ಪ್ರತಿಭೆಗಳ ಅನಾವರಣಕ್ಕೆ ಯುವಜನೋತ್ಸವ ಉತ್ತಮ ವೇದಿಕೆ

ಪ್ರತಿಭೆಗಳ ಅನಾವರಣಕ್ಕೆ ಯುವಜನೋತ್ಸವ ಉತ್ತಮ ವೇದಿಕೆ

ಶಿವಮೊಗ್ಗ | 7 ಡಿಸೆಂಬರ್ 2022 | ಡಿಜಿ ಮಲೆನಾಡು.ಕಾಂ

ಯುವ ಜನತೆಯಲ್ಲಿನ ಪ್ರತಿಭೆ ಕಲ್ಪನೆಗೂ ಮೀರಿದ್ದು, ಪ್ರತಿಭೆಗಳನ್ನು ಅನಾವರಣಗೊಳಿಸಲು ಯುವಜನೋತ್ಸವ ಉತ್ತಮ ವೇದಿಕೆಯಾಗಿದೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು.

ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನಿಸರ್ಗ ಮಹಿಳಾ ಮಂಡಳಿ ಶಿವಮೊಗ್ಗ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ಗ್ರಾಮೀಣ, ನಗರ ಪ್ರದೇಶದ ಯುವ ಜನತೆಯ ಪ್ರತಿಭೆ ಅಸಾಮಾನ್ಯವಾಗಿದೆ. ಪ್ರತಿಭೆ ಪ್ರದರ್ಶನಕ್ಕೆ ಸರ್ಕಾರ ಯುವಜನೋತ್ಸವ ವ್ಯವಸ್ಥೆ ಮಾಡಿದೆ. ಶಾಲಾ ಕಾಲೇಜುಗಳಲ್ಲಿ ಓದಿನ ಕಡೆಗೆ ಹೆಚ್ಚಿನ ಗಮನ ಇರುತ್ತದೆ. ಓದಿನೊಂದಿಗೆ ಪ್ರತಿಭೆಗೂ ಸಹ ಮಹತ್ವ ನೀಡಬೇಕು. ಆದ್ದರಿಂದ ಸರ್ಕಾರ ಯುವ ಜನೋತ್ಸವದ ವ್ಯವಸ್ಥೆ ಮಾಡಿದೆ ಎಂದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ ಸ್ವಾಮಿ ಮಾತನಾಡಿ, ಯುವಜನೋತ್ಸವಕ್ಕೆ 400 ಜನ ಸ್ಪರ್ಧಿಗಳು ನೋಂದಾಯಿಸಿಕೊಂಡಿದ್ದು, ಆಶುಭಾಷಣ, ಏಕಪಾತ್ರಭಿನಯ, ಶಾಸ್ತ್ರೀಯ ನೃತ್ಯ, ಸಂಗೀತ, ವಾದ್ಯ, ಜಾನಪದ ಗೀತಿ, ನೃತ್ಯ ಸೇರಿ 16 ಸ್ಪರ್ಧೆಗಳು ನಡೆಯಲಿವೆ. ಪ್ರಥಮ ಸ್ಥಾನ ಪಡೆದವರು ನೇರವಾಗಿ ಚಿತ್ರದುರ್ಗಗದಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗಳಿಗೆ ಆಯ್ಕೆಯಾಗುತ್ತಾರೆ. ರಾಜ್ಯ ಮಟ್ಟದಲ್ಲಿ ಆಯ್ಕೆಯಾದವರು ಮಹಾರಾಷ್ಟ್ರದ ಪೂನಾದಲ್ಲಿ ನಡೆಯುವ ರಾಷ್ಟ್ರಮಟ್ಟದ ಯುವಜನೋತ್ಸವದಲ್ಲಿ ಪಾಲ್ಗೊಳ್ಳುವರು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಹಾಲಾಡಿ, ತೀರ್ಪುಗಾರರು ಉಪಸ್ಥಿತರಿದ್ದರು.

digimalenadu

ಶಿವಮೊಗ್ಗ
error: Content is protected !!