ಶಿಕ್ಷಕರು ಕ್ರಿಯಾಶೀಲ ಮನೋಭಾವ ರೂಢಿಸಿಕೊಳ್ಳಲಿ
ಶಿವಮೊಗ್ಗ | Shivamogga | 30 ಜೂನ್ 2026 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ: ತಂತ್ರಜ್ಞಾನ ಯುಗದಲ್ಲಿ ಶಿಕ್ಷಕರು ಕ್ರಿಯಾಶೀಲ ಮನೋಭಾವ ಬೆಳೆಸಿಕೊಳ್ಳಬೇಕು. ಮಕ್ಕಳಿಗೆ ಪರಿಣಾಮಕಾರಿಯಾಗಿ ಶಿಕ್ಷಣ ನೀಡಲು ಸಾಧ್ಯ ಆಗುತ್ತದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣರಾವ್ ಹೇಳಿದರು.
ಶಿವಮೊಗ್ಗ SHIVAMOGGA ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu
ನಗರದ ಕಸ್ತೂರಬಾ ಬಾಲಿಕಾ ಪ್ರೌಢಶಾಲೆ ವತಿಯಿಂದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿನಿ ಸಂಘದ ಉದ್ಘಾಟನೆ, ಪ್ರತಿಭಾ ಪುರಸ್ಕಾರ ಹಾಗೂ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಸಾಧಿಸಿದ ಅಧ್ಯಾಪಕ ವರ್ಗಕ್ಕೆ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪುಸ್ತಕ ಅಭ್ಯಾಸದ ಜತೆಗೆ ಮಕ್ಕಳಲ್ಲಿರುವ ಅಂತಃಶಕ್ತಿಯನ್ನು ಗುರುತಿಸಿ ಸಾಧಕರಾಗಿ ಹೊರಹೊಮ್ಮುವಂತೆ ತಯಾರು ಮಾಡುವತ್ತ ಶಿಕ್ಷಕರು ಹೆಚ್ಚು ಕೇಂದ್ರಿಕರಿಸಬೇಕು. ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಎನ್ಇಎಸ್ ವಿದ್ಯಾರ್ಥಿಗಳು ಅದ್ಭುತ ಸಾಧನೆಗಳನ್ನು ಮಾಡುತ್ತಿದ್ದಾರೆ ಎಂದರು.
ಮಕ್ಕಳು ಕುಟುಂಬ ವ್ಯವಸ್ಥೆಗೆ ಹೆಚ್ಚಿನ ಮೌಲ್ಯ ನೀಡಬೇಕು. ಪಾಲಕರ ಆಸೆ ಆಕಾಂಕ್ಷೆಗಳಿಗೆ ಗೌರವ ನೀಡಿ, ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ವ್ಯಕ್ತಿಯ ಉನ್ನತಿಯನ್ನು ಅಳೆಯುವುದು ಅವನು ನಡೆದ ದಾರಿಯಿಂದಲ್ಲ, ಅವನ ನಡತೆಯಿಂದ ಎಂಬುದನ್ನು ಅರಿತುಕೊಳ್ಳಬೇಕು ಎಂದು ಹೇಳಿದರು.
ಎನ್ಇಎಸ್ ಸಹ ಕಾರ್ಯದರ್ಶಿ ಡಾ. ಪಿ.ನಾರಾಯಣ್ ಮಾತನಾಡಿ, 72 ವರ್ಷ ಶೈಕ್ಷಣಿಕ ಶ್ರೇಷ್ಟತೆ ಹೊಂದಿರುವ ಕಸ್ತೂರಬಾ ಶಾಲೆಯು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ಪಡೆದಿದೆ ಎಂದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
Like & Follow Facebook Page ” Digi Malenadu “
ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ, ನಿರ್ದೇಶಕ ಎಚ್.ಸಿ.ಶಿವಕುಮಾರ್, ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ರವಿಕುಮಾರ್, ವಿದ್ಯಾರ್ಥಿನಿ ಸಂಘದ ಪ್ರಧಾನಿ ಗಾನವಿ, ವಿರೋಧ ಪಕ್ಷದ ನಾಯಕಿ ಕೃತಿಕ ಉಪಸ್ಥಿತರಿದ್ದರು. ಉಪ ಪ್ರಾಚಾರ್ಯ ತಿಪ್ಪೇಸ್ವಾಮಿ ಇದ್ದರು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹಾಗೂ ವಿಷಯವಾರು ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿಯರಿಗೆ, ನೆನಪಿನ ಕಾಣಿಕೆ, ನಗದು ಬಹುಮಾನ ನೀಡಿ ಅಭಿನಂದಿಸಲಾಯಿತು.
ಫೇಸ್ ಬುಕ್ :www.facebook.com/digimalenadu
ನಮ್ಮ ಬಗ್ಗೆ :https://digimalenadu.com/about-us/
