ಮಧುಮೇಹ ಜಾಗೃತಿ ಮೂಡಿಸುವುದು ಅವಶ್ಯಕ
ಶಿವಮೊಗ್ಗ | 15 ನವೆಂಬರ್ 2022 | ಡಿಜಿ ಮಲೆನಾಡು.ಕಾಂ
ಮಧುಮೇಹಿಗಳಿಗೆ ಸಕಾಲಕ್ಕೆ ತಪಾಸಣೆ ಹಾಗೂ ಮಧುಮೇಹದ ಬಗ್ಗೆ ಅರಿವು ಮೂಡಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಸುಮತಿ ಕುಮಾರಸ್ವಾಮಿ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu
ವಿಶ್ವ ಮಧುಮೇಹ ದಿನಾಚರಣೆ ಪ್ರಯುಕ್ತ ರೋಟರಿ ಶಿವಮೊಗ್ಗ ಪೂರ್ವ, ನೇಚರ್ ಬೆಲ್ ಆಯುರ್ವೇದ, ಆಶೀರ್ವಾದ ಕಣ್ಣಿನ ಆಸ್ಪತ್ರೆ ಮತ್ತು ಶ್ರೀ ಸಾಯಿ ಮಹಿಳಾ ಗೃಹ ನಿರ್ಮಾಣ ಸಹಕಾರ ಸಂಘ ವತಿಯಿಂದ ಸಂಘದ ಕಚೇರಿಯಲ್ಲಿ ಆಯೋಜಿಸಿದ್ದ ನೇತ್ರ ತಪಾಸಣೆ, ರಕ್ತಪರೀಕ್ಷೆ ಮತ್ತು ಮಧುಮೇಹ ಉಚಿತ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ರೋಟರಿ ಸಂಸ್ಥೆಯು ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ಮಾಡುತ್ತಿದ್ದು, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಸೇವೆ ಸಲ್ಲಿಸುತ್ತಿದೆ. ಸಾರ್ವಜನಿಕರಿಗೆ ಅನುಕೂಲ ಒದಗಿಸುವ ದೃಷ್ಠಿಯಿಂದ ಮುಂದಿನ ದಿನಗಳಲ್ಲಿಯು ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮಗಳನ್ನು ಏರ್ಪಡಿಸಲಿದೆ ಎಂದು ತಿಳಿಸಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಮಾತನಾಡಿ, ಮಧುಮೇಹ ಕಾಯಿಲೆ ಇರುವವರಿಗೆ ಕುಟುಂಬ ಸದಸ್ಯರ ಸಹಕಾರದ ಪ್ರಾಮುಖ್ಯತೆ ಹಾಗೂ ಕುಟುಂಬ ಸದಸ್ಯರಿಗೆ ಈ ಕಾಯಿಲೆ ಬರದಂತೆ ಹೇಗೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂಬುದರ ಅರಿವು ಮೂಡಿಸಬೇಕಿದೆ ಎಂದು ಹೇಳಿದರು.
ಶಿಬಿರದಲ್ಲಿ 150ಕ್ಕೂ ಹೆಚ್ಚು ಜನರಿಗೆ ತಪಾಸಣೆ ಮಾಡಲಾಯಿತು. ನೇಚರ್ ಬೆಲ್ ಆಯುರ್ವೇದ ಕ್ಲಿನಿಕ್ ಮಧುಮೇಹ ತಜ್ಞ ಡಾ. ಹನುಮಂತಪ್ಪ ಸುಂಕಾಪುರ, ಶಿವಮೊಗ್ಗ ನಗರದ ಆಶೀರ್ವಾದ ಕಣ್ಣಿನ ಆಸ್ಪತ್ರೆಯ ವೈದ್ಯ ಡಾ. ಅರುಣ್ ಎ ಮಾತನಾಡಿದರು.
ಕಾರ್ಯಕ್ರಮದಲ್ಲಿ ರೋಟರಿ ಶಿವಮೊಗ್ಗ ಪೂರ್ವದ ಕಾರ್ಯದರ್ಶಿ ಕುಮಾರಸ್ವಾಮಿ ಕೆ, ಮಂಜುನಾಥ್ ಕದಂ, ಆಶೀರ್ವಾದ ಕಣ್ಣಿನ ಆಸ್ಪತ್ರೆಯ ಡಾ. ಕೋಮಲ, ಸಾಯಿ ಮಹಿಳಾ ಗೃಹ ನಿರ್ಮಾಣ ಸಂಘದ ನಿರ್ದೇಶಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು.