ನವೆಂಬರ್ 7 ರಿಂದ ಶಿವಮೊಗ್ಗ ಜಿಲ್ಲಾದ್ಯಂತ ಉಚಿತ ಕಾಲುಬಾಯಿ ರೋಗ ಲಸಿಕಾ ಅಭಿಯಾನ
ಶಿವಮೊಗ್ಗ | 4 ನವೆಂಬರ್ 2022 | ಡಿಜಿ ಮಲೆನಾಡು.ಕಾಂ
ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಶಿವಮೊಗ್ಗ ವತಿಯಿಂದ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 2022ರ ನವೆಂಬರ್ 7ರಿಂದ 2022ರ ಡಿಸೆಂಬರ್ 7 ರವರೆಗೆ “ಉಚಿತ ಕಾಲುಬಾಯಿ ರೋಗ ಲಸಿಕಾ ಅಭಿಯಾನ” ಹಮ್ಮಿಕೊಳ್ಳಲಾಗಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu
ಶಿವಮೊಗ್ಗ ಜಿಲ್ಲೆಯಲ್ಲಿ 3ನೇ ಸುತ್ತಿನ ಕಾಲುಬಾಯಿ ರೋಗ ಲಸಿಕೆ ಅಭಿಯಾನ ಹಮ್ಮಿಕೊಂಡಿದ್ದು, ಪಶುಪಾಲಕರು, ರೈತರು ಅಭಿಯಾನದಲ್ಲಿ ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ಹಾಕಿಸಬೇಕು. ಲಸಿಕಾ ಅಭಿಯಾನ ಯಶಸ್ವಿಗೊಳಿಸಲು ಮನೆ ಆವರಣಕ್ಕೆ ಬರುವ ಪಶುವೈದ್ಯಾಧಿಕಾರಿಗಳಿಗೆ ಎಲ್ಲರೂ ಸಹಕಾರ ನೀಡುವ ಮೂಲಕ ಕಾಲುಬಾಯಿ ರೋಗ ನಿಯಂತ್ರಿಸಲು ಶ್ರಮಿಸಬೇಕು.
ಕಾಲುಬಾಯಿ ರೋಗವು ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ರೋಗ ಆಗಿದ್ದು, ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆ ಹಾಕಿಸಬೇಕು. ರೋಗ ಬರದಂತೆ ಜಾನುವಾರುಗಳನ್ನು ಸಂರಕ್ಷಿಸಬೇಕು. ದನ, ಎಮ್ಮೆ, ಕರುಗಳಿಗೆ ಉಚಿತವಾಗಿ ಲಸಿಕೆ ಹಾಕಲಾಗುವುದು.
ಶಿವಮೊಗ್ಗ ಜಿಲ್ಲೆಯನ್ನು ಕಾಲುಬಾಯಿ ರೋಗ ಮುಕ್ತ ವಲಯವಾಗಿ ರೂಪಿಸಲು ಎಲ್ಲರೂ ಸಹಕಾರ ನೀಡಬೇಕು. 2022ರ ನವೆಂಬರ್ 7ರಿಂದ ಆರಂಭವಾಗುವ ಕಾಲುಬಾಯಿ ಲಸಿಕಾ ಅಭಿಯಾನದಲ್ಲಿ 6.40 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕಿಸಲು ಉದ್ದೇಶಿಸಲಾಗಿದೆ. ಇನ್ನೂ ಚರ್ಮಗಂಟು ರೋಗ ನಿಯಂತ್ರಣ ಲಸಿಕೆ ಹಾಕಿಸಿದ್ದರೂ ಕಾಲುಬಾಯಿ ರೋಗ ಲಸಿಕೆ ಹಾಕಿಸಬಹುದಾಗಿದೆ. | ಡಾ. ಶಿವಯೋಗಿ ಬಿ ಯಲಿ, ಉಪನಿರ್ದೇಶಕರು, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಶಿವಮೊಗ್ಗ ಜಿಲ್ಲೆ
ರೈತರಿಗೆ ಆರ್ಥಿಕ ಸಂಕಷ್ಟಗಳನ್ನು ತಂದೊಡ್ಡುವ, ಕಾಲುಬಾಯಿ ರೋಗವನ್ನು ನಿಯಂತ್ರಿಸಿ ನಿರ್ಮೂಲನೆಗೊಳಿಸಿ ಪ್ರತಿ 6 ತಿಂಗಳಿಗೊಮ್ಮೆ ರೋಗದ ವಿರುದ್ಧ ಲಸಿಕೆ ಹಾಕಿಸಬೇಕು. ರಾಷ್ಟ್ರೀಯ ಜಾನುವಾರು ರೋಗ ಲಸಿಕೆ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಶಿವಮೊಗ್ಗ ಜಿಲ್ಲೆಗೆ ಕೇಂದ್ರ ಸರ್ಕಾರದಿಂದ ಕಾಲುಬಾಯಿ ಲಸಿಕೆ ಸರಬರಾಜಾಗಿದೆ. ಪ್ರತಿ ಜಾನುವಾರುವಿಗೆ ಪ್ರತ್ಯೇಕ ಸಿರಿಂಜ್ ಹಾಗೂ ನೀಡಲ್ ಬಳಸಲಾಗುತ್ತದೆ.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಲಸಿಕೆದಾರರು ಪ್ರತಿ ಗ್ರಾಮ, ಮನೆ ಬಾಗಿಲಿಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆ ಹಾಕಲಿದ್ದಾರೆ. ಲಸಿಕಾ ಅಭಿಯಾನದ ಮಾಹಿತಿಗೆ ಸಮೀಪದ ಪಶುಪಾಲನಾ ಇಲಾಖೆ ಅಧಿಕಾರಿ ಅಥವಾ ಹಾಲು ಉತ್ಪಾದಕರ ಸಹಕಾರ ಸಂಘ ಸಂಪರ್ಕಿಸಬಹುದಾಗಿದೆ.
ಜಾನುವಾರು ಕಾಲುಬಾಯಿ ರೋಗ ಲಸಿಕಾ ಅಭಿಯಾನದ ಭಿತ್ತಿಪತ್ರಗಳನ್ನು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅವರು ಇತ್ತೀಚೆಗೆ ಬಿಡುಗಡೆಗೊಳಿಸಿದರು. ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ. ಶಿವಯೋಗಿ ಬಿ.ಯಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ ಉಪಸ್ಥಿತರಿದ್ದರು.