ಉದ್ಯಮದಲ್ಲಿ ತೊಡಗಿಸಿಕೊಳ್ಳುವ ಯುವಜನರಿಗೆ ಮಾರ್ಗದರ್ಶನ

ಉದ್ಯಮದಲ್ಲಿ ತೊಡಗಿಸಿಕೊಳ್ಳುವ ಯುವಜನರಿಗೆ ಮಾರ್ಗದರ್ಶನ

ಶಿವಮೊಗ್ಗ | 11 ಅಕ್ಟೋಬರ್ 2022 | ಡಿಜಿ ಮಲೆನಾಡು.ಕಾಂ

ಯುವಜನರು ಉದ್ಯಮಗಳಲ್ಲಿ ತೊಡಗಿಸಿಕೊಳ್ಳಲು ಅವಶ್ಯವಿರುವ ಎಲ್ಲ ರೀತಿ ಮಾರ್ಗದರ್ಶನವನ್ನು ಜೆಸಿ ಚೇಂಬರ್ ಆಫ್ ಕಾಮರ್ಸ್ ಒದಗಿಸುತ್ತಿರುವುದು ಅಭಿನಂದನೀಯ ಎಂದು ಜೆಸಿ ವಲಯ ಉಪಾಧ್ಯಕ್ಷ, ಜೆಕಾಮ್ ಸದಸ್ಯ ಗೌರೀಶ್ ಭಾರ್ಗವ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ಶಿವಮೊಗ್ಗ ನಗರದ ಶುಭಂ ಹೋಟೆಲ್‌ನಲ್ಲಿ ಜೆಸಿ ಅಂದೋಲನಕ್ಕೆ ಕೊಡುಗೆ ನೀಡಿದ ಜೆಕಾಮ್ ಟೇಬಲ್‌ನ ಸದಸ್ಯರೊಂದಿಗೆ ಸಭೆ ಮತ್ತು ಎಸ್‌ಎಂಎ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ವ್ಯವಹಾರಗಳನ್ನು ವೃದ್ಧಿಸಲು, ವ್ಯವಹಾರಗಳಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಹಾಗೂ ವ್ಯವಹಾರಗಳಲ್ಲಿ ಹೆಚ್ಚಿನ ಜ್ಞಾನವನ್ನು ಪಡೆಯಲು ಉತ್ತಮವಾದ ವ್ಯವಸ್ಥೆಯನ್ನು ಜೆಸಿ ಚೇಂಬರ್ ಆಫ್ ಕಾಮರ್ಸ್ ಕಲ್ಪಿಸುತ್ತಿದೆ ಎಂದು ತಿಳಿಸಿದರು.

ವಾಣಿಜ್ಯ ಸಂಘದ ಕಾರ್ಯದರ್ಶಿ ವಸಂತ್ ಹೋಬಳಿದಾರ್ ಮಾತನಾಡಿ, ಯುವಜನರಿಗೆ ಉದ್ಯಮದಲ್ಲಿ ಆಸಕ್ತಿ ಮೂಡಿಸುವಂತೆ ಜೆಸಿಐ ಸಂಸ್ಥೆ ಆಯೋಜಿಸಿರುವ ಕಾರ್ಯಕ್ರಮ ಶ್ಲಾಘನೀಯ ಎಂದು ಹೇಳಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

ಜೆಸಿಐ ಸಹ್ಯಾದ್ರಿ ಶಿವಮೊಗ್ಗ ಅಧ್ಯಕ್ಷ ಸತೀಶ್‌ಚಂದ್ರ ಮಾತನಾಡಿ, ಜೆಸಿ ಸಂಸ್ಥೆಯು ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದ್ದು, ಶಿಕ್ಷಣ ಮತ್ತು ಸೇವಾ ಕ್ಷೇತ್ರದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದು ತಿಳಿಸಿದರು.

ಜೆಸಿಐ ವಲಯ ನಿರ್ದೇಶಕ ಅನೂಶ್‌ಗೌಡ, ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್, ಜೆಸಿಐ ಸಹ್ಯಾದ್ರಿ ಸಂಸ್ಥಾಪಕ ಅಧ್ಯಕ್ಷ ಹರೀಶ್, ಜೆಎಫ್‌ಸಿ ಶೇಷಗಿರಿ.ಡಿ, ಜೆಸಿಐ ಸಹ್ಯಾದ್ರಿ ಶಿವಮೊಗ್ಗ ಕಾರ್ಯದರ್ಶಿ ಸಂತೋಷ್‌ಕುಮಾರ್ ಬಿ.ಎನ್., ಕಾರ್ಯಕ್ರಮ ನಿರ್ದೇಶಕಿ ಸ್ವಪ್ನಾ ಬದ್ರಿನಾಥ್ ಉಪಸ್ಥಿತರಿದ್ದರು.

digimalenadu

ಶಿವಮೊಗ್ಗ
error: Content is protected !!