ಶಿವಮೊಗ್ಗ ವಿಷನ್ 2050 ನಿಮ್ಮ ಕಲ್ಪನೆ ಏನು, ಲೇಖನ ಬರೆದು ಕಳುಹಿಸಿ, ಸೂಕ್ತ ನಗದು ಬಹುಮಾನ ಗೆಲ್ಲಿರಿ

ಶಿವಮೊಗ್ಗ ವಿಷನ್ 2050 ನಿಮ್ಮ ಕಲ್ಪನೆ ಏನು, ಲೇಖನ ಬರೆದು ಕಳುಹಿಸಿ, ಸೂಕ್ತ ನಗದು ಬಹುಮಾನ ಗೆಲ್ಲಿರಿ

ಶಿವಮೊಗ್ಗ | 19 ನವೆಂಬರ್ 2022 | ಡಿಜಿ ಮಲೆನಾಡು.ಕಾಂ

2050ರ ವೇಳೆಯಲ್ಲಿ ಶಿವಮೊಗ್ಗ ಜಿಲ್ಲೆಯು ಎಲ್ಲ ಕ್ಷೇತ್ರಗಳಲ್ಲಿ ಅತ್ಯಂತ ಸದೃಢವಾಗಿ ರೂಪುಗೊಳ್ಳಬೇಕಾದರೆ ಅಗತ್ಯವಿರುವ ಯೋಜನೆಗಳ ಅನುಷ್ಠಾನ ಸಂಬಂಧಿಸಿ ಶಿವಮೊಗ್ಗ ವಿಷನ್ 2050 ವರದಿ ಸಿದ್ಧಪಡಿಸಲಾಗುತ್ತಿದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಶಿವಮೊಗ್ಗ ವಿಷನ್ 2050 ವಿಷಯ ಕುರಿತು ಮಾಧ್ಯಮ ಮಿತ್ರರೊಂದಿಗೆ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ಕೃಷಿ, ಆರೋಗ್ಯ, ಶಿಕ್ಷಣ, ಕೈಗಾರಿಕಾ ಕ್ಷೇತ್ರಗಳಲ್ಲಿ ಶಿವಮೊಗ್ಗದಲ್ಲಿ ಆಗಬೇಕಿರುವ ಯೋಜನೆಗಳ ಅನುಷ್ಠಾನದ ಬಗ್ಗೆ ಎಲ್ಲ ಕ್ಷೇತ್ರಗಳ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಪತ್ರಕರ್ತ ಗೋಪಾಲ್ ಯಡಗೆರೆ ಮಾತನಾಡಿ, ಶಿವಮೊಗ್ಗ ನಗರ 25-30 ವರ್ಷಗಳಲ್ಲಿ ಬೆಳೆಯಬಹುದಾದ ವೇಗಕ್ಕೆ ಅನುಗುಣವಾಗಿ ರಸ್ತೆ, ಪಾರ್ಕಿಂಗ್, ಮೂಲಸೌಕರ್ಯ ಒದಗಿಸುವ ಬಗ್ಗೆ ಯೋಜನೆ ಅನುಷ್ಠಾನಗೊಳಿಸುವ ಅಗತ್ಯವಿದೆ ಎಂದು ಹೇಳಿದರು.

ಪತ್ರಕರ್ತ ಅರುಣ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಈಗಾಗಲೇ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಜತೆಯಲ್ಲಿ ಪೂರಕವಾಗಿ ಅನುಷ್ಠಾನ ಮಾಡಬಹುದಾದ ಯೋಜನೆಗಳ ಸಲಹೆ ನೀಡಿದಲ್ಲಿ ಶಿವಮೊಗ್ಗ ಕ್ಷೇತ್ರದ ಅಭಿವೃದ್ಧಿ ವೇಗಗತಿಯಲ್ಲಿ ಸಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಪತ್ರಕರ್ತ ಕೃಷ್ಣ ಬನಾರಿ ಮಾತನಾಡಿ, ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿ ಸ್ಥಳೀಯ ಉತ್ಪನ್ನಗಳಿಗೆ ಪೂರಕವಾದ ಆಹಾರ ಮೌಲ್ಯವರ್ಧಿತ ಕೈಗಾರಿಕೆಗಳಿಗೆ ಆದ್ಯತೆ ನೀಡಿದಲ್ಲಿ ಸ್ಥಳೀಯರಿಗೆ ಪ್ರೋತ್ಸಾಹ, ಉದ್ಯೋಗ ಸೃಷ್ಠಿ ಸೇರಿದಂತೆ ಜಿಲ್ಲಾ ಮಟ್ಟದಲ್ಲಿ ಆರ್ಥಿಕತೆ ಹೆಚ್ಚಿಸಲು ಸಹಕಾರಿಯಾಗುತ್ತದೆ ಎಂದರು. ಪತ್ರಕರ್ತರಾದ ರವಿಕುಮಾರ್, ಅರವಿಂದ ಅಕ್ಲಾಪುರ, ಗುರುರಾಜ್ ಸೇರಿದಂತೆ ಇತರ ಪತ್ರಕರ್ತರು ಅಭಿಪ್ರಾಯ ವ್ಯಕ್ತಪಡಿಸಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಪ್ರತಿಕ್ರಿಯಿಸಿ, ಎಲ್ಲ ಸಂಗತಿಗಳ ಒಟ್ಟುಗೂಡಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಮಟ್ಟದಲ್ಲಿ ಮುಂದಿನ 25-30ವರ್ಷಗಳಲ್ಲಿ ಆಗಬೇಕಿರುವ ಯೋಜನೆಗಳ ಶಿವಮೊಗ್ಗ ವಿಷನ್ 2050 ವರದಿಯನ್ನು ಅನುಷ್ಠಾನಗೊಳಿಸುವಂತೆ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಶಿವಮೊಗ್ಗ ವಿಷನ್ 2050 ಸಂಬಂಧಿಸಿ ಶಿವಮೊಗ್ಗ ಜಿಲ್ಲೆಯ ಜನರು ಹಾಗೂ ವಿವಿಧ ಕ್ಷೇತ್ರಗಳ ಪರಿಣತರು ತಮ್ಮ ಕ್ಷೇತ್ರಗಳಲ್ಲಿ ಆಗಬೇಕಿರುವ ಪರಿಕಲ್ಪನೆಯನ್ನು [email protected] ವಿಳಾಸಕ್ಕೆ ಕಳುಹಿಸಿಕೊಡಬೇಕು. ಆಯ್ದ ವಿಜೇತ ಪರಿಕಲ್ಪನೆಯ ಸೂಕ್ತ ಲೇಖನಗಳಿಗೆ ನಗದು ಬಹುಮಾನ ನೀಡಲಾಗುತ್ತದೆ ಎಂದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಕಾರ್ಯದರ್ಶಿ ವಸಂತ ಹೋಬಳಿದಾರ್, ನಿರ್ದೇಶಕರಾದ ಪ್ರದೀಪ್ ಯಲಿ, ಮರಿಸ್ವಾಮಿ, ರಮೇಶ್ ಹೆಗ್ಡೆ ಉಪಸ್ಥಿತರಿದ್ದರು.

digimalenadu

ಶಿವಮೊಗ್ಗ
error: Content is protected !!