ಇತಿಹಾಸ ಸೃಷ್ಟಿಸುವ ಆದರ್ಶ ಗುಣಗಳನ್ನು ರೂಡಿಸಿಕೊಳ್ಳಿ, ನ್ಯಾಷನಲ್ ಫಾರ್ಮಸಿ ಕಾಲೇಜಿನಲ್ಲಿ ಕಲಾ ಸಂಗಮ
ಶಿವಮೊಗ್ಗ | 22 ಆಗಸ್ಟ್ 2025 | ಡಿಜಿ ಮಲೆನಾಡು.ಕಾಂ
ಆಧುನಿಕ ಆಕರ್ಷಣೆಗಳು ಕ್ಷಣಿಕವಾಗಿದ್ದು, ಅದರಿಂದ ಹೊರಬಂದು ಇತಿಹಾಸ ಸೃಷ್ಟಿಸುವ ಆದರ್ಶ ಗುಣಗಳನ್ನು ಯುವ ಸಮೂಹ ರೂಡಿಸಿಕೊಳ್ಳಬೇಕು ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ನಗರದ ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಿಂದ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಎನ್.ಸಿ.ಪಿ ಕಲಾ ಸಂಗಮ 2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಲಾತ್ಮಕತೆ ಬದುಕಿಗೆ ಅತ್ಯವಶ್ಯಕ. ಕಲಾತ್ಮಕ ಬದುಕು ಸಂಪನ್ನಗೊಳ್ಳಲು ಅಧ್ಯಯನದ ಬಗ್ಗೆ ಆಸಕ್ತಿ ಹಾಗೂ ಎಲ್ಲ ರಂಗದಲ್ಲಿ ಮುಕ್ತವಾಗಿ ತೊಡಗಿಸಿಕೊಳ್ಳಬೇಕು. ಬದುಕು ಒಂದು ಕಲೆ. ಸಂವಹನ ಒಂದು ಕಲೆ. ಕಲೆ ಸರಿಯಾದ ದಿಕ್ಕಿನಲ್ಲಿ ಆಗದೆ ಇದ್ದರೆ ಬದುಕಿಗೆ ಕಲೆಯಾಗಿ ಉಳಿದುಬಿಡುತ್ತದೆ ಎಂದು ತಿಳಿಸಿದರು.
ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ವಿದ್ಯಾರ್ಥಿ ಹಂತದಲ್ಲಿ ಸಿಗುವ ಸಾಂಸ್ಕೃತಿಕ ವಾತಾವರಣವು ಬದುಕಿನ ಉನ್ನತಿಗೆ ಸಹಕರಿಸುವ ಕೌಶಲ್ಯತೆಗಳನ್ನು ರೂಡಿಸಿಕೊಳ್ಳುವಲ್ಲಿ ಸಹಕಾರಿಯಾಗಿದೆ. ಸಂಗೀತ, ಸಾಹಿತ್ಯ, ಸಾಂಸ್ಕೃತಿಕ ಕ್ರಿಯಾಶೀಲತೆಯು ಮನಸ್ಸಿನ ಆರೋಗ್ಯವನ್ನು ಕಾಪಾಡುವಲ್ಲಿ ದಿವ್ಯ ಔಷಧಿ ಎಂಬ ಸತ್ಯವನ್ನು ಫಾರ್ಮಸಿ ವಿದ್ಯಾರ್ಥಿಗಳು ಅರಿಯಬೇಕಿದೆ ಎಂದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
Like & Follow Facebook Page ” Digi Malenadu “
ಕಾಲೇಜಿನ ಪ್ರಾಚಾರ್ಯ ಡಾ. ಜಿ.ನಾರಾಯಣಮೂರ್ತಿ, ಪೃಥ್ವಿ ಗೌಡ ಇದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ನಮ್ಮ ಬಗ್ಗೆ :https://digimalenadu.com/about-us/
