ಬದುಕಿಗೆ ಭರವಸೆ ಆಗಬೇಕಾದ ಔಷಧ ನಕಲಿ ಆಗದಿರಲಿ
ಶಿವಮೊಗ್ಗ | 25 ಸೆಪ್ಟೆಂಬರ್ 2026 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ: ರೋಗಿಯ ಬದುಕಿಗೆ ಭರವಸೆ ಆಗಬೇಕಾದ ಔಷಧವೇ ನಕಲಿಯ ರೂಪದಲ್ಲಿ ಆತನ ಜೀವಕ್ಕೆ ಅಪಾಯ ತಂದೊಡ್ಡುವುದು ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಗಂಭೀರ ವಿಚಾರ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu
ನಗರದ ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ, ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘ ಹಾಗೂ ಜಿಲ್ಲಾ ಔಷಧ ತಜ್ಞರ ಸಂಘದ ಆಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ವಿಶ್ವ ಔಷಧ ತಜ್ಞರ ದಿನಾಚರಣೆ, ಜಿಲ್ಲಾ ಮಟ್ಟದ ಉತ್ತಮ ಫಾರ್ಮಸಿಸ್ಟ್ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಒಬ್ಬ ವ್ಯಕ್ತಿ ಅನಾರೋಗ್ಯದ ವಿರುದ್ಧ ಹೋರಾಡುತ್ತ, ಔಷಧದ ಮೇಲಿನ ನಂಬಿಕೆಯಿಂದ ತನ್ನ ಬದುಕನ್ನು ಮುನ್ನಡೆಸುತ್ತಿರುವ ಸಂದರ್ಭದಲ್ಲಿ, ಆತನ ಕೈಗೆ ನಕಲಿ ಔಷಧ ತಲುಪಿಸಿ ಜೀವವನ್ನೇ ಅಪಾಯಕ್ಕೆ ಸಿಲುಕಿಸುವಂತಹ ವ್ಯವಸ್ಥೆ ನಿರ್ಮಾಣವಾಗುವುದು ಅತ್ಯಂತ ವಿಷಾದನೀಯ ಎಂದು ತಿಳಿಸಿದರು.
ನಕಲಿ ಅಥವಾ ಅನುಮಾನಾಸ್ಪದ ಔಷಧಗಳ ಕುರಿತು ಯಾವುದೇ ಮಾಹಿತಿ ಸಾರ್ವಜನಿಕರ ಗಮನಕ್ಕೆ ಬಂದರೆ ಅದನ್ನು ನಿರ್ಲಕ್ಷಿಸದೆ ಕೂಡಲೇ ಆರೋಗ್ಯ ಇಲಾಖೆ ಅಥವಾ ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು. ಇಂತಹ ಜಾಗೃತಿಯೇ ದೊಡ್ಡ ಅಪಾಯವನ್ನು ಆರಂಭದಲ್ಲಿಯೇ ತಡೆಯುವ ಶಕ್ತಿಯಾಗಲಿದೆ ಎಂದು ಹೇಳಿದರು.
ಜಿಲ್ಲಾ ಮಟ್ಟದ ಉತ್ತಮ ಫಾರ್ಮಸಿಸ್ಟ್ ಪ್ರಶಸ್ತಿ: ಶೈಕ್ಷಣಿಕ ಕ್ಷೇತ್ರದಲ್ಲಿನ ಸಾಧನೆಗಾಗಿ ರಾಷ್ಟ್ರೀಯ ಔಷಧ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಎ. ಶ್ರೀನಾಥ್ ಹಾಗೂ ಔಷಧ ಮಾರಾಟ ಕ್ಷೇತ್ರದಲ್ಲಿನ ಸೇವೆಗಾಗಿ ಭೂಪಾಳಂ ಶಂಕರ ಪ್ರದೀಪ ಅವರಿಗೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯಿಂದ ನೀಡಲಾಗುವ ಜಿಲ್ಲಾ ಮಟ್ಟದ ಉತ್ತಮ ಫಾರ್ಮಸಿಸ್ಟ್ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
Like & Follow Facebook Page ” Digi Malenadu “
ಕಾಲೇಜಿನ ಪ್ರಾಚಾರ್ಯ ಡಾ. ಎಸ್.ಎನ್. ಶ್ರೀಹರ್ಷ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎನ್.ನಟರಾಜ್, ಸಹಾಯಕ ಔಷಧ ನಿಯಂತ್ರಕ ಡಾ. ವೀರೇಶ್ ಬಾಬು, ವಿ.ವಿಶಾಲಾಕ್ಷಿ, ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದ ಮಧುಕರ ಶೆಟ್ಟಿ, ಜಿಲ್ಲಾ ಔಷಧ ತಜ್ಞರ ಸಂಘದ ಗಣೇಶ್ ಎಸ್. ರಾವ್ ಉಪಸ್ಥಿತರಿದ್ದರು.
ಫೇಸ್ ಬುಕ್ :www.facebook.com/digimalenadu
ನಮ್ಮ ಬಗ್ಗೆ :https://digimalenadu.com/about-us/
