ಕ್ಯಾನ್ಸರ್ ಕುರಿತು ಸಕಾಲದಲ್ಲಿ ತಪಾಸಣೆ ಅಗತ್ಯ
ಶಿವಮೊಗ್ಗ | 22 ನವೆಂಬರ್ 2022 | ಡಿಜಿ ಮಲೆನಾಡು.ಕಾಂ
ಇತ್ತಿಚೀನ ದಿನಗಳಲ್ಲಿ ಯುವತಿಯರಲ್ಲಿ ಅತಿ ಹೆಚ್ಚು ಕಾಣುತ್ತಿರುವ ಸ್ತನದ ಕ್ಯಾನ್ಸರ್ ಬಗ್ಗೆ ಸಕಾಲದಲ್ಲಿ ತಪಾಸಣೆ ಒಳಪಟ್ಟರೆ ಪ್ರಾರಂಭಿಕ ಹಂತದಲ್ಲಿ ಗುಣಪಡಿಸಬಹುದು ಹಾಗೂ ಕಾಯಿಲೆಯಿಂದ ದೂರವಿರಬಹುದು ಎಂದು ವೈದ್ಯೆ ಡಾ. ಕೌಸ್ತುಭ ಅರುಣ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu
ರಾಜೇಂದ್ರನಗರದ ರೋಟರಿ ಶಾಲೆಯ ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ, ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ವತಿಯಿಂದ ಮಹಿಳೆಯರು, ಶಿಕ್ಷಕಿಯರು ಹಾಗೂ ಸಾರ್ವಜನಿಕರಿಗೆ ಆಯೋಜಿಸಿದ್ದ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸ್ತನ ಕ್ಯಾನ್ಸರ್ ಕಾಯಿಲೆಗೆ ಮುಖ್ಯವಾಗಿ ಸರಿಯಾದ ಜೀವನಶೈಲಿ ಪಾಲಿಸದೇ ಇರುವುದು, ದೈಹಿಕ ಚಟುವಟಿಕೆ ಇಲ್ಲದಿರುವುದು, ಮಕ್ಕಳಿಗೆ ತಾಯಿಯ ಎದೆ ಹಾಲು ಉಣಿಸಲು ವಂಚಿಸುವುದು ಪ್ರಮುಖ ಕಾರಣವಾಗಿದೆ. ಆದ್ದರಿಂದ ಮಹಿಳೆಯರು ಪ್ರತಿ ಮೂರು ತಿಂಗಳಿಗೊಮ್ಮೆ ತಪಾಸಣೆ ಮಾಡಿಸಿಕೊಳ್ಳಬೇಕು. ಆರೋಗ್ಯ ತಪಾಸಣೆಯಲ್ಲಿ ಕ್ಯಾನ್ಸರ್ ರೋಗ ಲಕ್ಷಣ ಕಂಡುಬಂದರೆ ಮೆಮೊಗ್ರಾಫಿ ಮಾಡಿಸುವುದು ಒಳ್ಳೆಯದು ಎಂದು ತಿಳಿಸಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಸುಮತಿ ಕುಮಾರಸ್ವಾಮಿ ಮಾತನಾಡಿ, ಮಹಿಳೆಯರು ಆರೋಗ್ಯದ ಬಗ್ಗೆ ಗಮನ ಹರಿಸಬೇಕು. ರೋಗ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ತಪಾಸಣೆ ನಡೆಸಿ ವೈದ್ಯರ ಸಲಹೆ ಪಡೆಯಬೇಕು. ಮುಂದಿನ ದಿನಗಳಲ್ಲಿ ಮಹಿಳಾ ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ ಆರೋಗ್ಯ ಜಾಗೃತಿ ಶಿಬಿರ ನಡೆಸಲಾಗುವುದು ಎಂದರು.
ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಮಧುರಾ ಮಹೇಶ್, ಮಾಜಿ ಅಧ್ಯಕ್ಷೆ ಬಿಂದು ವಿಜಯ್‌ಕುಮಾರ್, ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕುಮಾರಸ್ವಾಮಿ, ಡಾ. ಅರುಣ್, ನಾಗವೇಣಿ, ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್, ಕೇಶವಪ್ಪ ಉಪಸ್ಥಿತರಿದ್ದರು.