ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಸೌಲಭ್ಯ, ಹಸು ಎಮ್ಮೆ ಮತ್ತು ಕುರಿ ಮೇಕೆ ಘಟಕ ಅನುಷ್ಠಾನ, ಅರ್ಹರಿಂದ ಅರ್ಜಿ ಆಹ್ವಾನ
ಶಿವಮೊಗ್ಗ | 5 ಡಿಸೆಂಬರ್ 2022 | ಡಿಜಿ ಮಲೆನಾಡು.ಕಾಂ
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2022-23 ನೇ ಸಾಲಿನ ಹಾಲು ಉತ್ಪಾದಕರಿಗೆ ಉತ್ತೇಜನ ಕಾರ್ಯಕ್ರಮದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಉಳಿಕೆ ಅನುದಾನದಲ್ಲಿ ಒಂದು ಮಿಶ್ರತಳಿ ಹಸು ಅಥವಾ ಸುಧಾರಿತ ತಳಿ ಎಮ್ಮೆ ಘಟಕ ಮತ್ತು ಕುರಿ ಅಥವಾ ಮೇಕೆ ಘಟಕ ಅನುಷ್ಠಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu
ಒಂದು ಮಿಶ್ರ ತಳಿ ಹಸು, ಸುಧಾರಿತ ತಳಿ ಎಮ್ಮೆ ಘಟಕದಲ್ಲಿ 01 ಮಿಶ್ರ ತಳಿ ಹಸು ಅಥವಾ 01 ಸುಧಾರಿತ ತಳಿ ಎಮ್ಮೆ ವಿತರಿಸಲಾಗುವುದು. ಈ ಘಟಕದ ವೆಚ್ಚ 60,000 ರೂ. ಇದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ (ಶೇ.90), 54,000 ರೂ. ಸಹಾಯಧನ ಹಾಗೂ (ಶೇ.10), 6000 ರೂ. ಬ್ಯಾಂಕ್ ನಿಂದ ಸಾಲದೊಂದಿಗೆ ಅನುಷ್ಠಾನಗೊಳಿಸಲಾಗುವುದು.
10+1 ಕುರಿ, ಮೇಕೆ ಘಟಕದಲ್ಲಿ 10 ಕುರಿ ಅಥವಾ ಮೇಕೆ ಮತ್ತು 01 ಟಗರು ಅಥವಾ 01 ಹೋತ ವಿತರಿಸಲಾಗುವುದು. ಈ ಘಟಕದ ವೆಚ್ಚ 66,000 ರೂ. ಆಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ (ಶೇ.90), 59400 ರೂ. ಸಹಾಯಧನ ಹಾಗೂ (ಶೇ.10), 6600 ರೂ. ಬ್ಯಾಂಕ್ ನಿಂದ ಸಾಲದೊಂದಿಗೆ ಅನುಷ್ಠಾನ ಗೊಳಿಸಲಾಗುವುದು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತು ಪಶುಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತರನ್ನು ಆಯ್ಕೆ ಮಾಡಲಾಗುವುದು. ಸರ್ಕಾರದ ನಿಯಮದಂತೆ ಮಹಿಳೆಯರಿಗೆ ಶೇ.33.3 ರಷ್ಟು ಮತ್ತು ವಿಶೇಷ ಚೇತನರಿಗೆ ಶೇ. 3 ರಷ್ಟು ಆದ್ಯತೆ ನೀಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳು ಆರ್.ಡಿ ಸಂಖ್ಯೆ ಇರುವ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು. ಅರ್ಜಿದಾರರು ಫ್ರೂಟ್ಸ್ ಐಡಿ (ಗುರುತಿನ ಸಂಖ್ಯೆ) ಹೊಂದಿರಬೇಕು. ವಿಶೇಷ ಚೇತನರಾಗಿದ್ದಲ್ಲಿ ಪ್ರಮಾಣ ಪತ್ರ ಹೊಂದಿರಬೇಕು.
ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನವಾಗಿದೆ. ಅರ್ಜಿಗಳಿಗೆ ಮತ್ತು ಮಾಹಿತಿಗಾಗಿ ತಾಲ್ಲೂಕುಗಳ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ), ಕಛೇರಿಗಳಿಗೆ ಸಂಪರ್ಕಿಸಲು ಮತ್ತು ಸಂಬಂಧಪಟ್ಟ ವಿಧಾನಸಭಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯ ಸಮಿತಿಯಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಜಿಲ್ಲೆಯ ಅರ್ಹ ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಶಿವಮೊಗ್ಗದ ಉಪನಿರ್ದೇಶಕ ಡಾ. ಶಿವಯೋಗಿ ಯಲಿ ತಿಳಿಸಿದ್ದಾರೆ.