಯ ಮಂಟಪದಲ್ಲಿ ಬೆಳಗ್ಗೆ 10:30 ಕ್ಕೆ ನಡೆಯುವ ಉದ್ಘಾಟನಾ ಸಮಾರಂಭವನ್ನು ಟಾಟಾ ಕನ್ಸಲ್ಟೆನ್ಸಿ ಸರ್ವಿಸ್ ಸಂಶೋಧನಾ ವಿಭಾಗದ ಹಿರಿಯ ವಿಜ್ಞಾನಿ ಡಾ. ಪ್ರಶಾಂತ್ ಮಿಶ್ರ ಉದ್ಘಾಟಿಸುವರು. ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಅಧ್ಯಕ್ಷತೆ ವಹಿಸುವರು. ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಕಾರ್ಯದರ್ಶಿ ಪ್ರೊ. ಅಶೋಕ.ಎಂ.ರಾಯಚೂರು, ಎನ್ಇಎಸ್ ಸಹ ಕಾರ್ಯದರ್ಶಿ ಡಾ. ಪಿ.ನಾರಾಯಣ, ಪ್ರಾಂಶುಪಾಲ ಡಾ. ವೈ.ವಿಜಯಕುಮಾರ್ ಅತಿಥಿಗಳಾಗಿ ಭಾಗವಹಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಆಗಸ್ಟ್ 2ರ ಶನಿವಾರ ಮಧ್ಯಾಹ್ನ 3ಕ್ಕೆ ಸಮಾರೋಪ ಸಮಾರಂಭದಲ್ಲಿ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಸ್.ಇ.ಸುಧೀಂದ್ರ ಸಮಾರೋಪ ನುಡಿಗಳನ್ನಾಡುವರು. ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಅಧ್ಯಕ್ಷತೆ ವಹಿಸುವರು. ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಕಾರ್ಯದರ್ಶಿ ಪ್ರೊ. ಅಶೋಕ.ಎಂ.ರಾಯಚೂರು, ಎನ್ಇಎಸ್ ಖಜಾಂಚಿ ಡಿ.ಜಿ.ರಮೇಶ್, ಪ್ರಾಂಶುಪಾಲ ಡಾ. ವೈ.ವಿಜಯಕುಮಾರ್ ಅತಿಥಿಗಳಾಗಿ ಭಾಗವಹಿಸುವರು ಎಂದರು.
ಬೆಂಗಳೂರಿನ ಐ.ಐ.ಎಸ್.ಸಿ ಪ್ರಾಧ್ಯಾಪಕ ಪ್ರೊ. ಎಲ್.ಉಮಾನಂದ ವಿದ್ಯಾರ್ಥಿಗಳಿಗೆ ‘ಇ-ಮೊಬಿಲಿಟಿ ವ್ಯವಸ್ಥೆಯಲ್ಲಿನ ಸವಾಲುಗಳು’ ಕುರಿತು ವಿಶೇಷ ಉಪನ್ಯಾಸ ನೀಡುವರು ಎಂದು ತಿಳಿಸಿದರು.
440 ನಾವೀನ್ಯ ಯೋಜನೆಗಳ ಪ್ರದರ್ಶನ: ಎರಡು ದಿನಗಳ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಎಂಜಿನಿಯರಿಂಗ್ ಕಾಲೇಜುಗಳ 440 ನಾವೀನ್ಯ ಯೋಜನೆಗಳ ಪ್ರಾತ್ಯಕ್ಷಿಕೆ ಪ್ರದರ್ಶನಗೊಳ್ಳಲಿದೆ. 180 ಪೋಸ್ಟರ್ ಪ್ರಸ್ತುತಗೊಳ್ಳಲಿವೆ. ಎಲ್ಲಾ ನಾವೀನ್ಯ ಯೋಜನೆಗಳನ್ನು ಐ.ಐ.ಎಸ್.ಸಿ, ಎನ್.ಎ.ಎಲ್, ಸಿ.ಎಂ.ಟಿ.ಐ ಸಂಸ್ಥೆಗಳ 21 ಪರಿಣಿತ ವಿಜ್ಞಾನಿಗಳು ಮೌಲ್ಯಮಾಪನ ನಡೆಸುವರು. 50 ಯೋಜನೆಗಳಿಗೆ ‘ವರ್ಷದ ಅತ್ಯುತ್ತಮ ಯೋಜನೆ’ ಬಹುಮಾನ ನೀಡಲಾಗುತ್ತಿದೆ. ವಿವಿಧ ಕಾಲೇಜುಗಳ 750 ಕ್ಕೂ ಅಧಿಕ ವಿದ್ಯಾರ್ಥಿಗಳು, 180 ಕ್ಕೂ ಹೆಚ್ಚು ಪ್ರಾಧ್ಯಾಪಕರು ಭಾಗವಹಿಸುವರು.
