ಹುಲಿ ದತ್ತು ಪಡೆದ ಎನ್ಇಎಸ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜು

ಹುಲಿ ದತ್ತು ಪಡೆದ ಎನ್ಇಎಸ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜು

ಶಿವಮೊಗ್ಗ | 31 ಆಗಸ್ಟ್‌ 2025 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜು ಹುಲಿ ದತ್ತು ಪಡೆಯುವ ಮೂಲಕ ಹುಲಿ ದತ್ತು ಯೋಜನೆಗೆ ಜೊತೆಯಾಗಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ವಿದ್ಯಾರ್ಥಿಗಳು ಸಿಬ್ಬಂದಿ ವರ್ಗ ಕೂಡಿ ವಿದ್ಯಾರ್ಥಿ ಕಲ್ಯಾಣ ಸಮಿತಿ ಮೂಲಕ ನಗರದ ಹುಲಿ ಸಿಂಹಧಾಮದಲ್ಲಿರುವ ಒಂದು ಹುಲಿಯನ್ನು ಒಂದು ತಿಂಗಳ ಅವಧಿಗೆ ಮತ್ತು ನವಿಲನ್ನು ಒಂದು ವರ್ಷದ ಅವಧಿ ನಿರ್ವಹಣೆ, ಆಹಾರ ಮತ್ತು ಆರೈಕೆಗಾಗಿ ನಿರ್ದಿಷ್ಟ ಮೊತ್ತವನ್ನು ಕೊಡುಗೆಯಾಗಿ ನೀಡಿದ್ದಾರೆ.

ಗುರುವಾರ ಕಾಲೇಜಿನ ಸಭಾಂಗಣದಲ್ಲಿ ನಡೆದ ದತ್ತು ಸ್ವೀಕಾರ ಕಾರ್ಯಕ್ರಮ ಉದ್ಘಾಟಿಸಿದ ಹುಲಿ ಸಿಂಹಧಾಮ ಅರಣ್ಯ ಶ್ರೇಣಿ ನಿರ್ದೇಶಕ ಬಿ.ಆರ್.ಅಮರಕ್ಷರ್ ಮಾತನಾಡಿ, ಪರಿಸರ ಮತ್ತು ಮಾನವನ ನಡುವೆ ಅವಿನಾಭಾವ ಸಂಬಂಧವಿದೆ‌. ಪರಿಸರವು ಮಾನವನ ಅವಿಭಾಜ್ಯ ಅಂಗವಾಗಿದ್ದು, ಮನುಷ್ಯನಷ್ಟೆ ಪರಿಸರದಲ್ಲಿ ಬದುಕುವ ಹಕ್ಕನ್ನು ಪ್ರಾಣಿ ಪಕ್ಷಿಗಳು ಹೊಂದಿದೆ. ಪ್ರಾಣಿಗಳನ್ನು ಸಂರಕ್ಷಿಸುವ ಕಾರ್ಯಕ್ಕೆ ನಾಗರಿಕರನ್ನು ಹೆಚ್ಚಾಗಿ ತೊಡಗಿಸಿಕೊಳ್ಳುವುದೆ ಈ ದತ್ತು ಯೋಜನೆ ಮಹತ್ವದ ಉದ್ದೇಶ ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ನಿರ್ದೇಶಕ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ ಮಾತನಾಡಿ, ಪರಿಸರ ಮತ್ತು ವನ್ಯಜೀವಿಗಳ ಸಂರಕ್ಷಣೆ ಮಾಡದ ಹೊರತಾಗಿ ಮುಂದಿನ ದಿನಗಳಲ್ಲಿ ಪ್ರಾಣಿಗಳನ್ನು ಕೇವಲ ಚಿತ್ರ ಪಟಗಳಲ್ಲಿ ನೋಡಬೇಕಾಗುತ್ತದೆ. ಅಂತಹ ಸನ್ನಿವೇಶ ಇಡೀ ಮನುಕುಲಕ್ಕೆ ತೊಂದರೆಯನ್ನು ಉಂಟುಮಾಡುತ್ತದೆ ಎಂದು ವಿವರಿಸಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

Like & Follow Facebook Page ” Digi Malenadu “

ಕಾಲೇಜಿನ ಪ್ರಾಚಾರ್ಯ ಡಾ. ಬಿ.ಎಸ್.ಶಿವಪ್ರಸಾದ್, ಅರಣ್ಯ ಶಿಕ್ಷಣ ಅಧಿಕಾರಿ ಸಿಂಚನ, ಸಾರ್ವಜನಿಕ ಸಂಪರ್ಕಾಧಿಕಾರಿ ಐಜಾ ಇತರರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ನಮ್ಮ ಬಗ್ಗೆ :https://digimalenadu.com/about-us/

ಸಮನ್ವಯ ಕಾಶಿಗೆ ಐಸಿರಿ ಸಾಧಕ ಪ್ರಶಸ್ತಿ

digimalenadu

ಶಿವಮೊಗ್ಗ
error: Content is protected !!