ಐ ಟಿ ಬಿಯಾಂಡ್ ಬೆಂಗಳೂರು ಕಾರ್ಯಕ್ರಮ ಫೆಬ್ರವರಿ 28ಕ್ಕೆ

ಐ ಟಿ ಬಿಯಾಂಡ್ ಬೆಂಗಳೂರು ಕಾರ್ಯಕ್ರಮ ಫೆಬ್ರವರಿ 28ಕ್ಕೆ

ಶಿವಮೊಗ್ಗ | 27 ಫೆಬ್ರವರಿ 2026 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ: ನಗರದ ಜೆ ಎನ್ ಎನ್ ಇಂಜಿನಿಯರಿಂಗ್‌ ಕಾಲೇಜಿನ ಎಂಬಿಎ ಸಭಾಂಗಣದಲ್ಲಿ ಫೆಬ್ರವರಿ 28ರಂದು ಬೆಂಗಳೂರಿನಾಚೆ ಮಾಹಿತಿ ತಂತ್ರಜ್ಞಾನ ( IT BEYOND BENGALURU ) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘಗಳ ಒಕ್ಕೂಟ (ಎಫ್ ಕೆ ಸಿ ಸಿ ಐ ) ಬೆಂಗಳೂರು ಮತ್ತು ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ ) ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮಾಹಿತಿ ತಂತ್ರಜ್ಞಾನ ಕಾರ್ಯಕ್ರಮವನ್ನು ಫೆಬ್ರವರಿ 28ರಂದು ಬೆಳಗ್ಗೆ 10.30ಕ್ಕೆ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಉದ್ಘಾಟಿಸುವರು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಅಧ್ಯಕ್ಷತೆ ವಹಿಸುವರು.

ಎಫ್ ಕೆ ಸಿ ಸಿ ಐ ಅಧ್ಯಕ್ಷೆ ಉಮಾ ರೆಡ್ಡಿ, ಉಪಾಧ್ಯಕ್ಷ ಸಾಯಿ ರಾಮ್ ಪ್ರಸಾದ್, ಮಾಹಿತಿ ತಂತ್ರಜ್ಞಾನದ ಚೇರ್ಮನ್ ಎಚ್.ಎ.ಕಿರಣ್, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ ) ಉಪಾಧ್ಯಕ್ಷ ಚೇತನ್ ದೀಕ್ಷಿತ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಫೆ.28ರ ಮಧ್ಯಾಹ್ನ 2 ರಿಂದ 4.30ರವರಿಗೆ ಮಂಥನ್ 2026, ನವೋದಯ ಕೃತಕ ಬುದ್ಧಿಮತ್ತೆ ಕುರಿತು ಉಪನ್ಯಾಸ, ಚರ್ಚೆ ಮತ್ತು ಪ್ರಶ್ನೋತ್ತರದ ಕಾರ್ಯಕ್ರಮ ನಡೆಯಲಿದೆ.  ಪ್ರಧಾನ ಭಾಷಣಕಾರರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಯಲಿದೆ.

“ಬೆಂಗಳೂರಿನಾಚೆಗೆ” ಕಾರ್ಯಕ್ರಮವು ಶಿವಮೊಗ್ಗ ನಗರಗಳನ್ನು ಸ್ವಾವಲಂಬಿ ಕೇಂದ್ರಗಳನ್ನಾಗಿ ಮಾಡುವುದು, ಬೆಂಗಳೂರಿನ ಮೇಲಿನ ಅವಲಂಬನೆ ಕಡಿಮೆ ಮಾಡುವುದು ಮತ್ತು ವೃತ್ತಿಪರರಿಗೆ ಸ್ಥಳೀಯ ಅವಕಾಶಗಳನ್ನು ಒದಗಿಸುವುದು ಪ್ರಮುಖ ಗುರಿಯಾಗಿದೆ. ನಾವೀನ್ಯತೆ ಮತ್ತು ತಂತ್ರಜ್ಞಾನ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವತ್ತ ಗಮನಹರಿಸಿದೆ.

ಶಿವಮೊಗ್ಗದಲ್ಲಿರುವ ಐಟಿ / ಐಟಿಇಎಸ್, ಬಿಸಿನೆಸ್ ಪ್ರೊಸೆಸಿಂಗ್ ಔಟ್ ಸೋರ್ಸಿಂಗ್ (ಬಿಪಿಒ), ಎಲೆಕ್ಟ್ರಾನಿಕ್ ಸಿಸ್ಟಮ್ ಡಿಸೈನ್ ಮ್ಯಾನುಫ್ಯಾಕ್ಚರಿಂಗ್ (ಇಎಸ್ಡಿಎಂ) ಜೈವಿಕ ತಂತ್ರಜ್ಞಾನ ವಲಯ ಮತ್ತು ಟೆಲಿಕಾಂ ವಲಯದ ಕೈಗಾರಿಕೆಗಳಲ್ಲಿ ಬೆಳವಣಿಗೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಶಿವಮೊಗ್ಗದಲ್ಲಿ ಲಭ್ಯವಿರುವ ಪ್ರತಿಭೆ ಮತ್ತು ಕೌಶಲ್ಯವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಮತ್ತು ಪ್ರವೇಶಿಸಲು ನೋಡುತ್ತಿದೆ.

ಡಿಜಿಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

Like & Follow Facebook Page ” Digi Malenadu “

ಜಿಲ್ಲಾ ವಾಣಿಜ್ಯ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಮಾಹಿತಿ ನೀಡಿದರು. ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಜಿ ಆರ್.ಮನೋಹರ್, ನಿರ್ದೇಶಕರಾದ ಎಸ್.ಎಸ್.ಉದಯ್ ಕುಮಾರ್, ಗಣೇಶ್ ಎಂ.ಅಂಗಡಿ, ಕಿರಣ್ ಕುಮಾರ್ ಜಿ ವಿ, ರವಿಪ್ರಕಾಶ್ ಜನ್ನೆ ಸುದ್ದಿಗೋಷ್ಠಿಯಲ್ಲಿದ್ದರು.

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ನಮ್ಮ ಬಗ್ಗೆ :https://digimalenadu.com/about-us/

ಸಾವಿರಾರು ಜನರ ಬದುಕು ರೂಪಿಸಿದ ಕಾಲೇಜು ಎ ಟಿ ಎನ್ ಸಿ ಸಿ

digimalenadu

ಶಿವಮೊಗ್ಗ
error: Content is protected !!