ವಿಶೇಷ ಅಗತ್ಯವುಳ್ಳ ಮಕ್ಕಳನ್ನು ಮುಖ್ಯವಾಹಿನಿಗೆ ಕರೆತರಬೇಕು

ವಿಶೇಷ ಅಗತ್ಯವುಳ್ಳ ಮಕ್ಕಳನ್ನು ಮುಖ್ಯವಾಹಿನಿಗೆ ಕರೆತರಬೇಕು

ಶಿವಮೊಗ್ಗ | 27 ಸೆಪ್ಟೆಂಬರ್ 2022 | ಡಿಜಿ ಮಲೆನಾಡು.ಕಾಂ

ವಿಶೇಷ ಅಗತ್ಯವುಳ್ಳ ಮಕ್ಕಳನ್ನು ಮುಖ್ಯವಾಹಿನಿಗೆ ಕರೆತರುವ ಕೆಲಸ ಆಗಬೇಕು. ಇದಕ್ಕಾಗಿ ಪೋಷಕರು, ಶಿಕ್ಷಕರು ಹಾಗೂ ಸಮಾಜದ ಎಲ್ಲರ ಸಹಕಾರ ಮುಖ್ಯ ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಸುಮತಿ ಜಿ ಕುಮಾರಸ್ವಾಮಿ ಹೇಳಿದರು.‌

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ರೋಟರಿ ಶಿವಮೊಗ್ಗ ಪೂರ್ವ, ರೋಟರಿ ಕ್ಲಬ್ ಪುತ್ತೂರು ಹಾಗೂ ಜೆಸಿಐ ಅಲಂಕಾರು ಸಂಸ್ಥೆ ವತಿಯ ಸಹಯೋಗದಲ್ಲಿ ನಡೆದ “ಕಲಿಕಾಮೃತ” ಶೈಕ್ಷಣಿಕ ಕಾರ್ಯಾಗಾರದಲ್ಲಿ ಮಾತನಾಡಿದರು.

ಕಲಿಕಾ ನೂನ್ಯತೆಯುಳ್ಳ ವಿದ್ಯಾರ್ಥಿಗಳು ಪ್ರತಿಯೊಂದು ತರಗತಿ ಹಾಗೂ ಶಾಲೆಗಳಲ್ಲೂ ಇದ್ದು, ಅವರು ಯಾವ ನೂನ್ಯತೆಯಿಂದ ಬಳಲುತ್ತಿದ್ದಾರೆ ಎಂಬುದನ್ನು ಗುರುತಿಸಬೇಕು. ನೂನ್ಯತೆ ಆಧರಿಸಿ ಶಿಕ್ಷಣ ನೀಡಲು ರೋಟರಿ ಸಂಸ್ಥೆಯು ಸಾಕ್ಷರತಾ ಇಲಾಖೆ ಸಹಯೋಗದೊಂದಿಗೆ ಶಿಕ್ಷಕರಿಗೆ ತರಬೇತಿ ನೀಡಲು ಮುಂದಾಗಿದೆ. ಮಕ್ಕಳಲ್ಲಿರುವ ಪ್ರತಿಭೆ ಹೊರತರಲು ನಾವೆಲ್ಲರೂ ಶ್ರಮಿಸೋಣ ಎಂದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಸಂಪನ್ಮೂಲ ವ್ಯಕ್ತಿ ಡಾ. ಗೋವಿಂದ ಪ್ರಸಾದ್ ಹಾಗೂ ಜೆಸಿ ಅಲಂಕಾರು ವಲಯ ಮಾಜಿ ಅಧ್ಯಕ್ಷೆ ಹೇಮಲತಾ ಅವರು ಮಾತನಾಡಿದರು. ವಿಶೇಷ ಅಗತ್ಯವುಳ್ಳ 250 ಮಕ್ಕಳಿಗೆ ಸಾಮಾನ್ಯ ಶಾಲೆಯಲ್ಲಿ ಸಾಮಾನ್ಯ ಶಿಕ್ಷಣ ನೀಡಲು ಅವಶ್ಯವಿರುವ ಬ್ಯಾಗ್‌ಗಳನ್ನು ಜೆಸಿ ಅಲಂಕಾರು, ರೋಟರಿ ಶಿವಮೊಗ್ಗ ಪೂರ್ವ ಹಾಗೂ ರೋಟರಿ ಪುತ್ತೂರು ಕ್ಲಬ್ ವತಿಯಿಂದ ಉಚಿತವಾಗಿ ವಿತರಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ಗೆದ್ದ ಮಕ್ಕಳಿಗೆ ಬಹುಮಾನ ನೀಡಲಾಯಿತು.

ಬೆಂಗಳೂರಿನ ನಾಗನಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್, ದಕ್ಷಿಣ ಕನ್ನಡ ಜಿಲ್ಲೆಯ ಶಿವಪ್ರಸಾದ್, ವಿಮಲ್ ನೆಲ್ಯಾಡಿ, ರಾಮಕೃಷ್ಣ, ರೋಟರಿ ಪುತ್ತೂರು ಅಧ್ಯಕ್ಷ ಉಮಾಕಾಂತ್ ಮತ್ತಿತರರು ಉಪಸ್ಥಿತರಿದ್ದರು. 250ಕ್ಕೂ ಅಧಿಕ ವಿಶೇಷ ಅಗತ್ಯವುಳ್ಳ ಮಕ್ಕಳು, 300 ಶಿಕ್ಷಕರು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

digimalenadu

ಶಿವಮೊಗ್ಗ
error: Content is protected !!