ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಉತ್ಸವ ಆಯೋಜನೆ, ಡಿಸೆಂಬರ್ 21ರಿಂದ 7 ದಿನ ವೈವಿಧ್ಯಮಯ ಕಾರ್ಯಕ್ರಮ
ಶಿವಮೊಗ್ಗ | 10 ನವೆಂಬರ್ 2022 | ಡಿಜಿ ಮಲೆನಾಡು.ಕಾಂ
ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಡಿಸೆಂಬರ್ 21ರಿಂದ 21ರವರೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ವತಿಯಿಂದ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಉತ್ಸವ ಆಯೋಜಿಸಲಾಗಿದೆ ಎಂದು ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu
ಅಂತರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಜಾಂಬೂರಿಯು ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಆಯೋಜಿಸಲಾಗುತ್ತಿದೆ. ದೇಶ ವಿದೇಶಗಳಿಂದ 50 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಶಿವಮೊಗ್ಗ ಜಿಲ್ಲೆಯ ಒಂದು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮಕ್ಕಳ ಸರ್ವಾಂಗೀಣ ಬೆಳವಣಿಗೆ, ನಾಯಕತ್ವ ಗುಣ, ಕೌಶಲ್ಯ, ಸಮುದಾಯ ಸೇವೆ, ಉತ್ತಮ ಶಿಕ್ಷಣ, ಆರೋಗ್ಯ, ಸ್ವಚ್ಛತೆ, ಪರಿಸರ ಕಾಳಜಿ, ಶಿಸ್ತುಬದ್ಧ ಜೀವನ ಹೀಗೆ ಅನೇಕ ವಿಷಯಗಳನ್ನು ವಿದ್ಯಾರ್ಥಿಗಳಿಗೆ ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ಕಲಿಸಲಾಗುತ್ತದೆ. ಮಕ್ಕಳು ಮೌಲ್ಯಯುತ ಜೀವನ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಆಳ್ವಾಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ. ಎಂ.ಮೋಹನ್ ಆಳ್ವ ಮಾತನಾಡಿ, ಜಾಂಬೂರಿ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗಾಗಿ ಕಲಾ ಮೇಳ, ಸಂಸ್ಕೃತಿ ಮೇಳ, ಆಹಾರ, ವಿಜ್ಞಾನ, ಕೃಷಿ, ಪುಸ್ತಕ, ಸಂಗೀತ ಮೇಳ, ಶಾಂತಿ ಜಾಥಾ, ಕಡಲ ಚಾರಣ, ಸಾಹಸ ಕ್ರೀಡೆ, ಯೋಗ ಸೇರಿದಂತೆ ವೈವಿಧ್ಯ ಕಾರ್ಯ ಚಟುವಟಿಕೆಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ಅಂತರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಜಾಂಬೂರಿ ಕಾರ್ಯಕ್ರಮಕ್ಕೆ 10 ಲಕ್ಷ ರೂ.ಗಳನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿವಮೊಗ್ಗ ಜಿಲ್ಲಾ ಸಂಸ್ಥೆಯಿಂದ ದೇಣಿಗೆಯಾಗಿ ನೀಡಲಾಯಿತು.
ಜಿಲ್ಲಾ ಮುಖ್ಯ ಆಯುಕ್ತ ಎಚ್.ಡಿ.ರಮೇಶ್ ಶಾಸ್ತ್ರಿ, ಡಾ. ಧನಂಜಯ ಸರ್ಜಿ, ಪ್ರಮುಖರಾದ ಕೆ.ಪಿ.ಬಿಂದುಕುಮಾರ್, ಶಕುಂತಲಾ ಚಂದ್ರಶೇಖರ್, ಜಿ.ವಿಜಯ್ ಕುಮಾರ್, ಭಾರತಿ ಚಂದ್ರಶೇಖರ್, ಸರಸ್ವತಿ ನಾಗರಾಜ್, ಚೂಡಾಮಣಿ ಪವಾರ್, ರಾಜಪ್ಪ, ರಮೇಶ್ ಬಾಬು, ಪರಮೇಶ್ವರ್ ಸುದ್ದಿಗೋಷ್ಠಿಯಲ್ಲಿದ್ದರು.