ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದ ವಿವಿಧ ಸಾಲ ಹಾಗೂ ಸಹಾಯಧನ ಸೌಲಭ್ಯ ಯೋಜನೆಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 15ರವರೆಗೆ ಅವಕಾಶ
ಶಿವಮೊಗ್ಗ | 2 ಡಿಸೆಂಬರ್ 2022 | ಡಿಜಿ ಮಲೆನಾಡು.ಕಾಂ
ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದ “ಬಸವ ಬೆಳಗು, ವಿದೇಶ ವಿದ್ಯಾವಿಕಾಸ, ಜೀವಜಲ, ಸ್ವಸಹಾಯ ಸಂಘಗಳಿಗೆ ಉತ್ತೇಜನ ಮತ್ತು ಕಾಯಕ ಕಿರಣ” ಯೋಜನೆಗಳಡಿ ವಿವಿಧ ಸಾಲ ಹಾಗೂ ಸಹಾಯಧನ ಸೌಲಭ್ಯ ಪಡೆಯುವ ಆಸಕ್ತರು ಅರ್ಜಿ ಸಲ್ಲಿಸಲು ಡಿಸೆಂಬರ್ 15ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu
ವೀರಶೈವ ಲಿಂಗಾಯತ ಸಮುದಾಯದ ಜನರಿಂದ ವಿವಿಧ ಸಾಲ ಯೋಜನೆಯಡಿ ಸೌಲಭ್ಯ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನಿಸಿ ಅರ್ಜಿ ಸಲ್ಲಿಕೆ ಅವಧಿಯನ್ನು ನವೆಂಬರ್ 30 ರವರೆಗೆ ನಿಗಧಿಪಡಿಸಲಾಗಿತ್ತು. ಇದೀಗ ಆನ್‍ಲೈನ್ ಅರ್ಜಿ ಸಲ್ಲಿಸಲು ಡಿಸೆಂಬರ್ 15 ರವರೆಗೆ ಅವಕಾಶ ನೀಡಲಾಗಿದೆ.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಮಾಹಿತಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮ ನಿಯಮಿತದ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ: 08022865522 ಅಥವಾ ಆಯಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಶಿವಮೊಗ್ಗದ ಜನತೆ ಡಿ.ದೇವರಾಜ ಅರಸು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಭಾಗ್ಯ ನಿಲಯ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ ದೂ.ಸಂ: 08182229634, ವೆಬ್‍ಸೈಟ್ https://kvldcl.karnataka.gov.in ವೀಕ್ಷಿಸಿ ಮಾಹಿತಿ ಪಡೆಯಬಹುದಾಗಿದೆ.