ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆಯಿಂದ ನೈರ್ಮಲ್ಯ ಕಿಟ್ ವಿತರಣೆ

ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆಯಿಂದ ನೈರ್ಮಲ್ಯ ಕಿಟ್ ವಿತರಣೆ

ಶಿವಮೊಗ್ಗ | 18 ಅಕ್ಟೋಬರ್ 2022 | ಡಿಜಿ ಮಲೆನಾಡು.ಕಾಂ

ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದೇ ನಿರಂತರವಾಗಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ಜಾಗೃತಿ ವಹಿಸಬೇಕು ಎಂದು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಶಿವಮೊಗ್ಗ ಜಿಲ್ಲಾ ಶಾಖೆ ಸಭಾಪತಿ ಎಸ್.ಪಿ.ದಿನೇಶ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ನಗರದ ಡಿವಿಎಸ್ ರಂಗಮಂದಿರದಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಶಿವಮೊಗ್ಗ ಜಿಲ್ಲಾ ಶಾಖೆ, ಡಿವಿಎಸ್ ಸಂಸ್ಥೆ, ನಂಜಪ್ಪ ಲೈಫ್ ಕೇರ್ ಆಸ್ಪತ್ರೆ ಸಹಯೋಗದಲ್ಲಿ ಆಯೋಜಿಸಿದ್ದ “ನೈರ್ಮಲ್ಯ ಕಿಟ್ ವಿತರಣಾ ಸಮಾರಂಭ”ದಲ್ಲಿ ಮಾತನಾಡಿದರು.

ಪೌರ ಕಾರ್ಮಿಕರಿಗೆ ಆರೋಗ್ಯ ಸೇವೆ ಒದಗಿಸುವ ಕಾಯಕದಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಸದಾ ಸಿದ್ಧವಿರುತ್ತದೆ. ಕರೊನಾ ಸಂದರ್ಭದಲ್ಲಿ ನಮ್ಮ ಸಂಸ್ಥೆ ಜಿಲ್ಲಾಡಳಿತದ ಸಹಯೋಗದಲ್ಲಿ ಅನೇಕ ಸೇವಾ ಚಟುವಟಿಕೆಗಳನ್ನು ನಡೆಸಿತು ಎಂದು ತಿಳಿಸಿದರು.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಶಿವಮೊಗ್ಗ ಜಿಲ್ಲಾ ಶಾಖೆ ಗೌರವ ಕಾರ್ಯದರ್ಶಿ ಡಾ. ದಿನೇಶ್ ಮಾತನಾಡಿ, ರೆಡ್‌ಕ್ರಾಸ್ ಸಂಸ್ಥೆಯು ನಿರಂತರವಾಗಿ ಆರೋಗ್ಯ ಮತ್ತು ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಕಾರ್ಯಕ್ರಮ ಆಯೋಜಿಸಿಕೊಂಡು ಬರುತ್ತಿದೆ. ಇದೀಗ ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಜತೆಯಲ್ಲಿ ರೆಡ್‌ಕ್ರಾಸ್ ಶಿವಮೊಗ್ಗ ಘಟಕದಿಂದ ಪೌರ ಕಾರ್ಮಿಕರಿಗೆ ನೈರ್ಮಲ್ಯ ಕಿಟ್ ವಿತರಿಸಲಾಗುತ್ತಿದೆ ಎಂದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ನಂಜಪ್ಪ ಲೈಫ್‌ಕೇರ್ ಆಸ್ಪತ್ರೆಯ ವೈದ್ಯೆ ಡಾ. ಅಪರ್ಣಾ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಸ್ತನ ಕ್ಯಾನ್ಸರ್ ಹೆಚ್ಚು ಕಾಣಿಸಿಕೊಳ್ಳುತ್ತಿದ್ದು, ಜೀವಕ್ಕೂ ಅಪಾಯ ತರಬಲ್ಲದು. ಮ್ಯಾಮೋಗ್ರಾಫಿ ಮುಖಾಂತರ ಸ್ತನದ ಕ್ಯಾನ್ಸರ್ ಪರೀಕ್ಷೆ ಮಾಡಿಕೊಳ್ಳಬಹುದು. ಸ್ತನದಲ್ಲಿ ಗಡ್ಡೆ, ಚರ್ಮ ಗಟ್ಟಿಯಾಗುವುದು ಸೇರಿ ವಿವಿಧ ರೀತಿ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ ಎಂದು ತಿಳಿಸಿದರು.

ಜೆಎನ್‌ಎನ್‌ಸಿಇ ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ರೆಡ್‌ ಕ್ರಾಸ್‌ ಸಂಸ್ಥೆಯ ಸ್ವಯಂ ಸೇವಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಶಿವಮೊಗ್ಗ ಜಿಲ್ಲಾ ಶಾಖೆ ನಿರ್ದೇಶಕ ವಸಂತ್ ಹೋಬಳಿದಾರ್, ಜಿ.ವಿಜಯ್‌ಕುಮಾರ್, ಪೌರಕಾರ್ಮಿಕರ ಸಂಘದ ಮಾರಪ್ಪ, ಗೋವಿಂದಪ್ಪ, ಡಿವಿಎಸ್ ಸಂಸ್ಥೆ ಕಾರ್ಯದರ್ಶಿ ರಾಜಶೇಖರ್, ಎನ್‌ಇಎಸ್ ಅಶ್ವತ್ಥ್ ನಾರಾಯಣ ಶೆಟ್ಟಿ, ಡಾ. ವಿ.ಎಲ್.ಎಸ್.ಕುಮಾರ್, ಭಾರತಿ ಚಂದ್ರಶೇಖರ್, ಧರಣೇಂದ್ರ ದಿನಕರ್, ನವೀನ್ ಜಿ.ಪಿ., ಎಡ್ವರ್ಡ್ ಪಿಂಟೊ, ಗಿರೀಶ್ ಶೇಟ್, ಸುರೇಶ್, ಮಂಜುನಾಥ್, ಡಾ. ರೇಷ್ಮಾ ಉಪಸ್ಥಿತರಿದ್ದರು.

digimalenadu

ಶಿವಮೊಗ್ಗ
error: Content is protected !!