ಕೆ.ಎಸ್.ಸಿ.ಎಸ್.ಟಿ ಹಿರಿಯ ಪ್ರಾಜೆಕ್ಟ್ ಮ್ಯಾನೇಜರ್ ಕೆ.ಎನ್.ವೆಂಕಟೇಶ್ ಮಾತನಾಡಿ, ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯು ಶಿಕ್ಷಣ, ಬಯೋಡೈವರ್ಸಿಟಿ, ಜಲಸಂಪನ್ಮೂಲ ಬಳಕೆ, ಗೃಹಪಯೋಗ ಸೇರಿದಂತೆ ವಿವಿಧ ಕ್ಷೇತ್ರಗಳ ಸವಾಲುಗಳನ್ನು ಬಗೆಹರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಇ-ಲರ್ನಿಂಗ್ ಕೇಂದ್ರಗಳು, ತ್ರಿಡಿ ತಂತ್ರಜ್ಞಾನಗಳ ಬಳಕೆಯಂತಹ ಪ್ರೇರಣೀಯ ಕಾರ್ಯ ಮಾಡುತ್ತಿದೆ. ಸ್ಟಾರ್ಟ್ ಅಪ್ ಗಳನ್ನು ಹೆಚ್ಚು ಸ್ಥಾಪಿಸಲು ಯುವ ಸಮೂಹಕ್ಕೆ ಉತ್ತೇಜನೆ ನೀಡಲಾಗುತ್ತಿದೆ ಎಂದು ಹೇಳಿದರು.
ನೈಸರ್ಗಿಕ ಸಂಪನ್ಮೂಲಗಳ ದತ್ತಾಂಶಗಳನ್ನು ಕ್ರೋಡೀಕರಿಸಿ ನಿರ್ವಹಿಸುವ ಕೇಂದ್ರವನ್ನು ಪ್ರತಿ ಜಿಲ್ಲೆಗಳಲ್ಲಿ ಸ್ಥಾಪಿಸಲಾಗಿದ್ದು, ಜಿಲ್ಲೆಯ ನೈಸರ್ಗಿಕ ಸಂಪನ್ಮೂಲಗಳು, ಜನಸಂಖ್ಯಾಶಾಸ್ತ್ರ, ಕೃಷಿ ಮತ್ತು ಸಾಮಾಜಿಕ ಆರ್ಥಿಕತೆ, ಮೂಲಸೌಕರ್ಯ ಸೌಲಭ್ಯಗಳ ಕುರಿತು ಡಿಜಿಟಲ್ ಡೇಟಾಬೇಸ್ ರಚಿಸಿ ನಿರ್ವಹಿಸುವಂತಹ ಪ್ರಮುಖ ಉದ್ದೇಶ ಈ ಕೇಂದ್ರದ್ದಾಗಿದೆ ಎಂದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
Like & Follow Facebook Page ” Digi Malenadu “
ಎನ್ಇಎಸ್ ಸಹ ಕಾರ್ಯದರ್ಶಿ ಡಾ. ಪಿ.ನಾರಾಯಣ, ಜೆ.ಎನ್.ಎನ್.ಸಿ.ಇ ಪ್ರಾಂಶುಪಾಲ ಡಾ.ವೈ.ವಿಜಯಕುಮಾರ್, ಸಂಶೋಧನಾ ಡೀನ್ ಡಾ. ಎಸ್.ವಿ.ಸತ್ಯನಾರಾಯಣ, ಕಾರ್ಯಕ್ರಮ ಸಂಯೋಜಕರಾದ ಡಾ.ಬಿ.ಎನ್.ರವಿಕುಮಾರ್, ಡಾ. ಚೇತನ್.ಎಸ್.ಜಿ, ಎನ್ಇಎಸ್ ಪಿ.ಆರ್.ಒ ಸಿ.ಎಂ.ನೃಪತುಂಗ ಸುದ್ದಿಗೋಷ್ಠಿಯಲ್ಲಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ನಮ್ಮ ಬಗ್ಗೆ :https://digimalenadu.com/about-us/
