ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಪ್ರತಿಭಾ ಕಾರಂಜಿ, 2023ರ ಜನವರಿ 7ರಿಂದ ಮೂರು ದಿನ ವೈವಿಧ್ಯಮಯ ಸ್ಪರ್ಧೆ

ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಪ್ರತಿಭಾ ಕಾರಂಜಿ, 2023ರ ಜನವರಿ 7ರಿಂದ ಮೂರು ದಿನ ವೈವಿಧ್ಯಮಯ ಸ್ಪರ್ಧೆ

ಶಿವಮೊಗ್ಗ | 12 ಡಿಸೆಂಬರ್ 2022 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ 2023ರ ಜನವರಿ 7, 8 ಮತ್ತು 9ರಂದು ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರತಿಭಾ ಕಾರಂಜಿ ಲಾಂಛನ ಹಾಗೂ ಜಾಲತಾಣ ಲೋಕಾರ್ಪಣೆಗೊಳಿಸಿ ಮಾತನಾಡಿ, ಶಾಲಾ ವಿದ್ಯಾರ್ಥಿಗಳ ಕಲಾತ್ಮಕ ಪ್ರತಿಭೆ, ಸೃಜನಾತ್ಮಕ ಕೌಶಲ್ಯಗಳನ್ನು ಹೊರತರಲು ಉತ್ತಮ ವೇದಿಕೆ ಆಗಿದೆ ಎಂದು ತಿಳಿಸಿದರು.

ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳಲ್ಲಿ ನಡೆಸಿದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದಲ್ಲಿ ಸ್ಥಾನ ಪಡೆದ 1375ಕ್ಕೂ ಹೆಚ್ಚಿನ ಪ್ರತಿಭಾವಂತ ವಿದ್ಯಾರ್ಥಿಗಳು ವಿವಿಧ ರೀತಿಯ 23 ವೈಯಕ್ತಿಕ ವಿಭಾಗಗಳಲ್ಲಿ ಹಾಗೂ 3 ಸಾಮೂಹಿಕ ವಿಭಾಗದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಥಮ ಸ್ಥಾನ 6,000 ರೂ., ದ್ವಿತೀಯ ಸ್ಥಾನ 4,000 ರೂ. ಹಾಗೂ ತೃತೀಯ ಸ್ಥಾನ 2,000 ರೂ. ನಗದು ಪುರಸ್ಕಾರ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಸಿ.ಆರ್.ಪರಮೇಶ್ವರಪ್ಪ, ಲೋಕೇಶ್ವರಪ್ಪ, ರಾಮಪ್ಪಗೌಡ ಸೇರಿ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

|| ಇದನ್ನೂ ಓದಿ || ಶಿವಮೊಗ್ಗ ನಗರ ಹೇಗಿದೆ ?, ಸಾರ್ವಜನಿಕ ಭಾಗವಹಿಸುವಿಕೆ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಳ್ಳಿ, ನಿಮ್ಮ ಅಭಿಪ್ರಾಯ ದಾಖಲಿಸಿ https://digimalenadu.com/2022/12/shivamogga-city-public-opinion-survey/

digimalenadu

ಶಿವಮೊಗ್ಗ
error: Content is protected !!