ಎಂಎಸ್ಎಂಇಗಳ ಕಾರ್ಯಕ್ಷಮತೆ, ವೇಗ ಹೆಚ್ಚಿಸಲು ಕಾರ್ಯಕ್ರಮ
ಶಿವಮೊಗ್ಗ | 31ಆಗಸ್ಟ್ 2025 | ಡಿಜಿ ಮಲೆನಾಡು.ಕಾಂ
ಹೆಚ್ಚಿನ ಉದ್ಯೋಗಾವಕಾಶ ಮತ್ತು ಆರ್ಥಿಕ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡುತ್ತಿರುವ ಎಂಎಸ್ಎಂಇಗಳ ಕಾರ್ಯಕ್ಷಮತೆ ಮತ್ತು ವೇಗ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ರೂಪಿಸಿರುವ ಕಾರ್ಯಕ್ರಮಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗಣೇಶ್ ಆರ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ಗೋಪಾಲ ಗೌಡ ಬಡಾವಣೆಯ ಜಿಲ್ಲಾ ಔಷಧ ಭವನದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಮೊಗ್ಗ, ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರ ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಸಹಯೋಗದಲ್ಲಿ “ಎಂಎಸ್ಎಂಇಗಳ ಕಾರ್ಯಕ್ಷಮತೆ ಹೆಚ್ಚಿಸುವುದು ಮತ್ತು ವೇಗಗೊಳಿಸುವುದು” ಯೋಜನೆಯಡಿಯಲ್ಲಿ ಆಯೋಜಿಸಿದ್ದ ಲೀನ್ ಯೋಜನೆ ಮತ್ತು ಝಡ್.ಇ.ಡಿ. ಹಾಗೂ ರಫ್ತು ಕುರಿತ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೃಷಿ ನಂತರ ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸುತ್ತಿರುವುದು ಎಂಎಸ್ಎಂಇಗಳು. ಕಾಸಿಯಾ ಎಂಎಸ್ಎಂಇಗಳಿಗೆ ಪೂರಕವಾಗಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
ಸಿಡ್ಬಿ ಡಿಜಿಎಂ ಗುಣಶೇಖರನ್ ಮಾತನಾಡಿ, ಯುವ ಮತ್ತು ನವೋದ್ಯಮಿಗಳಿಗೆ ಕೈಗಾರಿಕೆಯಲ್ಲಿನ ವಿವಿಧ, ಹೊಸ ಹೊಸ ಅವಕಾಶಗಳ ಕುರಿತು ಮಾಹಿತಿ ಮತ್ತು ಅರಿವು ಮೂಡಿಸಲು ಕಾರ್ಯಕ್ರಮ ಸಹಕಾರಿಯಾಗಿದೆ ಎಂದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಗೋಪಿನಾಥ್ ಬಿ. ಮಾತನಾಡಿ, 1949 ರಲ್ಲಿ ಸ್ಥಾಪನೆಯಾದ ಕಾಸಿಯಾ ನಿರಂತರವಾಗಿ ಎಂಎಸ್ಎಂಇ ಗಳ ಶ್ರೇಯೋಭಿವೃದ್ಧಿಗಾಗಿ ಕೆಲಸ ಮಾಡುತ್ತಿದೆ. ಎಂಎಸ್ಎಂಇಗಳು ಸಾಕಷ್ಟು ಉದ್ಯೋಗ ಸೃಷ್ಟಿಸಿದ್ದು ದೇಶದ ಜಿಡಿಪಿ ಗೆ ಶೇ. 29 ರಷ್ಟು ಕೊಡುಗೆ ನೀಡಿದ್ದು, ಸರ್ಕಾರ ತನ್ನ ಬಜೆಟ್ನಲ್ಲಿ ಎಂಎಸ್ಎಂಇಗಳಿಗೆ ಪೂರಕ ಯೋಜನೆಗಳನ್ನು ನೀಡಿದೆ ಎಂದು ತಿಳಿಸಿದರು.
ಮಾಚೇನಹಳ್ಳಿ ಕೈಗಾರಿಕಾ ಸಂಘದ ಅಧ್ಯಕ್ಷ ಬೆನಕಪ್ಪ ಮಾತನಾಡಿ, ಎಂಎಸ್ಎಂಇಗಳಿಗೆ ಕಾಸಿಯ, ಡಿಐಸಿ ಸಹಕಾರ ಅತ್ಯುತ್ತಮವಾಗಿದೆ. ದೇಶ ಪ್ರಗತಿ ಪಥದಲ್ಲಿದೆ. ಅವಕಾಶಗಳು, ಸೌಲಭ್ಯಗಳು ಬಹಳಷ್ಟಿವೆ. ರಫ್ತಿಗೆ ತುಂಬಾ ಅವಕಾಶಗಳಿವೆ. ಹೊಸ ತಂತ್ರಜ್ಞಾನ, ಆರ್ಥಿಕ ಸಹಕಾರಗಳಿವೆ ಎಂದರು.
