ಜೆಎನ್ಎನ್ ಸಿಇ ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನ
ಶಿವಮೊಗ್ಗ | 8 ಅಕ್ಟೋಬರ್ 2026 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ: ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿ NES ಆಡಳಿತ ಕಚೇರಿಯಲ್ಲಿ ಬುಧವಾರ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರ್ಯಾಂಕ್ Rank ವಿಜೇತ ಜೆಎನ್ಎನ್ ಸಿಇ ವಿದ್ಯಾರ್ಥಿಗಳೊಂದಿಗೆ ಆಯೋಜಿಸಿದ್ದ ಸಂವಾದ ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಯಿತು.
ಶಿವಮೊಗ್ಗ Shivamogga ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu
ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಹಾಗೂ 7 ಚಿನ್ನದ ಪದಕ ಪಡೆದ ಧನ್ಯಶ್ರೀ ಬಿ.ಎಂ., ಎಲೆಕ್ಟ್ರಿಕಲ್ ಮತ್ತು ಟೆಲಿಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದಲ್ಲಿ ರಾಜ್ಯಕ್ಕೆ 3ನೇ ರ್ಯಾಂಕ್ ಪಡೆದ ನಯ್ಯರ್ ಫಾತಿಮಾ ಅಫ್ರೀನ್, 4ನೇ ರ್ಯಾಂಕ್ ಪಡೆದ ಯಶಸ್ಕರ ಟಿ.ಜಿ., 5ನೇ ರ್ಯಾಂಕ್ ಪಡೆದ ಭೂಮಿಕಾ ಎಂ., 6ನೇ ರ್ಯಾಂಕ್ ಪಡೆದ ಜಾರ್ಜ್ ಟಿ. ಪೌಲ್, 8ನೇ ರ್ಯಾಂಕ್ ಪಡೆದ ನಿತ್ಯಶ್ರೀ ಹೆಗಡೆ ಕೆ.ಎನ್., 10ನೇ ರ್ಯಾಂಕ್ ಪಡೆದ ಸ್ವಾತಿ ಎಸ್.ಜಿ. ಅವರನ್ನು ಸನ್ಮಾನಿಸಲಾಯಿತು.
ಜೆಎನ್ಎನ್ ಸಿಇ JNNCE ಪ್ರಾಚಾರ್ಯ ಡಾ. ವೈ.ವಿಜಯಕುಮಾರ್ ಮಾತನಾಡಿ, ಮಲೆನಾಡಿನ ವಿದ್ಯಾರ್ಥಿಗಳು PU ಪಿಯು ನಂತರ ಶಿಕ್ಷಣಕ್ಕಾಗಿ ದೂರದ ನಗರಗಳಿಗೆ ತೆರಳುವ ಅಗತ್ಯವಿಲ್ಲ. ಉತ್ಕೃಷ್ಟ ಶಿಕ್ಷಣ ಮತ್ತು ಉತ್ತಮ ಅವಕಾಶಗಳನ್ನು ಒದಗಿಸುವ ವೇದಿಕೆಯಾಗಿ ಜೆಎನ್ಎನ್ ಸಿಇಯನ್ನು ಮತ್ತಷ್ಟು ಮೇಲ್ದರ್ಜೆಗೆ ಏರಿಸುವ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿವೆ ಎಂದು ಹೇಳಿದರು.
ಕಾಲೇಜಿನ 40 ವಿದ್ಯಾರ್ಥಿಗಳು ವಿಟಿಯು ಬಿ.ಇ. ಆನರ್ಸ್ ಪದವಿ ಪಡೆದಿದ್ದಾರೆ. ಕೇಂದ್ರ ಸರ್ಕಾರದ ಸ್ವಯಂ–ಎನ್ಪಿಟಿಇಎಲ್ ಪ್ರಮಾಣಪತ್ರ ಕಾರ್ಯಕ್ರಮಗಳಲ್ಲಿ ಸಂಸ್ಥೆ ವಿದ್ಯಾರ್ಥಿಗಳು STUDENTS ಗಮನಾರ್ಹ ಸಾಧನೆ ಮಾಡಿದ್ದು, ಒಟ್ಟು 1,315 ವಿದ್ಯಾರ್ಥಿಗಳು ಎನ್ಪಿಟಿಇಎಲ್ Certificate ಪ್ರಮಾಣಪತ್ರ ಪಡೆದು ಯಶಸ್ವಿಯಾಗಿದ್ದಾರೆ.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
Like & Follow Facebook Page ” Digi Malenadu “
ರಾಷ್ಟ್ರೀಯ ಶಿಕ್ಷಣ ಸಮಿತಿ ಸಹ ಕಾರ್ಯದರ್ಶಿ ಡಾ. ಪಿ.ನಾರಾಯಣ್, ಖಜಾಂಚಿ ಡಿ.ಜಿ.ರಮೇಶ್, ನಿರ್ದೇಶಕ ಪಿ.ಮೈಲಾರಪ್ಪ, ಟಿ.ಆರ್.ಅಶ್ವತ್ಥನಾರಾಯಣ ಶೆಟ್ಟಿ, ಎಚ್.ಸಿ. ಶಿವಕುಮಾರ್, ಎಂ.ಎಸ್. ಅನಂತದತ್ತ, ಜಿ.ಎನ್. ಸುಧೀರ್, ಕುಲಸಚಿವ ಎನ್.ಕೆ.ಹರಿಯಪ್ಪ, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ, ಡಾ. ಸಂಜೀವ್ ಕುಂಟೆ, ಡಾ. ಚೇತನ್ ಕೆ.ಆರ್., ಡಾ. ಸುರೇಂದ್ರ, ಡಾ. ಎಚ್.ಬಿ. ಸುರೇಶ್, ಎನ್ಇಎಸ್ ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ. ನೃಪತುಂಗ ಉಪಸ್ಥಿತರಿದ್ದರು.
ಫೇಸ್ ಬುಕ್ :www.facebook.com/digimalenadu
ನಮ್ಮ ಬಗ್ಗೆ :https://digimalenadu.com/about-us/
ಜೆಎನ್ಎನ್ ಕಾಲೇಜಿನ ಎಂಬಿಎ ವಿಭಾಗದಿಂದ ಉದ್ಯೋಗ ಮೇಳ, 80 ವಿದ್ಯಾರ್ಥಿಗಳಿಗೆ ಉದ್ಯೋಗ
