ಎನ್ ಇ ಎಸ್, ಜೆ ಎನ್ ಎನ್ ಸಿ ಇ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ರ್ಯಾಂಕ್
ಶಿವಮೊಗ್ಗ | 9 ಫೆಬ್ರವರಿ 2026 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ: ನಗರದ ಜೆ ಎನ್ ಎನ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಪಾರ್ವತಿ ಸಾಲೇರ ಅವರು ಎಂಬಿಎ ವಿಭಾಗದಲ್ಲಿ ವಿಟಿಯು ವ್ಯಾಪ್ತಿಯಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ( RANK ) ಪಡೆದು ನಾಲ್ಕು ಚಿನ್ನದ ಪದಕ ಗಳಿಸಿದ್ದು, ಮತ್ತೊಬ್ಬ ವಿದ್ಯಾರ್ಥಿ ಸಂಜಯ್ ಎಂ.ವಿ ಅವರು ಎಂ.ಟೆಕ್ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ರಾಜ್ಯಕ್ಕೆ ಎಂಟನೇ ರ್ಯಾಂಕ್ ಗಳಿಸಿದ್ದಾರೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ( NES ) ಅಧ್ಯಕ್ಷ ಜಿ.ಎಸ್. ನಾರಾಯಣರಾವ್ ಹೇಳಿದರು.

ಶಿವಮೊಗ್ಗ Shivamogga ಜಿಲ್ಲೆಯ ಪ್ರಮುಖ ಸುದ್ದಿಗಳನ್ನು News ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ( VTU ) ವತಿಯಿಂದ ಬೆಳಗಾವಿಯಲ್ಲಿ ಆಯೋಜಿಸಿದ್ದ 25ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ಮತ್ತು ಬಂಗಾರದ ಪದಕ ನೀಡಿ ಅಭಿನಂದಿಸಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜೆ ಎನ್ ಎನ್ ಸಿ ಇ ( JNNCE Shivamogga ) ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಪದವಿ ಪಡೆಯುವ ವೇಳೆಯು ಪಾರ್ವತಿ ಸಾಲೇರ ಅವರು ಆರು ಚಿನ್ನದ ಪದಕ ಪಡೆದಿದ್ದರು. ಇದೀಗ ಎಂಬಿಎ ಸ್ನಾತಕೋತ್ತರ ಪದವಿಯಲ್ಲಿ ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಭದ್ರಾವತಿ ಕ್ಷೇತ್ರದ ಮಾಜಿ ಶಾಸಕ ಸಾಲೇರ ಸಿದ್ದಪ್ಪ ಅವರ ಮೊಮ್ಮಗಳು. ಅವರ ತಾಯಿ ಐಶ್ವರ್ಯ ಸಾಲೇರ ಕೂಡ ಜೆ ಎನ್ ಎನ್ ಸಿ ಇ ಹಿರಿಯ ವಿದ್ಯಾರ್ಥಿಯಾಗಿದ್ದು, ಇಲೆಕ್ಟ್ರಾನಿಕ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದಲ್ಲಿ ರಾಜ್ಯಕ್ಕೆ ಐದನೇ ರ್ಯಾಂಕ್ ಪಡೆದಿದ್ದರು ಎಂದು ವಿವರಿಸಿದರು.
ಎನ್ಇಎಸ್ ಚಿನ್ನದ ಪದಕದ ಗರಿ: ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದ ಪಾರ್ವತಿ ಸಾಲೇರ ಅವರಿಗೆ ಸಂಸ್ಥೆಯ ಅಮೃತಮಹೋತ್ಸವದ ಸ್ಮರಣಾರ್ಥ, ಎನ್ಇಎಸ್ ಅಮೃತ ಮಹೋತ್ಸವ ಚಿನ್ನದ ಪದಕ ನೀಡಲಾಗುವುದು ಎಂದು ಜಿ.ಎಸ್.ನಾರಾಯಣ ರಾವ್ ಘೋಷಿಸಿದರು.
ಫೆಬ್ರವರಿ ಕೊನೆಯ ವಾರದಲ್ಲಿ ನಡೆಯುವ ಐಡಿಯಾ ಲ್ಯಾಬ್ ಉದ್ಘಾಟನಾ ಸಮಾರಂಭದಲ್ಲಿ ರ್ಯಾಂಕ್ ವಿಜೇತರನ್ನು ಆಡಳಿತ ಮಂಡಳಿಯಿಂದ ಅಭಿನಂದಿಸಲಾಗುವುದು. ಎನ್ಇಎಸ್ ಅಮೃತ ಮಹೋತ್ಸವ ಅಂಗವಾಗಿ, ವಿವಿಧ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಯಾವುದೇ ವಿಭಾಗದ ವಿದ್ಯಾರ್ಥಿಗಳು, ವಿಶ್ವವಿದ್ಯಾಲಯ ಮಟ್ಟದಲ್ಲಿ ಮೊದಲ ರ್ಯಾಂಕ್ ಪಡೆದರೆ ಚಿನ್ನದ ಪದಕ ನೀಡಿ ಗೌರವಿಸಲಾಗುತ್ತಿದೆ ಎಂದು ತಿಳಿಸಿದರು.
