ಉದಯೋನ್ಮುಖ ಕ್ಷೇತ್ರಗಳ ವಾಸ್ತವ ಬೇಡಿಕೆಗಳನ್ನು ಅರಿಯಿರಿ
ಶಿವಮೊಗ್ಗ | 1 ಸೆಪ್ಟೆಂಬರ್ 2025 | ಡಿಜಿ ಮಲೆನಾಡು.ಕಾಂ
ಸ್ಪರ್ಧಾತ್ಮಕ ಯುಗದಲ್ಲಿ ಉದಯೋನ್ಮುಖ ಕ್ಷೇತ್ರಗಳ ವಾಸ್ತವ ಬೇಡಿಕೆಗಳನ್ನು ಅರಿತು ಅದಕ್ಕೆ ಹೊಂದಿಕೆಯಾಗುವ ಅಧ್ಯಾಪನ ಕೌಶಲ್ಯತೆಗಳನ್ನು ರೂಡಿಸಿಕೊಳ್ಳಬೇಕು ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕುಲಪತಿ ಡಾ. ಎಸ್.ವಿದ್ಯಾಶಂಕರ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ನಗರದ ಜೆಎನ್ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮತ್ತು ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಆಶ್ರಯದಲ್ಲಿ ಶನಿವಾರ ಕಾಲೇಜಿನ ಸಭಾಂಗಣದಲ್ಲಿ ವಿಟಿಯು ಕಾಲೇಜುಗಳ ಅನ್ವಯಿಕ ವಿಜ್ಞಾನ ಅಧ್ಯಾಪಕರಿಗಾಗಿ ಏರ್ಪಡಿಸಿದ್ದ ‘ಅನ್ವಯಿಕ ವಿಜ್ಞಾನಗಳ ಪರಿಷ್ಕೃತ ಪಠ್ಯಕ್ರಮ’ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಭವಿಷ್ಯದ ಇಂಜಿನಿಯರ್ಗಳನ್ನು ರೂಪಿಸುವಲ್ಲಿ ಅನ್ವಯಿಕ ವಿಜ್ಞಾನ ಅವಶ್ಯಕ. ಅಂತಹ ಅನ್ವಯಿಕ ವಿಜ್ಞಾನದ ವಿಕಾಸದಿಂದ ಇಂದಿನ ನಾವೀನ್ಯ ಬೆಳವಣಿಗೆಗಳ ಕುರಿತಾಗಿ, ನವೀನ ಬೋಧನಾ ಕೌಶಲ್ಯತೆಗಳ ಮೂಲಕ ವಿದ್ಯಾರ್ಥಿಗಳನ್ನು ತಲುಪಲು ಪ್ರಯತ್ನಿಸಬೇಕು. ವೃತ್ತಿಪರ ಬೆಳವಣಿಗೆಯಲ್ಲಿ ಸಮರ್ಪಣಾ ಮನೋಭಾವದಿಂದ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.
ವಿಟಿಯು ಕಾರ್ಯಕಾರಿ ಮಂಡಳಿ ಸದಸ್ಯ ಡಾ. ಎಚ್.ಎನ್.ರೆಡ್ಡಪ್ಪ ಮಾತನಾಡಿ, ಬದಲಾಗುತ್ತಿರುವ ತಂತ್ರಜ್ಞಾನ, ಉದ್ಯಮ ಮತ್ತು ಸಂಶೋಧನೆಗೆ ಹೊಂದಿಕೊಳ್ಳಲು ಪಠ್ಯಕ್ರಮವನ್ನು ನಿಯಮಿತವಾಗಿ ಪರಿಷ್ಕರಿಸುವುದು ಅತ್ಯಂತ ಅಗತ್ಯ ಎಂದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಎಲ್ಲ ಇಂಜಿನಿಯರಿಂಗ್ ವಿಷಯಗಳಿಗೆ ಆಧಾರವಾಗಿರುವ ಮೂಲ ವಿಜ್ಞಾನದ ವಿಷಯಗಳನ್ನು ಬಳಸಿಕೊಂಡು, ವಿಮರ್ಶಾತ್ಮಕ ಚಿಂತನೆ ಮತ್ತು ಸಮಸ್ಯೆಗಳ ಪರಿಹಾರಾತ್ಮಕ ಸಾಮರ್ಥ್ಯವನ್ನು ವಿದ್ಯಾರ್ಥಿಗಳಲ್ಲಿ ಉತ್ತೇಜಿಸಬೇಕು. ಪಠ್ಯಕ್ರಮ ಮತ್ತು ಬೋಧನಾ ವಿಧಾನಗಳು, ಮೂಲ ವಿಜ್ಞಾನದೊಂದಿಗೆ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನದ ನಾವೀನ್ಯ ವಿಚಾರಗಳನ್ನು ಸಂಪರ್ಕಿಸಿ ಹೊಸತನದ ಅನ್ವೇಷಣೆಗಳಿಗೆ ಪ್ರೇರಣೆ ನೀಡುವಂತೆ ಯುವ ಸಮೂಹವನ್ನು ಸಿದ್ದಗೊಳಿಸಬೇಕು ಎಂದು ಹೇಳಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
Like & Follow Facebook Page ” Digi Malenadu “
ಕಾಲೇಜಿನ ಪ್ರಾಚಾರ್ಯ ಡಾ. ವೈ.ವಿಜಯಕುಮಾರ್, ಸಂಶೋಧನಾ ಡೀನ್ ಡಾ. ಎಸ್.ವಿ.ಸತ್ಯನಾರಾಯಣ, ವಿಟಿಯು ಮೂಲ ವಿಜ್ಞಾನಗಳ ಪಠ್ಯಕ್ರಮ ಮಂಡಳಿಯ ಅಧ್ಯಕ್ಷ ಡಾ. ಎಂ.ಎಚ್. ಮೊಯಿನುದ್ದೀನ್ ಖಾನ್ ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ನಮ್ಮ ಬಗ್ಗೆ :https://digimalenadu.com/about-us/
