ರೋಟರಿ ಶಿವಮೊಗ್ಗ ಪೂರ್ವದಿಂದ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

ರೋಟರಿ ಶಿವಮೊಗ್ಗ ಪೂರ್ವದಿಂದ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

ಶಿವಮೊಗ್ಗ | 15 ಆಗಸ್ಟ್‌ 2022 | ಡಿಜಿ ಮಲೆನಾಡು.ಕಾಂ

ಮಕ್ಕಳ ಆರೋಗ್ಯ ತುಂಬಾ ಮುಖ್ಯವಾಗಿದ್ದು, ಮಕ್ಕಳೇ ದೇಶದ ಆಸ್ತಿ. ಅವರ ಆರೋಗ್ಯ ಕಾಪಾಡಬೇಕಿರುವುದು ನಮ್ಮೆಲ್ಲರ ಕರ್ತವ್ಯ ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಸುಮತಿ ಜಿ. ಕುಮಾರಸ್ವಾಮಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ವಿಶ್ವ ಜಂತು ಹುಳು ನಿವಾರಣಾ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳು ಜಂತು ಹುಳುವಿನ ಮಾತ್ರೆ ಸೇವಿಸಿ ಉತ್ತಮ ಆರೋಗ್ಯ ಪಡೆಯಬೇಕು. ಪೋಷಕರು ಹಾಗೂ ಶಿಕ್ಷಕರು ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ವಹಿಸಬೇಕು ಎಂದು ತಿಳಿಸಿದರು.

ಗ್ರಾಮೀಣ ಪ್ರದೇಶದ ಮಕ್ಕಳಿಗೆ ಶಿಕ್ಷಣಕ್ಕೆ ಅತ್ಯುತ್ತಮವಾದ ಕಲಿಕೆಯನ್ನು ಹೊಂದಲು ಸೌಲಭ್ಯಗಳ ಕೊರತೆಯಿದೆ. ರೋಟರಿ ಪೂರ್ವ ಸಂಸ್ಥೆಯಿಂದ ಪ್ರಸಕ್ತ ಸಾಲಿನಲ್ಲಿ 9000 ನೋಟ್ ಪುಸ್ತಕಗಳನ್ನು ಹಾಗೂ 1000 ಪೆನ್‌ಗಳನ್ನು ಉಚಿತವಾಗಿ ವಿತರಿಸುತ್ತಾ ಬಂದಿದೆ ಎಂದರು.

ಬಡ ಮತ್ತು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ಕೊಂಡುಕೊಳ್ಳಲು ಅತ್ಯಂತ ಕಷ್ಟಕರವಾಗಿದೆ. ಆದ್ದರಿಂದ ಇದರ ಸದುಪಯೋಗವನ್ನು ಸ್ವಂತ ಹಣದಿಂದ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ತಾವು ಇಂತಹ ನೂರಾರು ವಿದ್ಯಾರ್ಥಿಗಳಿಗೆ ಶಾಲೆಗಳಿಗೆ ಉಚಿತವಾಗಿ ಎಲ್ಲವನ್ನು ಕೊಡುವ ಸಾಮರ್ಥವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಶೈಕ್ಷಣಿಕ, ಕ್ರೀಡೆ ಸೇರಿದಂತೆ ಎಲ್ಲ ವಿಷಯಗಳಲ್ಲಿಯೂ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಹೆಚ್ಚಿನ ಪ್ರಗತಿಯನ್ನು ಸಾಧಿಸಿ ಶಿಕ್ಷಣ ಇಲಾಖೆಗೆ, ಗುರುಗಳಿಗೆ ಹಾಗು ಪೋಷಕರಿಗೆ ಮತ್ತು ನಮ್ಮ ದೇಶಕ್ಕೆ ಕೀರ್ತಿ ತರುವಂತಹರಾಗಬೇಕು ಎಂದು ತಿಳಿಸಿದರು.

ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 380 ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್, ಪೆನ್ ಹಾಗೂ ಜಂತುಹುಳುವಿನ ಮಾತ್ರೆಯನ್ನು ವಿತರಿಸಲಾಯಿತು.

ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕೆ.ಕುಮಾರಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳು ದೇಶದ ಆಸ್ತಿ. ವಿದ್ಯಾರ್ಥಿ ಜೀವನದಲ್ಲಿ ಎಲ್ಲವನ್ನು ಸಾಧಿಸುವ ಶ್ರದ್ಧೆ ಹಾಗು ಛಲವನ್ನು ಹೊಂದಿ ಭವ್ಯ ಭಾರತದ ಉತ್ತಮ ಪ್ರಜೆಗಳಾಗಲು ಸಲಹೆ ನೀಡಿದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ನಾಗನಗೌಡ ಹಾಗೂ ಶಾಲೆಯ ಮುಖ್ಯ ಶಿಕ್ಷಕರು ಹಾಗು ಶಿಕ್ಷಕರು, ಆರೋಗ್ಯ ಇಲಾಖೆಯವರು ಉಪಸ್ಥಿತರಿದ್ದರು.

digimalenadu

ಶಿವಮೊಗ್ಗ
error: Content is protected !!