ರೋಟರಿ ಸಂಸ್ಥೆಯಿಂದ ಸಮಾಜಮುಖಿ ಕಾರ್ಯ

ರೋಟರಿ ಸಂಸ್ಥೆಯಿಂದ ಸಮಾಜಮುಖಿ ಕಾರ್ಯ

ಶಿವಮೊಗ್ಗ | 17 ಜುಲೈ 2025 | ಡಿಜಿ ಮಲೆನಾಡು.ಕಾಂ

ರೋಟರಿ ಸಂಸ್ಥೆಯು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಜತೆಯಲ್ಲಿ ಶಿಸ್ತುಬದ್ಧ ಜೀವನಶೈಲಿ ರೂಪಿಸಿಕೊಳ್ಳಲು ನೆರವಾಗುತ್ತದೆ ಎಂದು ಹಿರಿಯ ವೈದ್ಯ ಡಾ. ಪಿ.ನಾರಾಯಣ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ನಗರದ ಮಲೆನಾಡು ಗೇಟ್ ವೇ ಸಭಾಂಗಣದಲ್ಲಿ ಆಯೋಜಿಸಿದ್ದ ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ, 20ಕ್ಕೂ ಹೆಚ್ಚು ಹೊಸ ಸದಸ್ಯರನ್ನು ಸಭೆಗೆ ಪರಿಚಯಿಸಿರುವುದು ತುಂಬಾ ಸಂತಸವಾಗಿದೆ. ಹೊಸ ಸದಸ್ಯರು ಮೀಟಿಂಗ್ ಹಾಜರಾಗುವ ಮೂಲಕ ರೋಟರಿ ಬಗ್ಗೆ ತಿಳಿದುಕೊಳ್ಳಬೇಕು. ಸಮಾಜಮುಖಿ ಕೆಲಸಲದಲ್ಲಿ ಸದಾ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.

ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ನೂತನ ಅಧ್ಯಕ್ಷರಾಗಿ ಪ್ರಕಾಶ್ ಮೂರ್ತಿ.ಎಂ.ಆರ್ ಹಾಗೂ ಕಾರ್ಯದರ್ಶಿಯಾಗಿ ರಶ್ಮಿ ಆರ್.ಎಸ್ ಅವರು ಅಧಿಕಾರ ಸ್ವೀಕರಿಸಿದರು. ಡಾ. ಪಿ.ನಾರಾಯಣ್ ನೂತನ ಅಧ್ಯಕ್ಷರಿಗೆ ಪ್ರತಿಜ್ಞಾವಿಧಿ ಭೋದಿಸಿದರು.

ನೂತನ ಅಧ್ಯಕ್ಷ ಪ್ರಕಾಶ್ ಮೂರ್ತಿ ಎಂ.ಆರ್ ಮಾತನಾಡಿ, ಕಾರ್ಯಕ್ರಮದಲ್ಲಿ 20ಕ್ಕೂ ಹೆಚ್ಚು ಹೊಸ ಸದಸ್ಯರ ಪರಿಚಯಿಸುತ್ತಿದ್ದೇವೆ ಎಂದರು. ಮೂರು ಇಂಟರ‍್ಯಾಕ್ಟ್ ಕ್ಲಬ್, ಎರಡು ರೋಟರ‍್ಯಾಕ್ಟ್ ಕ್ಲಬ್ ಆರಂಭಿಸುವುದಾಗಿ ಘೋಷಿಸಿದರು. ಇಂಟರ‍್ಯಾಕ್ಟ್ ಕ್ಲಬ್ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನೋಟ್ ಬುಕ್ ವಿತರಿಸಲಾಯಿತು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

Like & Follow Facebook Page ” Digi Malenadu “

ಸಹಾಯಕ ಗವರ್ನರ್ ಕೆ.ಪಿ.ಶೆಟ್ಟಿ, ರಂಗರಾಜನ್, ನಿಕಟ ಪೂರ್ವ ಅಧಕ್ಷ ಮುಸ್ತಕ್ ಆಲಿ ಷಾ ಹಾಗೂ ಕಾರ್ಯದರ್ಶಿ ಶ್ರೀಕಾಂತ್, ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ನಮ್ಮ ಬಗ್ಗೆ :https://digimalenadu.com/about-us/

ಎನ್‌ಎಬಿಎಲ್ ಮಾನ್ಯತೆ ಪಡೆಯುವುದು ಅವಶ್ಯಕ

digimalenadu

ಶಿವಮೊಗ್ಗ
error: Content is protected !!