ಸಿಬಿಆರ್ ಕಾಲೇಜಿನ ಕಾನೂನು ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರ ಪ್ರದಾನ
ಶಿವಮೊಗ್ಗ | Shivamogga | 21 ಜೂನ್ 2026 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ: ಭೌತಿಕ ಗೋಡೆಗಳಿಗಿಂತ, ಕಣ್ಣಿಗೆ ಕಾಣದ ಮಾನಸಿಕ ಮತ್ತು ಸಾಮಾಜಿಕ ಗೋಡೆಗಳು ಮನುಷ್ಯರನ್ನು ಹೆಚ್ಚು ದೂರ ಮಾಡುತ್ತಿವೆ. ಧರ್ಮ ಎಂಬ ಪದವನ್ನು ಸೀಮಿತ ಅರ್ಥದಲ್ಲಿ ನೋಡಬಾರದು. ಧರ್ಮ ಎಂದರೆ ವಿಭಜನೆ ಅಲ್ಲ, ಎಲ್ಲರನ್ನೂ ಒಳಗೊಂಡ ಸಮಾಜ ನಿರ್ಮಾಣದ ಮೌಲ್ಯವಾಗಿ ಅರ್ಥೈಸಬೇಕು ಎಂದು ಹೈಕೋರ್ಟ್ ನ್ಯಾಯಮೂರ್ತಿ ವಿ.ಶ್ರೀಶಾನಂದ ಹೇಳಿದರು.
ಶಿವಮೊಗ್ಗ SHIVAMOGGA ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu
ನಗರದ ಸಿ.ಭೀಮಸೇನರಾವ್ ಕಾನೂನು LAW ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಪದವಿ ಅಧ್ಯಯನ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಪದವಿ ಪ್ರಮಾಣಪತ್ರ ಪ್ರದಾನ ಕಾರ್ಯಕ್ರಮ ‘ನ್ಯಾಯದೀಕ್ಷಾ’ ಉದ್ಘಾಟಿಸಿ ಮಾತನಾಡಿದರು.
ಕಾನೂನಿನ ಪದವಿಯ ಜತೆ ಸಮಾಜಮುಖಿಯಾಗಿ ಕಲಿತ ಜ್ಞಾನವನ್ನು ತಲುಪಿಸುವುದು ಕೂಡ ಒಂದು ದೊಡ್ಡ ಹೊಣೆಗಾರಿಕೆ. ಏನಾದರಾಗು, ಮೊದಲು ಮಾನವನಾಗು ಎಂಬುದು ಕಾನೂನು ದೀಕ್ಷೆ ಮೊದಲ ಪಾಠವಾಗಬೇಕು ಎಂದು ತಿಳಿಸಿದರು.
ಎಲ್.ಎಲ್.ಬಿ. ಪದವಿ ಹಿಡಿದು, ಸಮಾಜದ ಶಿಕ್ಷಕರಾಗುವ ಮೂಲಕ, ಬಡವರಿಗೆ, ದೀನ ದಲಿತರಿಗೆ ಮೇಲೆತ್ತುವ ಸೇನಾನಿಗಳು ನೀವಾಗಿ. ಕಲಿತ ಪ್ರತಿ ಅಕ್ಷರವನ್ನು ದೀಕ್ಷಾ ಪೂರ್ವಕವಾಗಿ ಮುನ್ನಡೆಸುವ ದೂರದೃಷ್ಟಿ ಪಡೆಯಿರಿ ಎಂದು ಸಲಹೆ ನೀಡಿದರು.
ಗೌನ್ ಬದಲು ಶಲ್ಯ: ಸಂಸ್ಕೃತಿಯ ನ್ಯಾಯಧೀಕ್ಷೆ
ಸಾಮಾನ್ಯವಾಗಿ ಪದವಿ ಪ್ರಮಾಣಪತ್ರ ಪ್ರದಾನ ಸಮಾರಂಭದಲ್ಲಿದ್ದ ಗೌನ್ ಸಂಸ್ಕೃತಿಗೆ ತೆರೆ ಎಳೆದ ವಿದ್ಯಾರ್ಥಿಗಳು, ಶಲ್ಯದೊಂದಿಗೆ ನ್ಯಾಯದೀಕ್ಷೆ ಪಡೆದು ಸಂಭ್ರಮಿಸಿದರು. ನ್ಯಾಯಮೂರ್ತಿಗಳು ಸೇರಿದಂತೆ ಎನ್ಇಎಸ್ ಆಡಳಿತ ಮಂಡಳಿ ಸದಸ್ಯರು ಶರ್ಟು, ಪಂಚೆ, ಮೈಸೂರು ಪೇಟ ಹಾಗೂ ವಿಶೇಷ ಶಲ್ಯದಲ್ಲಿ ಮಿಂಚಿದರು. ಶಾಸ್ತ್ರೀಯ ಸಂಗೀತದ ಹಿನ್ನೆಲೆ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ನೀಡಿತು.
ರಾಷ್ಟ್ರೀಯ ಶಿಕ್ಷಣ ಸಮಿತಿ NES ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಮಾತನಾಡಿ, ನಮ್ಮ ವಿದ್ಯಾಸಂಸ್ಥೆಯ ಅನೇಕರು ವಕೀಲರಾಗಿ ಕಾನೂನು ಕ್ಷೇತ್ರದ ಅನೇಕ ಉನ್ನತ ಹುದ್ದೆಗಳಲ್ಲಿ ಅಲಂಕರಿಸಿದ್ದಾರೆ. ವಕೀಲರಾಗುವ ನೀವು ವೃತ್ತಿ ಜೀವನದಲ್ಲಿ ಕುಟುಂಬ ವ್ಯವಸ್ಥೆಗೆ ಹೆಚ್ಚು ಆದ್ಯತೆ ನೀಡಬೇಕು. ವಿದ್ಯೆ ಮನುಷ್ಯನಿಗೆ ಆಕಾರ ನೀಡಬೇಕು ವಿನಃ ಅಹಂಕಾರ ನೀಡಬಾರದು. ಸುಶಿಕ್ಷಿತರಾಗುವ ಜತೆ ಸುಸಂಸ್ಕೃತರಾಗಬೇಕು ಎಂದು ಹೇಳಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
Like & Follow Facebook Page ” Digi Malenadu “
ಎನ್ಇಎಸ್ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ, ಕಾಲೇಜಿನ ಪ್ರಾಚಾರ್ಯ ಡಾ. ಎ.ಅನಲಾ ಉಪಸ್ಥಿತರಿದ್ದರು.
ಫೇಸ್ ಬುಕ್ :www.facebook.com/digimalenadu
ನಮ್ಮ ಬಗ್ಗೆ :https://digimalenadu.com/about-us/
