ಆರೋಗ್ಯ ಕಾಪಾಡಿಕೊಳ್ಳಲು ಧ್ಯಾನ ಸಹಕಾರಿ

ಆರೋಗ್ಯ ಕಾಪಾಡಿಕೊಳ್ಳಲು ಧ್ಯಾನ ಸಹಕಾರಿ

ಶಿವಮೊಗ್ಗ | 20 ಡಿಸೆಂಬರ್‌ 2025 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ: ಆನಾಪಾನಸತಿ ಧ್ಯಾನ ಪದ್ಧತಿಯು ಧ್ಯಾನಗಳಲ್ಲಿ ಸರಳ ಮತ್ತು ಪರಿಣಾಮಕಾರಿ ಆಗಿದೆ ಎಂದು ಧ್ಯಾನ ತರಬೇತುದಾರ ಡಾ. ಅಯ್ಯಪ್ಪ ಪಿಂಡಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ರಾಜೇಂದ್ರ ನಗರದ ರೋಟರಿ ಶಾಲೆ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿ, ವಯಸ್ಸಿನ, ಸಮಯದ ಯಾವುದೇ ನಿರ್ಬಂಧ ಇಲ್ಲದೆ ಎಲ್ಲ ಕಾಲಗಳಲ್ಲಿಯೂ ಮಾಡಲು ಸಾಧ್ಯ. ಒಮ್ಮೆ ಉಚಿತವಾಗಿ ಕಲಿತು ಜೀವಮಾನಪೂರ್ತಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕೇವಲ ಶ್ವಾಸ ಗಮನಿಸುವ ಮೂಲಕ ಮನಸ್ಸನ್ನು ಶಾಂತವಾಗಿ ಇರಿಸಲು ಹಾಗೂ ದೇಹದ ಆರೋಗ್ಯ ಕಾಪಾಡಿಕೊಳ್ಳಲು ಮತ್ತು ನೆಮ್ಮದಿ ಜೀವನವನ್ನು ನಡೆಸಲು ಸಹಕಾರಿಯಾಗುತ್ತದೆ ಎಂದರು.

ಪ್ರಸ್ತುತ ಜೀವನಶೈಲಿ ಜನರ ಮಾನಸಿಕ ಸ್ವಾಸ್ಥ್ಯ ಕೆಡಿಸಿ ರೋಗಗಳಿಗೆ ಕಾರಣವಾಗಿದೆ. ಕಡಿಮೆ ವಯಸ್ಸಿನಲ್ಲೇ ಅನಾರೋಗ್ಯ ಎದುರಿಸುತ್ತಿದ್ದಾರೆ. ಜನರ, ಸಮಾಜದ ಹಾಗೂ ಪ್ರಪಂಚದ ಆರೋಗ್ಯಕ್ಕಾಗಿ ನಾವೆಲ್ಲರೂ ಧ್ಯಾನಯುಕ್ತ ಜೀವನ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ದೊಡ್ಡವೀರಪ್ಪ ಮಾತನಾಡಿ, ಪೊಲಿಯೋ ರೋಗ ನಿರ್ಮೂಲನೆ ಮಾಡುವ ಉದ್ದೇಶದಿಂದ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ನಡೆಸಲಾಗುತ್ತಿದೆ. ಈ ಕಾರ್ಯದಲ್ಲಿ ರೋಟರಿ ಸಂಸ್ಥೆ ಪಾತ್ರ ಮಹತ್ತರ ಎಂದರು.

ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ  ನೆಪ್ಚೂನ್ ಕಿಶೋರ್ ಮಾತನಾಡಿ, ರೋಟರಿ ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುವ ಜತೆಯಲ್ಲಿ ಆರೋಗ್ಯ ಅರಿವು ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದು ಹೇಳಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

Like & Follow Facebook Page ” Digi Malenadu “

ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಡಾ. ಧನಂಜಯ ರಾಂಪುರ, ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ನಿಯೋಜಿತ ಜಿಲ್ಲಾ ಗವರ್ನರ್ ವಸಂತ ಹೋಬಳಿದಾರ್, ಚಂದ್ರಹಾಸ್ ಪಿ ರಾಯ್ಕರ್, ವಿನಾಯಕ ಹೆಗಡೆ, ಗಣೇಶ್, ಅರುಣ್ ದೀಕ್ಷಿತ್, ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯ ಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ನಮ್ಮ ಬಗ್ಗೆ :https://digimalenadu.com/about-us/

ಆತ್ಮವಿಶ್ವಾಸ ವೃದ್ಧಿಸುವ ಇನ್ನರ್ ವ್ಹೀಲ್ ಸಂಸ್ಥೆ

digimalenadu

ಶಿವಮೊಗ್ಗ
error: Content is protected !!