ಬ್ಯಾಂಕ್‌ ಸಹಾಯಕರ ಹುದ್ದೆಗಳಿಗೆ ನೇಮಕಾತಿ, ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶ, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ

ಬ್ಯಾಂಕ್‌ ಸಹಾಯಕರ ಹುದ್ದೆಗಳಿಗೆ ನೇಮಕಾತಿ, ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶ, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ

ಉದ್ಯೋಗ ಜಗತ್ತು Job World | 4 ಏಪ್ರಿಲ್‌ 2022 | ಡಿಜಿ ಮಲೆನಾಡು.ಕಾಂ

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌  ಬೆಂಗಳೂರಿನಲ್ಲಿ ಖಾಲಿ ಇರುವ ಬ್ಯಾಂಕ್‌ ಸಹಾಯಕರ ಹುದ್ದೆಗಳ ನೇರ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

ಶಿವಮೊಗ್ಗ ಜಿಲ್ಲೆ ಹಾಗೂ ರಾಜ್ಯದ ಪ್ರಮುಖ ಸುದ್ದಿ, ಕ್ರೀಡೆ ಮತ್ತು ಸಿನಿಮಾ ಕುರಿತ ಸುದ್ದಿ ನೀಡುವ ಫೇಸ್‌ಬುಕ್‌ ಪೇಜ್‌ : ಡಿಜಿ ಮಲೆನಾಡು : www.facebook.com/digimalenadu

ವಿದ್ಯಾರ್ಹತೆ: ಅರ್ಜಿ ಸಲ್ಲಿಸಲು ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಯಾವುದೇ ಪದವಿ ಪರೀಕ್ಷೆಯಲ್ಲಿ ಶೇ. 60 ಅಂಕ ಹಾಗೂ ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿಗಳು ಮತ್ತು ಅಂಗವಿಕಲ ವಿದ್ಯಾರ್ಥಿಗಳು ಶೇ. 55 ಅಂಕಗಳೊಂದಿಗೆ ತೇಗಡೆ ಹೊಂದಿರಬೇಕು. ಕನ್ನಡ ಭಾಷೆ ಮತ್ತು ಕಂಪ್ಯೂಟರ್‌ ಜ್ಞಾನ ಹೊಂದಿರಬೇಕು.

ಹುದ್ದೆಗಳ ಸಂಖ್ಯೆ: ಪ್ರಸ್ತುತ 79 ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ನಡೆಯುತ್ತಿದೆ. ವೇತನ ಶ್ರೇಣಿ: 28,425 ರೂ. – 87,125 ರೂ. ಆಗಿದೆ. ಪರಿಶಿಷ್ಟ ಜಾತಿ, ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷ, ಸಾಮಾನ್ಯ ವರ್ಗಕ್ಕೆ 35 ವರ್ಷ ಗರಿಷ್ಠ ವಯೋಮಿತಿ ಆಗಿದೆ. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ಡಿಜಿ ಮಲೆನಾಡು.ಕಾಂ | ಜಾಹಿರಾತು ಮೊಬೈಲ್‌ ಸಂಖ್ಯೆ: 9449422942
ಇ-ಮೇಲ್‌ : [email protected]

ಅರ್ಜಿ ಶುಲ್ಕ, ವಿಧಾನ, ಕಡೇ ದಿನಾಂಕ: ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು. ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ ಲಿಂಕ್‌: https://emsecure.in/Apex22-BA/index.html ಪರಿಶಿಷ್ಟ ಜಾತಿ, ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 500 ರೂ. ಹಾಗೂ ಇತರೆ ಅಭ್ಯರ್ಥಿಗಳಿಗೆ 1,000 ರೂ. ಅರ್ಜಿ ಶುಲ್ಕ ಪಾವತಿಸುವಂತೆ ಸೂಚಿಸಲಾಗಿದೆ. ಏಪ್ರಿಲ್‌ 16ರ ಸಂಜೆ 5:30ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.

ಆಯ್ಕೆ ವಿಧಾನ: ಅರ್ಜಿ ಸಲ್ಲಿಕೆ ನಂತರ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಮೌಖಿಕ ಸಂದರ್ಶನ ಮುಖಾಂತರ ಆಯ್ಕೆ ಮಾಡಲಾಗುತ್ತದೆ. ಕನ್ನಡ, ಸಾಮಾನ್ಯ ಜ್ಞಾನ, ಇಂಗ್ಲೀಷ್‌, ಸಹಕಾರಿ ವಿಷಯ, ಭಾರತ ಸಂವಿಧಾನ ಹಾಗೂ ಬ್ಯಾಂಕಿಂಗ್‌ ಕ್ಷೇತ್ರದ ಬಗ್ಗೆ ಲಿಖಿತ ಪರೀಕ್ಷೆ ಇರಲಿದೆ. 1:5 ಆಧಾರದಲ್ಲಿ ಮೌಖಿಕ ಸಂದರ್ಶನಕ್ಕೆ ಆಹ್ವಾನಿಸಲಾಗುವುದು. ಪ್ರವೇಶ ಪತ್ರ ಬ್ಯಾಂಕ್‌ ವೆಬ್‌ಸೈಟಿನಲ್ಲಿ ಸಿಗಲಿದೆ.

ಉದ್ಯೋಗ ಆಕಾಂಕ್ಷಿಗಳಿಗೆ ಹೊಸ ನೇಮಕಾತಿಗಳ ಬಗ್ಗೆ ಸಂಪೂರ್ಣ ಮಾಹಿತಿ ಒದಗಿಸುವ ಫೇಸ್‌ಬುಕ್‌ ಪೇಜ್‌ : ಉದ್ಯೋಗ ಜಗತ್ತು Job World : www.facebook.com/jobworldkarnataka  

ಪ್ರತಿ ದಿನ ನಿರಂತರವಾಗಿ ಉದ್ಯೋಗ ಮಾಹಿತಿ ಪಡೆಯಲು ನಮ್ಮ ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ

ಬ್ಯಾಂಕ್‌ ಸಹಾಯಕರ ಹುದ್ದೆ ನೇಮಕಾತಿ ಪ್ರಕಟಣೆಯ ಲಿಂಕ್‌: https://emsecure.in/Apex22-BA/Content/pdf/Apex_Notification.pdf

digimalenadu

ಶಿವಮೊಗ್ಗ
error: Content is protected !!