ಜಿಲ್ಲಾ ಕೈಗಾರಿಕಾ ಸಂಘದ ಅಧ್ಯಕ್ಷ ಜೋಯಿಸ್ ರಾಮಾಚಾರ್ ಮಾತನಾಡಿ, ಪ್ರತಿ ಜಿಲ್ಲೆಯಲ್ಲಿ ಈ ಕಾರ್ಯಕ್ರಮಗಳು ನಡೆಯುತ್ತಿದ್ದು, ಯೋಜನೆಗಳ ಕುರಿತು ಅರಿವು ನೀಡುತ್ತಿದೆ. ಬ್ಯಾಂಕಿಂಗ್ ವಲಯದಿಂದ ಸಾಕಷ್ಟು ಪ್ರಯೋಜನಗಳಿವೆ. ಲೀನ್ ಯೋಜನೆಯಿಂದ ಉತ್ಪಾದನೆ ಪ್ರಕ್ರಿಯೆ ವೆಚ್ಚ ಕಡಿಮೆ ಆಗುತ್ತಿದೆ. ಕೈಗಾರಿಕೆ ಬೆಳೆಯಬೇಕೆಂದರೆ ದೇಶೀಯ ಮಾರುಕಟ್ಟೆ ಜತೆಗೆ ವಿದೇಶಿ ಮಾರುಕಟ್ಟೆಯನ್ನು ಪ್ರವೇಶಿಸಬೇಕು. ವಿವಿಧ ಯೋಜನೆಗಳು, ವಿದೇಶಿ ಮಾರುಕಟ್ಟೆ ಮತ್ತು ರಫ್ತು ಕುರಿತು ಕಾರ್ಯಕ್ರಮದಲ್ಲಿ ಸಾಕಷ್ಟು ಮಾಹಿತಿ ಮತ್ತು ಸಹಕಾರ ದೊರೆಯಲಿದೆ ಎಂದರು.
ವಿ.ಟಿ.ಪಿ.ಸಿ. ಧಾರವಾಡ ಶಾಖಾ ಕಚೇರಿ ಸಹಾಯಕ ನಿರ್ದೇಶಕ ಟಿ. ಎಸ್. ಮಲ್ಲಿಕಾರ್ಜುನ ಮಾತನಾಡಿ, ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರ ಸರ್ಕಾರದ ಅಂಗ ಸಂಸ್ಥೆಯಾಗಿದ್ದು, ರಫ್ತು ನೋಡಲ್ ಏಜೆನ್ಸಿಯಾಗಿದೆ. ರಫ್ತಿಗೆ ಉತ್ತೇಜನ ನೀಡಲಿದೆ. 2024-25 ನೇ ಸಾಲಿನಲ್ಲಿ ರಾಜ್ಯ ಶೇ. 40 ರಷ್ಟು ಐಟಿ ಸರ್ವಿಸ್ ರಫ್ತು ಮಾಡಿದೆ. ಇತರೆ ರಫ್ತಿನಲ್ಲಿ 4 ನೇ ಸ್ಥಾನದಲ್ಲಿದ್ದು ಎರಡನೇ ಸ್ಥಾನಕ್ಕೆ ಬರಲು ಪ್ರಯತ್ನ ಮಾಡಲಾಗುತ್ತಿದೆ. ಕಳೆದ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಿಂದ 443.7 ಕೋಟಿ ರೂ. ಮೊತ್ತದ ಸರಕು ರಫ್ತು ಮಾಡಲಾಗಿದೆ ಎಂದರು.
ವಿಟಿಪಿಸಿಯು ರಫ್ತುದಾರರಿಗೆ ಮಾರುಕಟ್ಟೆ ಅವಕಾಶ ನೀಡುತ್ತದೆ. ಮಾರುಕಟ್ಟೆ ಅಭಿವೃದ್ಧಿ ಸಹಾಯ ಯೋಜನೆಯಡಿ ಸಹಕರಿಸುತ್ತದೆ. ವಿದೇಶಗಳಲ್ಲಿ ನಡೆಯುವ ಟ್ರೇಡ್ ಫೇರ್ಗಳಲ್ಲಿ ಭಾಗವಹಿಸಲು ಸಹಾಯ ಮಾಡುತ್ತದೆ ಎಂದು ತಿಳಿಸಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
Like & Follow Facebook Page ” Digi Malenadu “
ಸಿಡ್ಬಿ ಪ್ರಾದೇಶಿಕ ಕಚೇರಿ ಪ್ರಧಾನ ವ್ಯವಸ್ಥಾಪಕ ಎಸ್.ಶ್ರೀಪತಿ, ಕಾಸಿಯಾ ಗೌರವ ಪ್ರಧಾನ ಕಾರ್ಯದರ್ಶಿ ಎಸ್. ಎಂ. ಹುಸೇನ್, ಗ್ರಾಮೀಣ ಜಂಟಿ ಕಾರ್ಯದರ್ಶಿ ಕೇಶವ ಮೂರ್ತಿ ಆರ್, ನಗರ ಜಂಟಿ ಕಾರ್ಯದರ್ಶಿ ಎಸ್. ವಿಶ್ವೇಶ್ವರಯ್ಯ, ಕಾಸಿಯಾ ಉಪಾಧ್ಯಕ್ಷ ನಿಂಗಣ್ಣ ಎಸ್. ಬಿರಾದರ, ಉದ್ಯಮಿಗಳು ಹಾಜರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ನಮ್ಮ ಬಗ್ಗೆ :https://digimalenadu.com/about-us/
