ಸುಶಿಕ್ಷಿತ ಯುವ ಸಮೂಹ ದೇಶದ ಆಶಾಕಿರಣ
ಶಿವಮೊಗ್ಗ | 16 ಆಗಸ್ಟ್ 2025 | ಡಿಜಿ ಮಲೆನಾಡು.ಕಾಂ
ಸಮಾಜಮುಖಿ ಕಾರ್ಯಕ್ಕೆ ಸುಶಿಕ್ಷಿತ ಯುವ ಸಮೂಹ ತೆರೆದುಕೊಳ್ಳುವ ಮೂಲಕ ದೇಶದ ಆಶಾಕಿರಣವಾಗಿ ಪ್ರಜ್ಚಲಿಸಬೇಕು ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯಿಂದ ಸಂಸ್ಥೆ ಆವರಣದಲ್ಲಿ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ದೇಶದ ಹಬ್ಬವನ್ನು ಏಕತೆಯ ಸಾರವಾಗಿ, ಒಟ್ಟಾಗಿ ಕೂಡಿ ಆಚರಿಸುತ್ತೇವೆ. ಅದುವೆ ಭಾರತೀಯರ ವಿಶೇಷತೆ. ಭಾರತ ಸ್ವಾತಂತ್ರ್ಯಗೊಂಡ ಸಂದರ್ಭದಿಂದ ಈವರೆಗೆ ಜನಸಂಖ್ಯೆ ಎಂಬುದು ಮೂರು ಪಟ್ಟು ಹೆಚ್ಚಾಗಿದೆ. ಸಮಾಜದ ಸುಸ್ಥಿರ ಬೆಳವಣಿಗೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಪ್ರಮುಖ ಪಾತ್ರ ವಹಿಸಿದೆ. ಸರ್ಕಾರಗಳು ಅನೇಕ ಯೋಜನೆಗಳನ್ನು ರೂಪಿಸಿದ್ದರು ಕೂಡ ಸಾಮಾನ್ಯ ಜನರಿಗೆ ಯೋಜನೆಗಳ ಫಲ ತಲುಪುವಲ್ಲಿ ಇಂದಿಗೂ ಸವಾಲುಗಳಿವೆ. ಸುಶಿಕ್ಷಿತ ಸಮಾಜ ಅಂತಹ ಸವಾಲುಗಳನ್ನು ಎದುರಿಸುವ ಕಾರ್ಯಕ್ಕೆ, ಸಾಮಾನ್ಯ ಜನರ ಕಷ್ಟಗಳಿಗೆ ಸ್ಪಂದಿಸುವ ಕಾರ್ಯಕ್ಕೆ ಸಜ್ಜಾಗಬೇಕು ಎಂದು ತಿಳಿಸಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
Like & Follow Facebook Page ” Digi Malenadu “
ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ, ಖಜಾಂಚಿ ಡಿ.ಜಿ.ರಮೇಶ್, ನಿರ್ದೇಶಕರಾದ ಎಚ್.ಸಿ.ಶಿವಕುಮಾರ್, ಮಧುರಾವ್, ಆಜೀವ ಸದಸ್ಯರಾದ ಗೋವಿಂದರಾಜ್, ಜಗದೀಶ್, ಆನಂದ, ಗುರುಪ್ರಸಾದ್, ಕುಲಸಚಿವರಾದ ಪ್ರೊ. ಎನ್.ಕೆ.ಹರಿಯಪ್ಪ, ವಿವಿಧ ವಿದ್ಯಾಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿದ್ದರು. ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ.ನೃಪತುಂಗ ನಿರೂಪಿಸಿದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ನಮ್ಮ ಬಗ್ಗೆ :https://digimalenadu.com/about-us/
