ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಲು ಎನ್‌ಪಿಎಸ್ ನೌಕರರ ಆಗ್ರಹ

ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಲು ಎನ್‌ಪಿಎಸ್ ನೌಕರರ ಆಗ್ರಹ

ಶಿವಮೊಗ್ಗ | 14 ಡಿಸೆಂಬರ್ 2022 | ಡಿಜಿ ಮಲೆನಾಡು.ಕಾಂ

ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್‌  ನೌಕರ ಸಂಘದ ತಾಲೂಕು ಘಟಕದ ವತಿಯಿಂದ ಜಾಗೃತಿ ಜಾಥಾ ನಡೆಸಿ ಜಿಲ್ಲಾಧಿಕಾರಿ ಹಾಗೂ ಜನಪ್ರತಿನಿಧಿಗಳಿ ಮನವಿ ಸಲ್ಲಿಸಲಾಯಿತು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ನೂತನ ಪಿಂಚಣಿ ಯೋಜನೆಯು ಅತ್ಯಂತ ಕೆಟ್ಟ ಯೋಜನೆಯಾಗಿದ್ದು, ಸರ್ಕಾರಿ ನೌಕರರ ನಿವೃತ್ತಿ ಜೀವನಕ್ಕೆ ಮಾರಕವಾಗಿದೆ. ನಿವೃತ್ತಿ ಜೀವನದ  ಸಮಯದಲ್ಲಿ ಅತ್ಯಂತ ಕೆಟ್ಟ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಆಳಲು ತೋಡಿಕೊಂಡರು.

ಎನ್‌ಪಿಎಸ್‌  ಕೇಂದ್ರ ಸರ್ಕಾರ ನಿರ್ಧಾರ. ರಾಜ್ಯ ಸರ್ಕಾರಗಳಿಗೆ ಅದನ್ನು ಬದಲಾಯಿಸಲು ಸಾಧ್ಯವಿಲ್ಲ ಎಂಬ ಅಭಿಪ್ರಾಯ ಇತ್ತು. ಆದರೆ 2022ರ ರಾಜ್ಯ ಬಜೆಟ್‌ನಲ್ಲಿ ರಾಜಸ್ತಾನ ಹಾಗೂ ಚತ್ತೀಸ್ ಘಡ, ಜಾರ್ಖಂಡ್ ರಾಜ್ಯ ಸರ್ಕಾರಗಳು ಎನ್‌ಪಿಎಸ್‌  ರದ್ದು ಮಾಡಿ ಆದೇಶಿಸಿವೆ. ಈಗ ಕರ್ನಾಟಕ ರಾಜ್ಯದಲ್ಲಿಯೂ ನೂತನ ಪಿಂಚಣಿ ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆ ಅನುಷ್ಠಾನ ಗೊಳಿಸಬೇಕು ಎಂದು ಆಗ್ರಹಿಸಿದರು.

ನಾಲ್ಕು ಲಕ್ಷ ಎನ್‌ಪಿಎಸ್‌  ನೌಕರರು ಹಾಗೂ ಅವಲಂಬಿತ ಕುಟುಂಬ ಸದಸ್ಯರು ರಾಜ್ಯಮಟ್ಟದಲ್ಲಿ ಡಿಸೆಂಬರ್ 19ರಂದು ಬೃಹತ್ ನಡೆಸಲಿದ್ದೇವೆ. ರಾಜ್ಯ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ನೂತನ ಪಿಂಚಣಿ ಯೋಜನೆ ರದ್ದುಗೊಳಿಸಬೇಕು. ಹಳೇ ಪಿಂಚಣಿ ಯೋಜನೆಯನ್ನು ಅನುಷ್ಠಾನ ಮಾಡಲು ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ಶಿವಮೊಗ್ಗ ಮಹಾನಗರ ಪಾಲಿಕೆ ಆವರಣದಲ್ಲಿ ಮೇಯರ್ ಎಸ್.ಶಿವಕುಮಾರ್ ಅವರು ಹೋರಾಟ ಜಾಥಾಕ್ಕೆ ಚಾಲನೆ ನೀಡಿದರು. ನಂಥರ ಜಿಲ್ಲಾಧಿಕಾರಿ ಕಚೇರಿವರೆಗೂ ಪಾದಾಯಾತ್ರೆ ನಡೆಸಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್‌  ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಎನ್.ರಾಘವೇಂದ್ರ, ತಾಲೂಕು ಅಧ್ಯಕ್ಷ ಎಸ್.ಪ್ರಭಾಕರ್, ತಾಲೂಕು ಗೌರವ ಅಧ್ಯಕ್ಷ ಡಾ. ನಾಗರಾಜ್ ಪರಿಸರ, ಗೋವಿಂದರಾಜು, ಡಾ. ಹಾಲಮ್ಮ, ಶರತ್‌ ಕುಮಾರ್‌, ಕಿರಣ್.ಜಿ.ಜೆ, ವಿಜಯ್‌ ಕುಮಾರ್‌ ಸೇರಿದಂತೆ ವಿವಿಧ ತಾಲೂಕುಗಳಿಂದ ಎನ್‌ಪಿಎಸ್‌  ನೌಕರರು ಆಗಮಿಸಿ ಪ್ರತಿಭಟನೆ ಹಾಗೂ ಜಾಥಾದಲ್ಲಿ ಪಾಲ್ಗೊಂಡಿದ್ದರು.

