ವಿದ್ಯಾಸಂಸ್ಥೆಗಳ ಅಭಿವೃದ್ಧಿಗೆ ಯಶಸ್ವಿ ನಾಯಕರು ಅವಶ್ಯಕ

ವಿದ್ಯಾಸಂಸ್ಥೆಗಳ ಅಭಿವೃದ್ಧಿಗೆ ಯಶಸ್ವಿ ನಾಯಕರು ಅವಶ್ಯಕ

ಶಿವಮೊಗ್ಗ | 31 ಜುಲೈ 2025 | ಡಿಜಿ ಮಲೆನಾಡು.ಕಾಂ

ಇನ್ನೊಬ್ಬರ ಸಾಮರ್ಥ್ಯವನ್ನು ಕರಾರುವಾಕ್ಕಾಗಿ ಗುರುತಿಸಿ ಬೆಳೆಸುವ ಯಶಸ್ವಿ ನಾಯಕರು ವಿದ್ಯಾಸಂಸ್ಥೆಗಳ ಅಭಿವೃದ್ಧಿಗೆ ಅತ್ಯವಶ್ಯಕ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣರಾವ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ನಗರದ ಎಸ್.ಆರ್.ನಾಗಪ್ಪಶೆಟ್ಟಿ ಸ್ಮಾರಕ ರಾಷ್ಟ್ರೀಯ ಅನ್ವಯಿಕ ವಿಜ್ಞಾನ ಕಾಲೇಜಿನಲ್ಲಿ ನಿರ್ಮಿಸಿರುವ ನೂತನ ಬಿ-ಬ್ಲಾಕ್ ಕಟ್ಟಡವನ್ನು ಬುಧವಾರ ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಎನ್ಇಎಸ್ ಸಂಸ್ಥೆಯ ವಿವಿಧ ಶಾಲಾ ಕಾಲೇಜುಗಳನ್ನು ಮತ್ತಷ್ಟು ಮೇಲ್ದರ್ಜೆಗೆ ಏರಿಸುವ ಕಾರ್ಯ ನಡೆಯುತ್ತಿದೆ‌. ವಿಶೇಷವಾಗಿ ಅನುದಾನಿತ ಶಾಲೆಗಳನ್ನು ಆಧುನಿಕತೆಗೆ ತಕ್ಕಂತೆ ಉನ್ನತಿಕರಣಗೊಳಿಸುತ್ತಿದ್ದು, ಗ್ರಾಮೀಣ ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳು ಇದರ ಲಾಭ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

ಉಪನ್ಯಾಸಕರಲ್ಲಿ ನಿರಂತರ ಕಲಿಕಾ ಪ್ರಕ್ರಿಯೆ ರೂಢಿಗತವಾಗಬೇಕು. ಆಗ ಮಾತ್ರ ತರಗತಿಯಲ್ಲಿ ಗುಣಮಟ್ಟದ ಬೋಧನೆ ಮೂಲಕ ವಿದ್ಯಾರ್ಥಿಗಳನ್ನು ತಲುಪಲು ಸಾಧ್ಯ. ಈ ಹಿನ್ನೆಲೆಯಲ್ಲಿ ವಿದ್ಯಾಸಂಸ್ಥೆಯ ಗುಣಮಟ್ಟವನ್ನು ಹೆಚ್ಚಿಸಲು ಆದ್ಯತೆ ನೀಡಬೇಕು. ಶಿಕ್ಷಕರ ಕಾರ್ಯಕ್ಷಮತೆ ಹೆಚ್ಚಾಗಬೇಕು. ವಿದ್ಯಾರ್ಥಿಗಳಲ್ಲಿ ಸಂಸ್ಕೃತಿ ಸದಾಚಾರಗಳನ್ನು ಬಿತ್ತುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಕಾಲೇಜು ಬೆಳೆದಂತೆಲ್ಲ ಸವಾಲುಗಳು ಹೆಚ್ಚುತ್ತಿರುತ್ತದೆ. ಈಗಿನ ವಿದ್ಯಾರ್ಥಿಗಳ ಅಪೇಕ್ಷೆ, ಕಲಿಕಾ ಸಾಮರ್ಥ್ಯಗಳು ವ್ಯತ್ಯಾಸಗೊಳ್ಳುತ್ತಲೆ ಇರುತ್ತದೆ. ಅದಕ್ಕೆ ತಕ್ಕಂತೆ ಉಪನ್ಯಾಸಕರು ಉನ್ನತಿಕರಣಗೊಳ್ಳುವ ಸವಾಲಿದೆ. ಹೊಸ ತಾಂತ್ರಿಕ ಮತ್ತು ಬೋಧನಾ ಕೌಶಲ್ಯತೆ ಕಲಿಯಬೇಕು ಎಂದು ಹೇಳಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

Like & Follow Facebook Page ” Digi Malenadu “

ಎನ್ಇಎಸ್ ಸಹ ಕಾರ್ಯದರ್ಶಿ ಡಾ. ಪಿ.ನಾರಾಯಣ, ಖಜಾಂಚಿ ಡಿ.ಜಿ.ರಮೇಶ್, ನಿರ್ದೇಶಕರಾದ ಮೈಲಾರಪ್ಪ, ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಶ್ರೀಕೃಷ್ಣ, ಅನಂತದತ್ತಾ, ಸೀತಾಲಕ್ಷ್ಮೀ, ಮಾಧುರಾವ್, ಸುಧೀರ್, ಎಚ್.ಸಿ.ಶಿವಕುಮಾರ್, ಆಜೀವ ಸದಸ್ಯರಾದ ರುಕ್ಮಿಣಿ ವೇದವ್ಯಾಸ, ಕಿಶೋರ್ ಶೀರನಾಳಿ, ರವೀಂದ್ರ, ವಿಖ್ಯಾತ್, ಗುರುಪ್ರಸಾದ್, ಜಗದೀಶ್, ಕುಲಸಚಿವ ಪ್ರೊ. ಎನ್.ಕೆ.ಹರಿಯಪ್ಪ, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ, ಪ್ರಾಂಶುಪಾಲ ಡಾ. ಎಲ್.ಕೆ.ಅರವಿಂದ, ಲಕ್ಷ್ಮಣ್ ಮತ್ತಿತರರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ನಮ್ಮ ಬಗ್ಗೆ :https://digimalenadu.com/about-us/

ಇಂಜಿನಿಯರಿಂಗ್ ವಿದ್ಯಾರ್ಥಿಗಳ ನಾವೀನ್ಯ ಯೋಜನೆಗಳ ಪ್ರದರ್ಶನ

digimalenadu

ಶಿವಮೊಗ್ಗ
error: Content is protected !!