ವಿದ್ಯಾಸಂಸ್ಥೆಗೆ ಅಭಾರಿ: ರ್ಯಾಂಕ್ ವಿಜೇತ ವಿದ್ಯಾರ್ಥಿನಿ ಪಾರ್ವತಿ ಸಾಲೇರ ಮಾತನಾಡಿ, ಬಿಇ ಮತ್ತು ಎಂಬಿಎನಲ್ಲಿ ಮೊದಲ ರ್ಯಾಂಕ್ ಪಡೆಯಲು ಕಾಲೇಜು ಮತ್ತು ಉಪನ್ಯಾಸಕರಿಂದ ಪೂರಕ ವಾತಾವರಣವಿತ್ತು. ವಿದ್ಯಾಸಂಸ್ಥೆಗೆ ಅಭಾರಿಯಾಗಿದ್ದೇನೆ. ಈಗಾಗಲೇ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ಕಂಪನಿಯಲ್ಲಿ ಪ್ರಮುಖ ಹುದ್ದೆ ಅವಕಾಶ ದೊರೆತಿದ್ದು, ಇನ್ನಷ್ಟು ಉನ್ನತ ಹೆಜ್ಜೆಗಳ ಕುರಿತಾಗಿ ಯೋಜಿಸಲಿದ್ದೇನೆ ಎಂದು ಹೇಳಿದರು.
ಎನ್ಇಎಸ್ ಕಾರ್ಯದರ್ಶಿ ಎಸ್.ಎನ್. ನಾಗರಾಜ ಮಾತನಾಡಿ, ಕಾಲೇಜಿನಲ್ಲಿ ನಾವೀನ್ಯತೆ ಹಾಗೂ ಸಂಶೋಧನಾ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. 2025ರಲ್ಲಿ ವಿವಿಧ ವಿಭಾಗಗಳ 14 ಉಪನ್ಯಾಸಕರು ಪಿಎಚ್.ಡಿ ಪದವಿ ಪಡೆದಿದ್ದು, ಇತ್ತೀಚೆಗೆ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಪ್ರಮಾಣ ಪತ್ರ ಪಡೆದಿದ್ದಾರೆ. ಪ್ಲೇಸ್ಮೆಂಟ್ ಚಟುವಟಿಕೆಗಳು ವಿದ್ಯಾಸಂಸ್ಥೆಯಲ್ಲಿ ಸಕ್ರಿಯವಾಗಿ ನಡೆಯುತ್ತಿದೆ. ಟಿಸಿಎಸ್, ಐಬಿಎಂನಂತಹ ಪ್ರತಿಷ್ಠಿತ ಕಂಪನಿಗಳು ಈಗಾಗಲೇ ಉದ್ಯೋಗವಕಾಶ ನೀಡುವಂತಹ ಚಟುವಟಿಕೆಗಳಲ್ಲಿ ನಿರಂತರವಾಗಿ ನಡೆಯುತ್ತಿದೆ. ದೈನಂದಿನ ತರಗತಿಗಳ ಜೊತೆಯಲ್ಲಿ ಪ್ರಾಯೋಗಿಕ ಆಧಾರಿತ ಕಲಿಕೆಗೆ ಹೆಚ್ಚು ಒತ್ತು ನೀಡುತ್ತಿದ್ದೇವೆ ಎಂದು ವಿವರಿಸಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
Like & Follow Facebook Page ” Digi Malenadu “
ಕಾಲೇಜಿನ ಪ್ರಾಚಾರ್ಯ ಡಾ. ವೈ.ವಿಜಯಕುಮಾರ್ ಮಾತನಾಡಿ, ನ್ಯೂಜೆನ್ ಐಇಡಿಸಿ ಮೂಲಕ ಕೇಂದ್ರ ಸರ್ಕಾರದ ಆರ್ಥಿಕ ಸಹಕಾರದೊಂದಿಗೆ, ವಿದ್ಯಾರ್ಥಿಗಳ ನಾವೀನ್ಯಯುತ ಯೋಚನೆಗಳನ್ನು, ಯೋಜನೆಯಾಗಿ ರೂಪಿಸಿ ಸ್ವಂತ ಕಂಪನಿಗಳನ್ನು ಸ್ಥಾಪಿಸುವಂತೆ ಪ್ರೇರಣೆ ನೀಡುವಂತಹ ಪೂರಕ ವೇದಿಕೆ ನೀಡುವಲ್ಲಿ ಕಾಲೇಜು ಕ್ರಿಯಾಶೀಲವಾಗಿದೆ ಎಂದು ಹೇಳಿದರು.
ಎನ್ಇಎಸ್ ಸಹಕಾರ್ಯದರ್ಶಿ ಡಾ. ಪಿ.ನಾರಾಯಣ್, ಸಂಶೋಧನಾ ಡೀನ್ ಡಾ. ಎಸ್. ವಿ.ಸತ್ಯನಾರಾಯಣ, ಎಂಬಿಎ ವಿಭಾಗದ ಮುಖ್ಯಸ್ಥ ಡಾ. ಶ್ರೀಕಾಂತ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ಜಲೇಶ್ ಕುಮಾರ್, ಜ್ಯೋತಿ ಸಾಲೇರ, ಐಶ್ವರ್ಯ ಸಾಲೇರ, ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ.ನೃಪತುಂಗ, ಸುಭದ್ರ, ಸಂತೋಷ್ ಶಾನಭಾಗ್ ಸುದ್ದಿಗೋಷ್ಠಿಯಲ್ಲಿದ್ದರು.
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ನಮ್ಮ ಬಗ್ಗೆ :https://digimalenadu.com/about-us/
ಜೆಎನ್ಎನ್ ಕಾಲೇಜಿನ ಎಂಬಿಎ ವಿಭಾಗದಿಂದ ಉದ್ಯೋಗ ಮೇಳ, 80 ವಿದ್ಯಾರ್ಥಿಗಳಿಗೆ ಉದ್ಯೋಗ
