ಯುವಶಕ್ತಿ ಮೇಲಿದೆ ಹೆಚ್ಚಿನ ಜವಾಬ್ದಾರಿ, JNNCE Orientation

ಯುವಶಕ್ತಿ ಮೇಲಿದೆ ಹೆಚ್ಚಿನ ಜವಾಬ್ದಾರಿ, JNNCE Orientation

ಶಿವಮೊಗ್ಗ | 31 ಆಗಸ್ಟ್‌ 2026 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ: ಅಧಿಕಾರಶಾಹಿ ಹಾಗೂ ಭ್ರಷ್ಟ ವ್ಯವಸ್ಥೆಗೆ ಮುಕ್ತಿ ನೀಡುವ ನಿಟ್ಟಿನಲ್ಲಿ ಯುವ ಸಮೂಹದ ಜವಾಬ್ದಾರಿ ಅತ್ಯಂತ ಮಹತ್ವದ್ದಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ನಗರದ ಜೆಎನ್‌ಎನ್‌ ಇಂಜಿನಿಯರಿಂಗ್ ಕಾಲೇಜಿನಲ್ಲಿ JNNCE ಇಂಜಿನಿಯರಿಂಗ್ ವಿಭಾಗಕ್ಕೆ ಪ್ರವೇಶಾತಿ ಪಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಅಭಿವಿನ್ಯಾಸ (ಓರಿಯಂಟೇಷನ್) ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯುವಶಕ್ತಿ ಗಾಂಧಿ ಮಾರ್ಗದ ಮೂಲಕ ನಡೆಸುತ್ತಿರುವ ಹೋರಾಟಗಳು, ಸರ್ಕಾರಗಳನ್ನು ಎಚ್ಚರಿಸುವ ಹಾಗೂ ವ್ಯವಸ್ಥೆಯನ್ನು ಅಲುಗಾಡಿಸುವಲ್ಲಿ ಯಶಸ್ವಿಯಾಗಿವೆ ಎಂದು ತಿಳಿಸಿದರು.

ಶಿಕ್ಷಣ Education ಪಡೆದವರಿಂದಲೇ ವ್ಯವಸ್ಥೆಗೆ ಸವಾಲುಗಳು ಎದುರಾಗುತ್ತಿರುವುದು ವಿಷಾದನೀಯ. Question Paper Leak ಪ್ರಶ್ನೆಪತ್ರಿಕೆ ಸೋರಿಕೆಯಂತಹ ಘಟನೆಗಳು, ಶಿಕ್ಷಣ ವ್ಯವಸ್ಥೆಯ ವಿಶ್ವಾಸಾರ್ಹತೆಗೆ ಧಕ್ಕೆ ತರುತ್ತವೆ. ಹೀಗಾಗಿ ಯುವಕರು ಪಾರದರ್ಶಕತೆ, ಪ್ರಾಮಾಣಿಕತೆ ಮತ್ತು ನೈತಿಕತೆಯನ್ನು ಜೀವನದ ಮೌಲ್ಯಗಳನ್ನಾಗಿಸಿಕೊಂಡು, ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದರು.

ಎನ್ಇಎಸ್ NES ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ದೂರದೃಷ್ಟಿ ಫಲವಾಗಿ ಸ್ಥಾಪನೆಯಾದ ಸಂಸ್ಥೆ, ಇಂದಿಗೂ ಅದೇ ಧ್ಯೇಯೋದ್ದೇಶಗಳೊಂದಿಗೆ ಸಮಾಜದ ಶೈಕ್ಷಣಿಕ ಅಗತ್ಯಗಳಿಗೆ ಸ್ಪಂದಿಸುತ್ತ ಮುನ್ನಡೆಯುತ್ತಿದೆ. ಸಮಾಜದ ಅಗತ್ಯವನ್ನು ಅರಿತು ಹಿರಿಯರು ಕಾಲಕಾಲಕ್ಕೆ ವಿವಿಧ ವಿಷಯಗಳನ್ನು ಹೊಂದಿದ ವಿದ್ಯಾಸಂಸ್ಥೆಗಳನ್ನು ಸ್ಥಾಪಿಸಿರುವುದು ಸಂಸ್ಥೆಯ ವಿಶೇಷತೆ ಎಂದು ಹೇಳಿದರು.

ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ರೋಬೋ: ಕಾಲೇಜಿಗೆ ಪ್ರಥಮ ವರ್ಷದ ಇಂಜಿನಿಯರಿಂಗ್ STUDENTS ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಅಂತಿಮ ವರ್ಷದ ಎಐ ವಿದ್ಯಾರ್ಥಿಗಳು ನಿರ್ಮಿಸಿದ ರೋಬೋ ROBO ಆತ್ಮೀಯವಾಗಿ ಸ್ವಾಗತಿಸಿತು.

ವಿವಿಧ ವಿಭಾಗಗಳ ವಿದ್ಯಾರ್ಥಿಗಳು ನಾವೀನ್ಯಮಯ ಯೋಜನೆಗಳನ್ನು ಪ್ರದರ್ಶಿಸಿ ಗಮನ ಸೆಳೆದರು. ಕೈ ಸನ್ನೆಗಳ ಮೂಲಕ ಬ್ಲೂಟೂತ್‌ ಬಳಸಿ ನಿಯಂತ್ರಿಸಬಹುದಾದ ರೊಬೊಟಿಕ್ ಆರ್ಮ್, ದೃಷ್ಟಿಹೀನರು ಹಾಗೂ ಸವಾರರಿಗೆ ನೈಜ ಸಮಯದ ವಸ್ತು ಪತ್ತೆ ಮತ್ತು ಧ್ವನಿ ಮಾರ್ಗದರ್ಶನ ನೀಡುವ ಎಐ ಸ್ಮಾರ್ಟ್ ಹೆಲ್ಮೆಟ್, ತಂತ್ರಜ್ಞಾನದ ನೆರವಿನಿಂದ ಪ್ರಜ್ವಲಿಸಿದ ದೀಪಸ್ತಂಭ, ಜೈವಿಕ ಇಂಧನದ ಪ್ರಯೋಗಗಳು ನೋಡುಗರನ್ನು ಆಕರ್ಷಿಸಿತು. ಕೆನರಾ ಬ್ಯಾಂಕ್ BANK ಸಿಬ್ಬಂದಿ ಶಿಕ್ಷಣ ಸಾಲ LOAN ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

Like & Follow Facebook Page ” Digi Malenadu “

ಎನ್ಇಎಸ್ ಸಹ ಕಾರ್ಯದರ್ಶಿ ಡಾ. ಪಿ.ನಾರಾಯಣ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಖಜಾಂಚಿ ಡಿ.ಜಿ.ರಮೇಶ್, ನಿರ್ದೇಶಕ ಟಿ.ಆರ್.ಅಶ್ವತ್ಥನಾರಾಯಣ ಶೆಟ್ಟಿ, ಎಂ.ಎಸ್ ಅನಂತದತ್ತ, ಎಂ.ಆರ್.ಸೀತಾಲಕ್ಷ್ಮೀ, ಜಿ.ಎನ್.ಸುಧೀರ್, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ, ಕಾಲೇಜಿನ ಸಂಶೋಧನಾ ಡೀನ್ ಡಾ. ಎಸ್.ವಿ.ಸತ್ಯನಾರಾಯಣ, ಪ್ರವೇಶಾತಿ ಸಮಿತಿ ಮುಖ್ಯಸ್ಥ ಡಾ. ಮೊಯಿನುದ್ದಿನ್ ಖಾನ್, ಡಾ. ಎಚ್.ಬಿ.ಸುರೇಶ್ ಉಪಸ್ಥಿತರಿದ್ದರು.

ಫೇಸ್‌ ಬುಕ್‌ :www.facebook.com/digimalenadu

ನಮ್ಮ ಬಗ್ಗೆ :https://digimalenadu.com/about-us/

ಜೆಎನ್ಎನ್ ಕಾಲೇಜಿನ ಎಂಬಿಎ ವಿಭಾಗದಿಂದ ಉದ್ಯೋಗ ಮೇಳ, 80 ವಿದ್ಯಾರ್ಥಿಗಳಿಗೆ ಉದ್ಯೋಗ

digimalenadu

ಶಿವಮೊಗ್ಗ
error: Content is protected !!