ಮೈಸೂರು ದಸರಾ ಕುಸ್ತಿಯಲ್ಲಿ ಶಿವಮೊಗ್ಗದ ಮೇಘನಾಗೆ ಚಿನ್ನದ ಪದಕ
ಶಿವಮೊಗ್ಗ | 07 ಅಕ್ಟೋಬರ್ 2022 | ಡಿಜಿ ಮಲೆನಾಡು.ಕಾಂ
ಮೈಸೂರು ದಸರಾ ಕುಸ್ತಿ ಸ್ಪರ್ಧೆಯಲ್ಲಿ ಹೊಸನಗರದ ಮೇಘನಾ ಮೊದಲ ಸ್ಥಾನ ಗಳಿಸಿ ಚಿನ್ನದ ಪದಕ ವಿಜೇತರಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu
ಮೈಸೂರು ದಸರಾದಲ್ಲಿ ಆಯೋಜಿಸಿದ್ದ 72 ಕೆಜಿ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿ ಮೊದಲ ಸ್ಥಾನ ಗಳಿಸಿದ್ದು, 8 ಸಾವಿರ ರೂ. ನಗದು ಬಹುಮಾನ ನೀಡಲಾಗಿದೆ. ಶಿವಮೊಗ್ಗದ ಯುವತಿ ಸಾಧನೆಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಹೊಸನಗರದ ರಾಮಕೃಷ್ಣ ವಿದ್ಯಾಲಯದಲ್ಲಿ ಎಸ್‌ಎಸ್‌ಎಲ್‌ಸಿ ಅಧ್ಯಯನ ಮಾಡಿರುವ ಮೇಘನಾ, ಮೂಡಬಿದರೆಯ ಆಳ್ವಾಸ್ ಕಾಲೇಜ್‌ನಲ್ಲಿ ಪಿಯು ಶಿಕ್ಷಣ ಪೂರೈಸಿದ್ದಾರೆ. ಮೇಘನಾ ಇದೀಗ ಶಿವಮೊಗ್ಗದ ಡಿವಿಎಸ್ ಸಂಸ್ಥೆಯಲ್ಲಿ ಬಿಕಾಂ ಓದುತ್ತಿದ್ದಾರೆ. ವಿದ್ಯಾರ್ಥಿನಿ ಸಾಧನೆಗೆ ಡಿವಿಎಸ್ ಆಡಳಿತ ಮಂಡಳಿ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.
ಡಿಜಿ ಮಲೆನಾಡು.ಕಾಂ | ಇ-ಮೇಲ್ : digimalenadu@gmail.com
ಮೇಘನಾ ಅವರ ತಂದೆ ಬಾಲಕೃಷ್ಣ ಅವರು ಹೊಸನಗರದಲ್ಲಿ ಆಂಬುಲೆನ್ಸ್ ಚಾಲಕರಾಗಿದ್ದಾರೆ. ತಾಯಿ ಕರಿಬಸಮ್ಮ ಅವರು ಪುತ್ರಿಯ ಸಾಧನೆಯನ್ನು ಸಂಭ್ರಮಿಸಿದ್ದಾರೆ.
