ಜೆ ಎನ್ ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಏಪ್ರಿಲ್ 6ರಿಂದ ನಾವೀನ್ಯತೆ ಮತ್ತು ಉದ್ಯಮಶೀಲತೆ ತರಬೇತಿ
ಶಿವಮೊಗ್ಗ | 5 ಏಪ್ರಿಲ್ 2026 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ: ನಗರದ ಜೆ ಎನ್ ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಐಸಿಟಿಇ ನೇತೃತ್ವದಲ್ಲಿ ಭಾರತ ಶಿಕ್ಷಣ ಸಚಿವಾಲಯ, ವಾದ್ವಾನಿ ಫೌಂಡೇಷನ್ ಹಾಗೂ ಎಸ್‌ಬಿಐ ಫೌಂಡೇಷನ್ ಸಂಯುಕ್ತ ಆಶ್ರಯದಲ್ಲಿ ಏಪ್ರಿಲ್ 6 ರಿಂದ 10 ರವರೆಗೆ ಐದು ದಿನ ನಾವೀನ್ಯತೆ ಮತ್ತು ಉದ್ಯಮಶೀಲತೆ ಬೂಟ್ ಕ್ಯಾಂಪ್ ಕಾರ್ಯಕ್ರಮ ಆಯೋಜಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu
ಏಪ್ರಿಲ್ 6ರಂದು ಬೆಳಗ್ಗೆ 10ಕ್ಕೆ ಎಂಬಿಎ-ಎಂಸಿಎ ಸಭಾಂಗಣದಲ್ಲಿ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಎಐಸಿಟಿಇ ಇನೋವೇಶನ್ ಕೇಂದ್ರದ ಪ್ರಾದೇಶಿಕ ಸಂಯೋಜಕ ಅಶೀಷ್ ತ್ರಿಪಾಠಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ, ಅರೇಕಾ ಟೀ ಕಂಪನಿ ಸಂಸ್ಥಾಪಕ ನಿವೇದನ್ ನೆಂಪೆ ಅತಿಥಿಗಳಾಗಿ ಭಾಗವಹಿಸುವರು. ಕಾಲೇಜಿನ ಪ್ರಾಂಶುಪಾಲ ಡಾ.ವೈ.ವಿಜಯಕುಮಾರ್ ಅಧ್ಯಕ್ಷತೆ ವಹಿಸುವರು.
ಸಂಶೋಧನಾ ಡೀನ್ ಡಾ. ಎಸ್.ವಿ.ಸತ್ಯನಾರಾಯಣ, ಎಐಸಿಟಿಇ ಜೆಎನ್‌ಎನ್‌ಸಿಇ ಐಡಿಯಾ ಲ್ಯಾಬ್ ಸಂಯೋಜಕ ಡಾ. ಎಂ.ಎಚ್.ಮೋಯಿನುದ್ದಿನ್ ಖಾನ್, ಬೂಟ್‌ಕ್ಯಾಂಪ್ ಸಂಯೋಜಕ ಕೆ.ಎಲ್.ಅರುಣ್ ಕುಮಾರ್ ಮತ್ತಿತರರು ಉಪಸ್ಥಿತರಿರುವರು.
2023ರಲ್ಲಿ ಎಐಸಿಟಿಇ ಬೂಟ್ ಕ್ಯಾಂಪ್ ಕಾರ್ಯಕ್ರಮ ಪ್ರಾರಂಭಿಸಿದ್ದು, ಈಗಾಗಲೇ 10,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗಿದೆ. ಪ್ರಧಾನಮಂತ್ರಿ ಅವರ ದೃಷ್ಟಿಕೋನದಂತೆ ರೂಪುಗೊಂಡ ಈ ಯೋಜನೆಯು ವಿದ್ಯಾರ್ಥಿಗಳಲ್ಲಿ ನಾವೀನ್ಯತೆ, ಉದ್ಯಮಶೀಲತೆ ಮೂಲಕ ಸುತ್ತಲಿನ ಸಮಸ್ಯೆ ಪರಿಹರಿಸುವಂತಹ ಸಾಮರ್ಥ್ಯಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರವಹಿಸುತ್ತಿದೆ.
ಪ್ರಸ್ತುತ ಈ ಕಾರ್ಯಕ್ರಮವು ಮೂರನೇ ಆವೃತ್ತಿಯಾಗಿದ್ದು, ದೇಶಾದ್ಯಂತ 30 ಕೇಂದ್ರಗಳಲ್ಲಿ ಮೂರು ಹಂತಗಳಲ್ಲಿ ನಡೆಯಲಿದೆ. ವಿಶೇಷವಾಗಿ ಜಮ್ಮು-ಕಾಶ್ಮೀರ, ಈಶಾನ್ಯ ರಾಜ್ಯಗಳು, ಲೇಹ್ (ಲಡಾಖ್) ಮತ್ತು ಅಂಡಮಾನ್-ನಿಕೋಬಾರ್ ದ್ವೀಪಗಳಲ್ಲಿ ಕೂಡ ಆಯೋಜನೆಯಾಗುತ್ತಿರುವುದು ವಿಶೇಷವಾಗಿದೆ. ಕರ್ನಾಟಕದಲ್ಲಿ 2 ಕಾಲೇಜುಗಳಲ್ಲಿ ಮಾತ್ರ ಕಾರ್ಯಕ್ರಮ ನಡೆಯುತ್ತಿದ್ದು, ಅದರಲ್ಲಿ ಜೆ ಎನ್ ಎನ್ ಇಂಜಿನಿಯರಿಂಗ್ ಕಾಲೇಜು ಕೂಡ ಒಂದು ಎಂಬುದು ಹೆಮ್ಮೆಯ ವಿಷಯವಾಗಿದೆ.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
Like & Follow Facebook Page ” Digi Malenadu “
ಕಾರ್ಯಕ್ರಮದಲ್ಲಿ ಸ್ಟಾರ್ಟ್‌ಅಪ್ ತಜ್ಞರು ಮತ್ತು ಉದ್ಯಮಿಗಳಿಂದ ಉಪನ್ಯಾಸ, ಸ್ಥಳೀಯ ಇನೋವೇಶನ್ ಕೇಂದ್ರಗಳಿಗೆ ಭೇಟಿ, ಹಣಕಾಸು, ಅನುದಾನ ಹಾಗೂ ಬೌದ್ಧಿಕ ಸ್ವತ್ತಿನ ಹಕ್ಕುಗಳ ಕುರಿತು ಮಾರ್ಗದರ್ಶನದ ಜೊತೆಗೆ 5 ಉತ್ತಮ ನಾವೀನ್ಯ ಯೋಜನೆಗಳಿಗೆ ಪ್ರಶಂಸಾ ಪತ್ರ ನೀಡಲಾಗುತ್ತಿದೆ.
ಫೇಸ್ ಬುಕ್ :www.facebook.com/digimalenadu
ನಮ್ಮ ಬಗ್ಗೆ :https://digimalenadu.com/about-us/
ವಾಸ್ತವತೆಯ ವಿಮರ್ಶಿಸುವ ಕುತೂಹಲ ಬೆಳೆಸಿಕೊಳ್ಳಿ, ಜೆ ಎನ್ ಎನ್ ಸಿ ಇ ಉತ್ಥಾನ, ದಶಮಾನೋತ್ಸವ ಸಂಭ್ರಮ