ಹಳೇ ಪಿಂಚಣಿ ಹೋರಾಟ ಅತ್ಯಂತ ನ್ಯಾಯಸಮ್ಮತ. ವಿಧಾನ ಕಲಾಪದಲ್ಲಿಯು ಧ್ವನಿ ಎತ್ತುವ ಕೆಲಸ ನಾನು ಮಾಡುತ್ತೇನೆ. ನೌಕರರ ಬದುಕನ್ನು ಸಂಕಷ್ಟಕ್ಕೆ ದೂಡುವ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಲು ಸಂಪೂರ್ಣ ಶ್ರಮಿಸುತ್ತೇನೆ. | ಆಯನೂರು ಮಂಜುನಾಥ್, ವಿಧಾನ ಪರಿಷತ್ ಶಾಸಕ

ಬೆಂಗಳೂರಿನಲ್ಲಿ ಡಿಸೆಂಬರ್ 19ಕ್ಕೆ ಮಾಡು ಇಲ್ಲವೇ ಮಡಿ ಹೋರಾಟ: ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಡಿಸೆಂಬರ್ 19ರಂದು ಎನ್‌ಪಿಎಸ್‌  ನೌಕರರಿಂದ “ಮಾಡು ಇಲ್ಲವೆ ಮಡಿ” ಹೋರಾಟ ನಡೆಯಲಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಎನ್‌ಪಿಎಸ್‌  ಸಂಘ 2014ರಿಂದ ಹೋರಾಟ ಆರಂಭಿಸಿ ಈವರೆಗೂ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ, ಪೋಸ್ಟ್ ಕಾರ್ಡ್ ಅಭಿಯಾನ, ರಾಷ್ಟ್ರೀಯ ವಿಚಾರ ಸಂಕಿರಣ, ಫ್ರೀಡಂ ಪಾರ್ಕ್ ಚಲೋ, ರಕ್ತ ಕೊಟ್ಟೇವು ಪಿಂಚಣಿ ಬಿಡೆವು, ಪಾರ್ಲಿಮೆಂಟ್ ಚಲೋ, ಬೆಳಗಾವಿ ಚಲೋ, ಪ್ರತಿಭಟನಾ ಜಾಥಾ ಹಾಗೂ ಧರಣಿ ನಡೆಸಿದೆ. ಆದರೂ ನಮ್ಮ ಬೇಡಿಕೆ ಈಡೇರಿಲ್ಲ. ಆದ್ದರಿಂದ ಡಿಸೆಂಬರ್ 19ರಿಂದ ಮಾಡು ಇಲ್ಲವೇ ಮಡಿ ಹೋರಾಟ ನಡೆಯಲಿದೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

|| ಇದನ್ನೂ ಓದಿ || ಶಿವಮೊಗ್ಗ ನಗರ ಹೇಗಿದೆ ?, ಸಾರ್ವಜನಿಕ ಭಾಗವಹಿಸುವಿಕೆ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಳ್ಳಿ, ನಿಮ್ಮ ಅಭಿಪ್ರಾಯ ದಾಖಲಿಸಿ https://digimalenadu.com/2022/12/shivamogga-city-public-opinion-survey/

digimalenadu

ಶಿವಮೊಗ್ಗ
error: Content is protected !!