ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಸ್ಕೌಟ್ಸ್, ಗೈಡ್ಸ್ ದಳ ಸ್ಥಾಪನೆಗೆ ಚಿಂತನೆ

ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಸ್ಕೌಟ್ಸ್, ಗೈಡ್ಸ್ ದಳ ಸ್ಥಾಪನೆಗೆ ಚಿಂತನೆ

ಶಿವಮೊಗ್ಗ | 12 ಜನವರಿ 2026 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ: ಸಮಾಜಮುಖಿ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದ್ದು, ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಸ್ಕೌಟ್ಸ್, ಗೈಡ್ ದಳ ಸ್ಥಾಪಿಸಲು ಚಿಂತನೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಆವರಣದಲ್ಲಿ ಆಯೋಜಿಸಿದ್ದ ಶತಮಾನೋತ್ಸವ ಹಾಗೂ ಜಿಲ್ಲಾ ಮಟ್ಟದ ರ‍್ಯಾಲಿ ಉದ್ಘಾಟಿಸಿ ಮಾತನಾಡಿ, ಮಕ್ಕಳು ವಿದ್ಯಾಭ್ಯಾಸದ ಜತೆ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗುತ್ತಾರೆ. ನೀತಿ ಬೋಧನೆ ಮಾಡುವ ಒಂದು ಪಾಠವನ್ನು ಪಠ್ಯಪುಸ್ತಕಗಳಲ್ಲಿ ಅಳವಡಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಮಾತನಾಡಿ, ಶಿವಮೊಗ್ಗದ ಜಿಲ್ಲಾ ಸಂಸ್ಥೆ ಶತಮಾನೋತ್ಸವ ಹಾಗೂ ಟಿ.ವಿ.ನಾರಾಯಣಶಾಸ್ತ್ರಿಗಳ ಜನ್ಮ ಶತಮಾನೋತ್ಸವ ಕಾರ್ಯಕ್ರಮ ನಮ್ಮ ರಾಜ್ಯಕ್ಕೆ ಮಾದರಿಯಾಗಿದೆ ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲಾ ಮುಖ್ಯ ಪ್ರಧಾನ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಮಾತನಾಡಿ, ಶತಮಾನೋತ್ಸವ ಯಶಸ್ವಿಯಾಗಿ ನಡೆಯಲು ಸಹಕರಿಸಿದ ಎಲ್ಲ ಜಿಲ್ಲೆಯ ಪದಾಧಿಕಾರಿಗಳಿಗೆ ಅಭಿನಂದಿಸಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

Like & Follow Facebook Page ” Digi Malenadu “

ಶತಮಾನೋತ್ಸವ ಸಮಿತಿ ಅಧ್ಯಕ್ಷ ಎಸ್.ರುದ್ರೇಗೌಡ, ಎಂಎಲ್‌ಸಿ ಬಲ್ಕಿಶ್ ಬಾನು, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಎಡಿಸಿ ಅಭಿಷೇಕ್, ಭಾರತಿ ಚಂದ್ರಶೇಖರ, ರಾಜ್ಯ ಉಪಾಧ್ಯಕ್ಷ ಮಹೇಶ್, ಆಯುಕ್ತ ಕೆ.ರವಿ, ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್, ಚೂಡಾಮಣಿ ಪವಾರ್, ಎಸ್.ಜಿ.ಆನಂದ್ ಇತರರಿದ್ದರು.

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ನಮ್ಮ ಬಗ್ಗೆ :https://digimalenadu.com/about-us/

ಒತ್ತಡ ಜೀವನಶೈಲಿಯಿಂದ ಹೊರಬರಲು ಧ್ಯಾನ ಸಹಕಾರಿ

digimalenadu

ಶಿವಮೊಗ್ಗ
error: Content is protected !!