ಡಾ. ಧನಂಜಯ ಸರ್ಜಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ಡಿಸೆಂಬರ್ 4ಕ್ಕೆ

ಡಾ. ಧನಂಜಯ ಸರ್ಜಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ಡಿಸೆಂಬರ್ 4ಕ್ಕೆ

ಶಿವಮೊಗ್ಗ | 3 ಡಿಸೆಂಬರ್ 2022 | ಡಿಜಿ ಮಲೆನಾಡು.ಕಾಂ

ಮಕ್ಕಳ ತಜ್ಞ, ಸರ್ಜಿ ಫೌಂಡೇಷನ್‌ ವ್ಯವಸ್ಥಾಪಕ ನಿರ್ದೇಶಕ ಡಾ. ಧನಂಜಯ ಸರ್ಜಿ ಭಾನುವಾರ ಡಿಸೆಂಬರ್‌ 4ರಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಶಿವಮೊಗ್ಗ ನಗರದ ಬಿಜೆಪಿ ಕಚೇರಿಯಲ್ಲಿ ಪಕ್ಷದ ಹಿರಿಯ ಮುಖಂಡರ ಸಮ್ಮುಖದಲ್ಲಿ ಸರ್ಜಿ ಬಿಜೆಪಿ ಪಕ್ಷಕ್ಕೆ ಸೇರಲಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದ ಡಾ. ಧನಂಜಯ ಸರ್ಜಿ ಇತ್ತೀಚಿನ ದಿನಗಳಲ್ಲಿ ಹೆಚ್ಚು ಸಕ್ರಿಯರಾಗಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದರು. ಜನಪರ ಜೀವಪರ ಘೋಷಣೆಯೊಂದಿಗೆ ಹೆಚ್ಚು ಸಕ್ರಿಯರಾಗಿದ್ದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಬಿಜೆಪಿ ಅಥವಾ ಕಾಂಗ್ರೆಸ್‌ ಪಕ್ಷದಿಂದ ಅಥವಾ ಸ್ವತಂತ್ರ ಅಭ್ಯರ್ಥಿಯಾಗಿ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ತಯಾರಿಯಲ್ಲಿದ್ದರು ಎನ್ನಲಾಗಿತ್ತು. ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಇದರಿಂದ ಚುನಾವಣೆ ಸ್ಪರ್ಧೆ ವಿಚಾರ ಪಕ್ಷವೇ ತೀರ್ಮಾನಿಸಬೇಕಿದೆ. ಮುಂದಿನ ದಿನಗಳಲ್ಲಿ ಪಕ್ಷದ ತೀರ್ಮಾನದಂತೆ ರಾಜಕೀಯ ಕ್ಷೇತ್ರದಲ್ಲಿ ಮುಂದುವರೆಯಲಿದ್ದಾರೆ ಎನ್ನಲಾಗಿದೆ.

ಡಾ. ಧನಂಜಯ ಸರ್ಜಿ ಅನೇಕ ವರ್ಷಗಳಿಂದ ವೈದ್ಯಕೀಯ ಮತ್ತು ಸೇವಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಸಮಾಜಮುಖಿ ಚಟುವಟಿಕೆಗಳಿಂದಲೇ ಎಲ್ಲರಿಗೂ ಚಿರಪರಿಚಿತರು ಸರ್ಜಿ. ಭಾನುವಾರ ಬೆಳಗ್ಗೆ 9ಕ್ಕೆ ಬಿಜೆಪಿ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಬಿಜೆಪಿಗೆ ಸೇರಲಿದ್ದಾರೆ. ಬಿಜೆಪಿ ಪಕ್ಷದ ಹಿರಿಯ ಮುಖಂಡರು ಪಾಲ್ಗೊಳ್ಳಲಿದ್ದಾರೆ.

digimalenadu

ಶಿವಮೊಗ್ಗ
error: Content is protected !!