ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಡಿಸೆಂಬರ್‌ 17, 18ಕ್ಕೆ

ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಡಿಸೆಂಬರ್‌ 17, 18ಕ್ಕೆ

ಶಿವಮೊಗ್ಗ | 1 ಡಿಸೆಂಬರ್ 2022 | ಡಿಜಿ ಮಲೆನಾಡು.ಕಾಂ

ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಡಿಸೆಂಬರ್‌ 17 ಮತ್ತು 18ರಂದು ಶಿವಮೊಗ್ಗ ನಗರದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕ್ರೀಡಾಕೂಟದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಲು ಆಸಕ್ತ ಎಲ್ಲ ನೌಕರರಿಗೂ ಅವಕಾಶ ದೊರೆಯಲಿದೆ ಎಂದು ತಿಳಿಸಿದರು.

ಕ್ರೀಡಾಕೂಟದಲ್ಲಿ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಗುಂಪು ಮತ್ತು ವೈಯಕ್ತಿಕ ಸ್ಪರ್ಧೆಗಳನ್ನು ನಡೆಸಲಾಗುವುದು. ಕ್ರೀಡೆಯಲ್ಲಿ ವಿಜೇತರಾದ ಹಾಗೂ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳನ್ನು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದರು.

ಕ್ರೀಡಾಕೂಟದಲ್ಲಿ ಭಾಗವಹಿಸುವ 3,000ಕ್ಕೂ ಹೆಚ್ಚಿನ ಸ್ಪರ್ಧಾಳುಗಳಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗುವುದು. ಆಟೋಟ, ಊಟೋಪಹಾರ, ವೇದಿಕೆ ನಿರ್ವಹಣೆ, ಮೇಲುಸ್ತುವಾರಿ, ಸ್ವಾಗತ ಸಮಿತಿಗಾಗಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ನೌಕರರ ಸಂಘದ ಪದಾಧಿಕಾರಿಗಳನ್ನು ಒಳಗೊಂಡ ಹಲವು ಸಮಿತಿಗಳನ್ನು ಎಂದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಶಿವಮೊಗ್ಗ ನಗರದ ಕುವೆಂಪು ರಂಗಮಂದಿರ, ಬಿ.ಆರ್.ಅಂಬೇಡ್ಕರ್‌ ಭವನ, ನೌಕರರ ಸಂಘ, ನೆಹರೂ ಕ್ರೀಡಾಂಗಣ, ಎನ್.ಇ.ಎಸ್.ಮೈದಾನ ಸೇರಿ ವಿವಿಧ ವೇದಿಕೆ ಹಾಗೂ ಮೈದಾನಗಳಲ್ಲಿ ನಡೆಯಲಿವೆ. ಎರಡು ದಿನಗಳ ಕಾಲ ನಡೆಯಲಿರುವ ಕ್ರೀಡಾಕೂಟದ ಪ್ರತಿದಿನ ಸಂಜೆ ಕಲಾವಿದರನ್ನು ಆಹ್ವಾನಿಸಿ ರಸಸಂಜೆ ಹಾಗೂ ಮನೋರಂಜನೆ ಕಾರ್ಯಕ್ರಮ ಏರ್ಪಡಿಸಲಾಗುವುದು ಎಂದು ತಿಳಿಸಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಜಿಪಂ ಸಿಇಒ ಎನ್.ಡಿ.ಪ್ರಕಾಶ್, ಮಹಾನಗರ‌ ಪಾಲಿಕೆ ಆಯುಕ್ತ ಮಾಯಣ್ಣಗೌಡ, ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಡಿಎಚ್‌ಒ ಡಾ. ರಾಜೇಶ್ ಸುರಗೀಹಳ್ಳಿ, ಡಿಡಿಪಿಯು ಕೃಷ್ಣಪ್ಪ, ಆರ್.ಮೋಹನ್‍ಕುಮಾರ್, ಬಿ.ಸಿದ್ಧಬಸಪ್ಪ, ಮಲ್ಲಿಕಾರ್ಜುನ್, ಕೃಷ್ಣಮೂರ್ತಿ, ಅರುಣ್‍ಕುಮಾರ್, ನರಸಿಂಹಮೂರ್ತಿ ಸೇರಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

digimalenadu

ಶಿವಮೊಗ್ಗ
error: Content is protected !!