ಕಲಿಕಾ ಸಾಮಾರ್ಥ್ಯ ವೃದ್ಧಿಸುವ ರಸಪ್ರಶ್ನೆ ಸ್ಪರ್ಧೆ

ಕಲಿಕಾ ಸಾಮಾರ್ಥ್ಯ ವೃದ್ಧಿಸುವ ರಸಪ್ರಶ್ನೆ ಸ್ಪರ್ಧೆ

ಶಿವಮೊಗ್ಗ | 11 ಸೆಪ್ಟೆಂಬರ್‌ 2025 | ಡಿಜಿ ಮಲೆನಾಡು.ಕಾಂ

ರಸಪ್ರಶ್ನೆ ಮತ್ತು ಭಾಷಣ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಕಲಿಯುವ ಸಾಮರ್ಥ್ಯ ವೃದ್ಧಿಸುತ್ತದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಪೇರೋ ಕಾಸ್ಟ್  ಸಭಾಂಗಣದಲ್ಲಿ  ಸರ್ ಎಂ ವಿಶ್ವೇಶ್ವರಯ್ಯ ಅವರ ಜನ್ಮದಿನಾಚರಣೆ ಮತ್ತು ಇಂಜಿನಿಯರ್ಸ್ ಡೇ ಪ್ರಯುಕ್ತ ಏರ್ಪಡಿಸಿದ್ದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಮತ್ತು ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಸಪ್ರಶ್ನೆ ಮತ್ತು ಭಾಷಣ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಅರಿವಿನ ಕೌಶಲ್ಯಗಳನ್ನು ಹೆಚ್ಚಿಸುವುದು, ಜ್ಞಾನ ವೃದ್ಧಿಸುವುದು,  ವಿಮರ್ಶಾತ್ಮಕ ಚಿಂತನೆ ಮತ್ತು ಆತ್ಮವಿಶ್ವಾಸವನ್ನು ಬೆಳೆಸುವುದು ಮತ್ತು ಕಲಿಕೆಯಲ್ಲಿ ತೊಡಗಿಸಿಕೊಳ್ಳುವಿಕೆ ಹೆಚ್ಚಿಸುವುದಕ್ಕೆ ನೆರವಾಗುತ್ತದೆ ಎಂದು ತಿಳಿಸಿದರು.

ಅಧ್ಯಯನ ಮಾಡಲು ಮತ್ತು ಭಾಗವಹಿಸಲು ಪ್ರೇರೇಪಿಸುವ ಸಕಾರಾತ್ಮಕ ಕಲಿಕಾ ಶೈಲಿಯನ್ನು ಒದಗಿಸುತ್ತವೆ. ವಿದ್ಯಾರ್ಥಿಗಳು ತಮ್ಮ ಸಾರ್ವಜನಿಕ ಭಾಷಣ ಮತ್ತು ಸಂವಹನ ಸಾಮರ್ಥ್ಯಗಳನ್ನು ಅಭ್ಯಾಸ ಮಾಡಲು ಮತ್ತು ಪರಿಷ್ಕರಿಸಲು ರಚನಾತ್ಮಕ ವೇದಿಕೆಗಳನ್ನು ಭಾಷಣ ಕಾರ್ಯಕ್ರಮಗಳು ನೀಡುತ್ತವೆ. ಇದು ಆತ್ಮವಿಶ್ವಾಸ ಮತ್ತು ಆತ್ಮಸ್ಥೈರ್ಯ ಬೆಳೆಸುತ್ತದೆ ಎಂದರು.

ಡಿವಿಎಸ್ ಸಂಯುಕ್ತ ಪದವಿಪೂರ್ವ  ಕಾಲೇಜಿನ ಉಪನ್ಯಾಸಕ ಕೆ.ಭಾಸ್ಕರ್, ಸಿ.ಎಸ್ ರಾಜೇಶ್, ಶ್ರೀಧರ್ ಅವರು ರಸಪ್ರಶ್ನೆ ಮತ್ತು ಭಾಷಣ ಸ್ಪರ್ಧೆ ನಡೆಸಿಕೊಟ್ಟರು. ಡಿವಿಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಎಚ್.ಸಿ.ಉಮೇಶ್ ಅವರು  ರಸಪ್ರಶ್ನೆ ಮತ್ತು ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ಮೊದಲ ಮೂರು ವಿದ್ಯಾರ್ಥಿಗಳ ಹೆಸರುಗಳನ್ನು ಘೋಷಿಸಿದರು. ರಸಪ್ರಶ್ನೆ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಾದ  ಚೆತುಸ್ಕಿ ಆತ್ರೇಯ ಪ್ರಥಮ ಸ್ಥಾನ,  ಅಂಶುಮಂತ್ ಮಂಜು ಪಾಟೀಲ್ ದ್ವಿತೀಯ ಸ್ಥಾನ, ದೀಕ್ಷಿತ್ ಕಾರ್ತಿಕ್ ತೃತೀಯ ಸ್ಥಾನ ವಿಜೇತರಾದರು. ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಅವರ ಬಗ್ಗೆ ನಡೆದ ಭಾಷಣ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಾದ ಶ್ರದ್ದಾ ಪ್ರಥಮ ಸ್ಥಾನ,  ಶಾರ್ವರಿ ದ್ವಿತೀಯ ಸ್ಥಾನ, ಪ್ರಜ್ವಲ್ ಡಿ ತೃತೀಯ ಸ್ಥಾನ ಪಡೆದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

Like & Follow Facebook Page ” Digi Malenadu “

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯ್ ಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ  ಆರ್.ಮನೋಹರ, ನಿರ್ದೇಶಕರಾದ ಎಸ್. ಎಸ್.ಉದಯ ಕುಮಾರ್, ಗಣೇಶ್ ಎಂ. ಅಂಗಡಿ, ಬಿ.ಸುರೇಶ್ ಕುಮಾರ್, ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಭಾಗವಹಿಸಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ನಮ್ಮ ಬಗ್ಗೆ :https://digimalenadu.com/about-us/

ಹುಲಿ ದತ್ತು ಪಡೆದ ಎನ್ಇಎಸ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜು

digimalenadu

ಶಿವಮೊಗ್ಗ
error: Content is protected !!