ಕಾನೂನು ಪದವಿ ನಂತರವು ವಿದ್ಯಾರ್ಥಿಗಳು ಅಧ್ಯಯನ ಮುಂದುವರೆಸಬೇಕು
ಶಿವಮೊಗ್ಗ | 10 ಡಿಸೆಂಬರ್ 2022 | ಡಿಜಿ ಮಲೆನಾಡು.ಕಾಂ
ನ್ಯಾಯಾಧೀಶರಿಗಿಂತ ವಕೀಲರ ಜವಾಬ್ದಾರಿ ಹೆಚ್ಚು. ಕಾನೂನು ವಿದ್ಯಾರ್ಥಿಗಳು ಪದವಿ ನಂತರ ಅಧ್ಯಯನಶೀಲತೆ ಮುಂದುವರೆಸಬೇಕು ಎಂದು ಕರ್ನಾಟಕ ಉಚ್ಚ ನ್ಯಾಯಾಲಯ ನ್ಯಾಯಾಧೀಶ ಜಸ್ಟಿಸ್ ಕೃಷ್ಣಾ ಎಸ್.ದೀಕ್ಷಿತ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu
ಕುವೆಂಪು ರಂಗಮಂದಿರದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಅಮೃತ ಮಹೋತ್ಸವ ಉಪನ್ಯಾಸ ಸರಣಿಯ ಆರನೇ ಮಾಲಿಕೆ ಹಾಗೂ ಸಿ.ಭೀಮಸೇನರಾವ್ ರಾಷ್ಟ್ರೀಯ ಕಾನೂನು ಮಹಾವಿದ್ಯಾಲಯ ಘಟಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದೇಶದ ಭವಿಷ್ಯವನ್ನು ನಿರ್ಮಾಣ ಮಾಡುವಲ್ಲಿ ವಕೀಲರ ಪಾತ್ರದ ಮಹತ್ವವನ್ನು ಕುರಿತು ಸಮಾಜ ಒಪ್ಪಿಕೊಂಡಿದೆ. ಸಂವಿಧಾನದ ರೂಪರೇಷೆ ಉಳಿಸಿಕೊಳ್ಳುವಲ್ಲಿ ನ್ಯಾಯಾಧೀಶರು, ವಕೀಲರು, ಕಕ್ಷಿದಾರರು ಮುಖ್ಯ ಕಾರಣ. ವಕೀಲಿ ವೃತ್ತಿ ಸಂವಿಧಾನದಲ್ಲಿಯೇ ಉಲ್ಲೇಖವಾಗಿರುವ ವೃತ್ತಿ ಎಂದು ತಿಳಿಸಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಮಾನವ ಹಕ್ಕುಗಳ ಕುರಿತು ಮಾಜಿ ಅಡ್ವೋಕೇಟ್ ಜನರಲ್ ಅಶೋಕ ಹಾರನಹಳ್ಳಿ ಮಾತನಾಡಿ, ಮಾನವ ಹಕ್ಕುಗಳು ನಮ್ಮ ಸಂವಿಧಾನದಲ್ಲಿ ಪ್ರಬಲವಾಗಿ ಅಡಕವಾಗಿದೆ. ಮನುಷ್ಯನಿಗೆ ವಿಶೇಷವಾಗಿ ಹುಟ್ಟಿನಿಂದಲೇ ಆಲೋಚಿಸುವ, ಹಕ್ಕುಗಳನ್ನು ಮಂಡನೆ ಮಾಡುವ ಶಕ್ತಿಯಿದೆ. ಮುಕ್ತವಾಗಿ ಹೆಣ್ಣು ಮತ್ತು ಗಂಡಿಗೆ ಭಾರತ ಸಮಾನವಾದ ಹಕ್ಕು ನೀಡಿದೆ ಎಂದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ಖಜಾಂಚಿ ಡಿ.ಜಿ.ರಮೇಶ್, ಪ್ರಾಚಾರ್ಯ ಡಾ.ಜಗದೀಶ್ ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
|| ಇದನ್ನೂ ಓದಿ || ಏಕದಿನ ಪಂದ್ಯದಲ್ಲಿ ತ್ರಿಶತಕ ರನ್ ಗಳಿಸುವ ಅವಕಾಶ ನನಗಿತ್ತು, ವೇಗದ ದ್ವಿಶತಕ ಬಾರಿಸಿದ ಇಶಾನ್ ಕಿಶನ್ https://digimalenadu.com/2022/12/ishan-kishan-double-hundred-in-odi/
|| ಇದನ್ನೂ ಓದಿ || ಶಿವಮೊಗ್ಗ ನಗರ ಹೇಗಿದೆ ?, ಸಾರ್ವಜನಿಕ ಭಾಗವಹಿಸುವಿಕೆ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಳ್ಳಿ, ನಿಮ್ಮ ಅಭಿಪ್ರಾಯ ದಾಖಲಿಸಿ https://digimalenadu.com/2022/12/shivamogga-city-public-opinion-survey/
|| ಇದನ್ನೂ ಓದಿ || ಭಾರತೀಯ ವೈದ್ಯಕೀಯ ಸಂಘದ ಶಿವಮೊಗ್ಗ ಶಾಖೆಯು ಕರ್ನಾಟಕ ರಾಜ್ಯದ ಪ್ರತಿಷ್ಠಿತ ಶಾಖೆಯಾಗಿ ಕಾರ್ಯ, ಶಿವಮೊಗ್ಗ ಶಾಖೆಯ ಚಟುವಟಿಕೆಗಳ ಬಗ್ಗೆ ಶ್ಲಾಘನೆ https://digimalenadu.com/2022/12/ima-shivamogga-news-state-president-visit/
|| ಇದನ್ನೂ ಓದಿ || ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಉದ್ಯೋಗ ಮೇಳ ಡಿಸೆಂಬರ್ 13ಕ್ಕೆ https://digimalenadu.com/2022/12/udyoga-mela-at-sahyadri-college-december-13/