ಇ ತ್ಯಾಜ್ಯ ಅರಿವು ಮತ್ತು ವಿಲೇವಾರಿ ಅಭಿಯಾನ ಅಕ್ಟೋಬರ್‌ 14ಕ್ಕೆ

ಇ ತ್ಯಾಜ್ಯ ಅರಿವು ಮತ್ತು ವಿಲೇವಾರಿ ಅಭಿಯಾನ ಅಕ್ಟೋಬರ್‌ 14ಕ್ಕೆ

ಶಿವಮೊಗ್ಗ | 12 ಅಕ್ಟೋಬರ್ 2022 | ಡಿಜಿ ಮಲೆನಾಡು.ಕಾಂ‌

ಅಂತರಾಷ್ಟ್ರೀಯ ಇ ತ್ಯಾಜ್ಯ ದಿನದ ಪ್ರಯುಕ್ತ ಶಿವಮೊಗ್ಗ ನಗರದ ಎಟಿಎನ್‌ಸಿಸಿ ಕಾಲೇಜಿನ ಚಂದನ ಸಭಾಂಗಣದಲ್ಲಿ ಅಕ್ಟೋಬರ್‌ 14ರಂದು ಮಧ್ಯಾಹ್ನ 2ಕ್ಕೆ “ಇ ತ್ಯಾಜ್ಯ ಅರಿವು ಮತ್ತು ವಿಲೇವಾರಿ ಅಭಿಯಾನ” ಹಮ್ಮಿಕೊಳ್ಳಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಗೋಪಿನಾಥ್‌ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ಪ್ರತಿ ವರ್ಷ ವಿಶ್ವದಲ್ಲಿ 57 ಮಿಲಿಯನ್‌ ಮೆಟ್ರಿಕ್‌ ಟನ್‌ ತ್ಯಾಜ್ಯ ಉತ್ಪಾದನೆ ಆಗುತ್ತಿದ್ದು, ಮುಂದಿನ ದಿನಗಳಲ್ಲಿ ಬಹುದೊಡ್ಡ ಸಮಸ್ಯೆಯಾಗಿ ಜಗತ್ತನ್ನು ಕಾಡಲಿದೆ. ಆದ್ದರಿಂದ ಇ ತ್ಯಾಜ್ಯದ ಅರಿವು ಮತ್ತು ವಿಲೇವಾರಿ ಬಗ್ಗೆ ಗಮನ ವಹಿಸಬೇಕಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅಕ್ಟೋಬರ್‌ 14ರ ಮಧ್ಯಾಹ್ನ 2ಕ್ಕೆ ಆಯೋಜಿಸಿರುವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಉದ್ಘಾಟಿಸುವರು. ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ನಾರಾಯಣರಾವ್‌, ಸರ್ಜಿ ಫೌಂಡೇಷನ್‌ ಮ್ಯಾನೇಜಿಂಗ್‌ ಟ್ರಸ್ಟಿ ಡಾ. ಧನಂಜಯ ಸರ್ಜಿ, ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ, ಐ ಸೆವೆನ್ ವೇಣುಗೋಪಾಲ್‌, ಜಿ.ವಿ.ರವೀಂದ್ರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಡೂ ಮೈಂಡ್ಸ್‌ ಡಿಸೈನ್‌ ಲ್ಯಾಬ್‌, ಪರಿಸರ ಅಧ್ಯಯನ ಕೇಂದ್ರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಂಯುಕ್ತ ಆಶ್ರಯದಲ್ಲಿ ಅಭಿಯಾನ ನಡೆಯುತ್ತಿದೆ. ಜಿಲ್ಲಾಡಳಿತ, ಸರ್ಜಿ ಫೌಂಡೇಷನ್‌, ಐ ಸೆವೆನ್‌, ರೇಡಿಯೋ ಶಿವಮೊಗ್ಗ, ಶಿವಮೊಗ್ಗ ಐಟಿ ಅಸೋಸಿಯೇಷನ್‌, ರಾಷ್ಟ್ರೀಯ ಶಿಕ್ಷಣ ಸಮಿತಿ, ನಡಿಗೆ ಶಿಕ್ಷಣ ಪ್ರತಿಷ್ಠಾನ, ರೋಟರಿ, ಜೆಸಿಐ ಹಾಗೂ ಇತರ ಸಂಸ್ಥೆಗಳು ಸಹಕಾರ ನೀಡಲಿವೆ.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ವಸಂತ ಹೋಬಳಿದಾರ್‌, ಸಹ ಕಾರ್ಯದರ್ಶಿ ಜಿ.ವಿಜಯ್ ಕುಮಾರ್‌, ಉಪಾಧ್ಯಕ್ಷ ಬಿ.ಗೋಪಿನಾಥ್‌, ನಿರ್ದೇಶಕ ಪ್ರದೀಪ್‌ ಎಲಿ, ಗಣೇಶ ಎಂ.ಅಂಗಡಿ, ಸರ್ಜಿ ಫೌಂಡೇಷನ್‌ ಡಾ. ಧನಂಜಯ ಸರ್ಜಿ, ಪ್ರಮುಖರಾದ ರಮೇಶ್ ಹೆಗ್ಡೆ, ರಂಗನಾಥ್‌, ಜನಾರ್ಧನ್‌, ವೆಂಕಟೇಶ್‌.ಡಿ, ನವೀನ್‌ ಉಪಸ್ಥಿತರಿದ್ದರು.

digimalenadu

ಶಿವಮೊಗ್ಗ
error: Content is protected !!