ಜೆ ಎನ್ ಎನ್ ಸಿ ಇ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ
ಶಿವಮೊಗ್ಗ | 2 ಡಿಸೆಂಬರ್ 2022 | ಡಿಜಿ ಮಲೆನಾಡು.ಕಾಂ
ಎಂಜಿನಿಯರಿಂಗ್ ಪದವಿಯ ವಿವಿಧ ವಿಭಾಗಗಳಿಗೆ ನೂತನ ಪ್ರವೇಶಾತಿ ಪಡೆದಿರುವ ಪ್ರಥಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಡಿಸೆಂಬರ್ 3 ರ ಶನಿವಾರ ಬೆಳಗ್ಗೆ 10ಕ್ಕೆ ಜೆ ಎನ್ ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮಾರ್ಗದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu
ಇಸ್ರೋ ಸಂಸ್ಥೆಯ ಸಂವಹನ ಮತ್ತು ನಿಯಂತ್ರಣಾ ಕೇಂದ್ರದ ಉಪ ನಿರ್ದೇಶಕಿ ಕೆ.ಎಲ್.ಶಿವಾನಿ ಕಾರ್ಯಕ್ರಮ ಉದ್ಘಾಟಿಸುವರು. ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್, ಉಪಾಧ್ಯಕ್ಷ ಸಿ.ಆರ್.ನಾಗರಾಜ, ಕಾರ್ಯದರ್ಶಿ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ಖಜಾಂಚಿ ಡಿ.ಜಿ.ರಮೇಶ್ ಪಾಲ್ಗೊಳ್ಳುವರು. ಜೆ ಎನ್ ಎನ್ ಸಿ ಇ ಪ್ರಾಚಾರ್ಯ ಡಾ. ಕೆ.ನಾಗೇಂದ್ರಪ್ರಸಾದ್ ಅಧ್ಯಕ್ಷತೆ ವಹಿಸುವರು. ಶೈಕ್ಷಣಿಕ ಡೀನ್ ಡಾ. ಪಿ.ಮಂಜುನಾಥ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿರುವರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ನಾಲ್ಕು ವರ್ಷಗಳ ಎಂಜಿನಿಯರಿಂಗ್ ವ್ಯಾಸಂಗದ ಮುಂದಣ ಹೆಜ್ಜೆ, ಎಂಜಿನಿಯರಿಂಗ್ ವಿಭಾಗಗಳ ಪರಿಚಯ, ವಿಶ್ವವಿದ್ಯಾಲಯ ಮಾರ್ಗಸೂಚಿ, ವಿವಿಧ ಮೂಲ ಸೌಲಭ್ಯಗಳ ಕುರಿತಾಗಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಲಿದ್ದಾರೆ. ಪ್ರಥಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ.